68ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ

Pranab-Mukharji

ನವದೆಹಲಿ. ಜ.೨೫ : 68ನೇ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ಇಂದು ದೇಶದ ಜನತೆಯನ್ನುದ್ದೇಶಿಸಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾಷಣ ಮಾಡಿದರು. ದೇಶದಲ್ಲಿ ಕಪ್ಪು ಹಣದ ಚಲಾವಣೆಯನ್ನು ತಡೆಗಟ್ಟಲು ಜಾರಿಗೆ ತಂದಿರುವ ನೋಟುಗಳ ಅಮಾನ್ಯತೆ ಕ್ರಮ ತಾತ್ಕಾಲಿಕವಾಗಿ ಆರ್ಥಿಕ ಚಟುವಟಿಕೆಗಳು ನಿಧಾನಗತಿಯಲ್ಲಿ ಸಾಗುವಂತೆ ಮಾಡಿರಬಹುದು, ಆದರೆ ದೀರ್ಘಾವಧಿಯಲ್ಲಿ ಇದರಿಂದ ಉಪಯೋಗವಿದೆ ಎಂದು ಕೇಂದ್ರ ಸರ್ಕಾರದ ಕ್ರಮವನ್ನು ಬೆಂಬಲಿಸಿದರು. ಹೆಚ್ಚೆಚ್ಚು ವಹಿವಾಟುಗಳು ನಗದುರಹಿತವಾದರೆ ಆರ್ಥಿಕತೆಯಲ್ಲಿ ಹೆಚ್ಚು ಪಾರದರ್ಶಕತೆ ಉಂಟಾಗುತ್ತದೆ ಎಂದು ಹೇಳಿದರು.

 

500 ಹಾಗೂ 1000 ರುಪಾಯಿ ನೋಟ್ ನಿಷೇಧ ನಿರ್ಧಾರ ಉತ್ತಮ ಎಂದಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು, ನಗದು ರಹಿತ ವಹಿವಾಟು ನಡೆಸುವುದರಿಂದ ಆರ್ಥಿಕತೆಯಲ್ಲಿ ಪಾರದರ್ಶಕತೆ ಸುಧಾರಿಸುತ್ತಾ ಹೋಗುತ್ತದೆ ಎಂದು ಬುಧವಾರ ಹೇಳಿದ್ದಾರೆ.  ದೇಶಕ್ಕಾಗಿ ಪ್ರಾಣ ತೆತ್ತ ವೀರ ಯೋಧರನ್ನು ನೆನೆದ ರಾಷ್ಟ್ರಪತಿ ಸೈನಿಕರಿಗೆ ಗೌರವ ಸಲ್ಲಿಸಿದರು. ದೇಶದ ಅಭಿವೃದ್ಧಿಗಾಗಿ ಶ್ರಮಿಸಿದ, ಸ್ವಾತಂತ್ರಕ್ಕಾಗಿ ಹೋರಾಡಿಯವರನ್ನು ಈ ಸಂದರ್ಭದಲ್ಲಿ ರಾತ್ರಪತಿಯವರು ನೆನೆದರು.

ರಾಷ್ಟ್ರಪತಿಯವರ ಭಾಷಣವು ಸಂಜೆ 7 ††ಗಂಟೆಗೆ ಆಕಾಶವಾಣಿಯಲ್ಲಿ ಮತ್ತು ದೂರದರ್ಶನದ ಎಲ್ಲಾ ವಾಹಿನಿಗಳಲ್ಲಿ ಆಂಗ್ಲ ಹಾಗೂ ಹಿಂದಿ ಭಾಷೆಗಳಲ್ಲಿ ಪ್ರಸಾರಗೊಂಡಿತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

 

Sri Raghav

Admin