Friday, July 4, 2025
Homeರಾಜ್ಯಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಹುಂಡಿಯಲ್ಲಿ 61 ಲಕ್ಷ ಕಾಣಿಕೆ ಸಂಗ್ರಹ

ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಹುಂಡಿಯಲ್ಲಿ 61 ಲಕ್ಷ ಕಾಣಿಕೆ ಸಂಗ್ರಹ

61 lakhs of donations collected in Ghati Subrahmanya Swamy Temple hundi

ದೊಡ್ಡಬಳ್ಳಾಪುರ, ಜು.4- ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳದಲ್ಲೊಂದಾದ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಹುಂಡಿಯಲ್ಲಿ 61,98,741 ರೂ. ಕಾಣಿಕೆ ಸಂಗ್ರಹವಾಗಿದೆ.

ಭಕ್ತರು ಕಾಣಿಕೆ ರೂಪದಲ್ಲಿ 3 ಲಕ್ಷ 40 ಸಾವಿರ ರೂಪಾಯಿ ಮೌಲ್ಯದ 4 ಕೆ.ಜಿ ಬೆಳ್ಳಿ, 80 ಸಾವಿರ ರೂ. ಮೌಲ್ಯದ 11 ಗ್ರಾಂ ಚಿನ್ನವನ್ನು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.
ಹುಂಡಿಯನ್ನು ನಿಯಮಾನುಸಾರ ತೆರೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ದೇವಾಲಯದ ಕಾರ್ಯದರ್ಶಿ ಪಿ. ದಿನೇಶ್, ಉಪ ಕಾರ್ಯದರ್ಶಿ ಎಂ.ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಸಿಲ್ದಾ‌ರ್ ಜಿ.ಜೆ.ಹೇಮಾವತಿ, ಪ್ರಧಾನ ಅರ್ಚಕ ಶ್ರೀನಿಧಿ, ದೇವಾಲಯದ ಸಿಬ್ಬಂದಿ ನಂಜಪ್ಪ, ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಜೆ.ಎನ್. ರಂಗಪ್ಪ, ಎಸ್. ರವಿ, ಲಕ್ಷ್ಮ ನಾಯಕ್, ಆರ್.ವಿ.ಮಹೇಶ್ ಕುಮಾರ್, ಹೇಮಲತಾ ರಮೇಶ್, ಪೊಲೀಸ್ ಇಲಾಖೆ, ದೇವಾಲಯದ ಸಿಬ್ಬಂದಿ, ಕೆನರಾ ಬ್ಯಾಂಕ್ ಸಿಬ್ಬಂದಿಗಳು ಹಾಜರಿದ್ದರು.

RELATED ARTICLES

Latest News