ಕರ್ನಾಟಕದಲ್ಲಿ ಕೊರೋನಾ ಮರಣಮೃದಂಗ, ಇಂದು 626 ಜೀವಗಳು ಬಲಿ..!
ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಮುಂದುವರೆದಿದ್ದು ಇಂದು ಕಿಲ್ಲರ್ ಕೊರೋನಾ ಮರಣಮೃದಂಗ ಬಾರಿಸಿದೆ. ರಾಜ್ಯದಾದ್ಯಂತ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 626 ಪ್ರಾಣ ಕಳೆದುಕೊಂಡಿದ್ದಾರೆ, ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 25979 ಹೊಸ ಕೇಸ್ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2424904 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 25282ಕ್ಕೆ ಏರಿಕೆಯಾಗಿದೆ.
ಇಂದು ಬೆಂಗಳೂರಿನಲ್ಲಿ 7494 ಜನರಿಗೆ ಕೊರೋನಾ ತಗುಲಿದೆ, ನಗರದಲ್ಲಿ ಇಂದು 362 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 1119552 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ ಒಟ್ಟು 11216 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.
ಇಂದು ರಾಜ್ಯಾದ್ಯಂತ 35573 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 1926615 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.
ಜಿಲ್ಲಾವಾರು ಸೋಂಕಿತ ಸಂಖ್ಯೆ ಕೆಳಕಂಡಂತಿದೆ :