ಬೆಂಗಳೂರು,ಜ.14– ಆರು ವರ್ಷದ ಬಾಲಕಿ ಮೇಲೆ ಬಿಹಾರದ ಕಾಮುಕ ಯುವಕನೊಬ್ಬ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೊಯ್ಸಳ ನಗರದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದ್ದು, ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡಿಕೊಂಡು ನೇಪಾಳಿ ಕುಟುಂಬ ಇಲ್ಲೇ ನೆಲೆಸಿದೆ.ಸೆಕ್ಯೂರಿಟಿ ಗಾರ್ಡ್ ದಂಪತಿಗೆ 6 ವರ್ಷದ ಮಗಳಿದ್ದಳು. ಆಕೆ ಕಟ್ಟಡದ ಸಮೀಪದಲ್ಲೇ ಆಟವಾಡಿಕೊಂಡಿದ್ದಳು. ನಿನ್ನೆ ಸಂಜೆ ಪೋಷಕರು ಹೊರಗೆ ಹೋಗಿದ್ದರು. ಹಾಗಾಗಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು.
ಈ ಸಮಯವನ್ನು ನೋಡಿಕೊಂಡಿದ್ದ ಆರೋಪಿ ಮನೆಗೆ ನುಗ್ಗಿ ಬಾಲಕಿಯನ್ನು ಪುಸಲಾಯಿಸಿ ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ.ಕಿರುಚದಂತೆ ಬಾಲಕಿಯ ಬಾಯಿಯನ್ನು ಮುಚ್ಚಿದ್ದರಿಂದ ಆಕೆ ಉಸಿರುಗಟ್ಟಿ ನರಳಿ ನರಳಿ ಪ್ರಾಣಬಿಟ್ಟಿದ್ದಾಳೆ.
ಹೊರಗೆ ಹೋಗಿದ್ದ ಪೋಷಕರು ಮನೆಗೆ ಬಂದಾಗ ಮಗಳು ಇಲ್ಲದಿರುವುದನ್ನು ಗಮನಿಸಿ ಕಟ್ಟಡದಲ್ಲಿ ಹುಡುಕಾಡಿದಾಗ ಬಾಲಕಿಯ ಶವ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ದೌಡಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದು ರಾಮಮೂರ್ತಿನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಲಕಿಯ ತಂದೆಯಿಂದ ಮಾಹಿತಿ ಪಡೆದು ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಿ, ಕಾಮುಕನಿಗಾಗಿ ಶೋಧ ಕೈಗೊಂಡು ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಗಾರೆಕೆಲಸಗಾರನನ್ನು ಬಂಧಿಸಿದ್ದಾರೆ.
ಆರೋಪಿ ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಬಂಧಿತ ಗಾರೆ ಕೆಲಸಗಾರ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆಂಬ ವಿಷಯ ತಿಳಿದ ಸ್ಥಳೀಯರು ಆತನನ್ನು ನಮಗೆ ಒಪ್ಪಿಸಿ ಎಂದು ಆಕ್ರೋಶಭರಿತರಾಗಿ ಜಮಾವಣೆಗೊಂಡಾಗ ಅವರನ್ನು ಚದುರಿಸಲು ಪೊಲೀಸರು ಲಘುಲಾಠಿ ಪ್ರಹಾರ ನಡೆಸಿದರು.ನಂತರ ಆರೋಪಿಯನ್ನು ಠಾಣೆಗೆ ಕರೆದೊಯ್ದು ವಿಚಾರಣೆಗೊಳಪಡಿಸಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬಿಹಾರಿಗಳನ್ನು ಮಟ್ಟ ಹಾಕಬೇಕಿದೆ :
ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬರುವ ಬಿಹಾರಿಗಳ ಪೈಕಿ ಕೆಲ ಯುವಕರು ಇತ್ತೀಚೆಗೆ ಅನೇಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಕಂಡುಬರುತ್ತಿದ್ದು, ಅವರನ್ನು ಪೊಲೀಸರು ಮಟ್ಟ ಹಾಕಬೇಕಿದೆ.ಮೊನ್ನೆ ಚಾಮರಾಜಪೇಟೆಯ ವಿನಾಯಕ ನಗರದ ಪೆನ್ಷನ್ ಮೊಹಲ್ಲಾದಲ್ಲಿ ಕರ್ಣ ಎಂಬುವರಿಗೆ ಸೇರಿದ 3 ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಆರೋಪಿ ಶೇಖ್ ನಸ್ರು ಬಿಹಾರಿ.ಈ ಪ್ರಕರಣದಲ್ಲಿ ಪೈಶಾಚಿಕ ಕೃತ್ಯವೆಸಗಿರುವುದು ಬಿಹಾರಿಯೇ.