Saturday, May 18, 2024
Homeರಾಷ್ಟ್ರೀಯಹೈದರಾಬಾದ್‌ನಲ್ಲಿ ಭಾರೀ ಮಳೆಯಿಂದ ಗೋಡೆ ಕುಸಿದು 7 ಮಂದಿ ಸಾವು

ಹೈದರಾಬಾದ್‌ನಲ್ಲಿ ಭಾರೀ ಮಳೆಯಿಂದ ಗೋಡೆ ಕುಸಿದು 7 ಮಂದಿ ಸಾವು

ಹೈದರಾಬಾದ್‌, ಮೇ.8 : ಇಲ್ಲಿನ ಬಾಚುಪಲ್ಲಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್‌ಮೆಂಟ್‌ನ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತರು ಒಡಿಶಾ ಮತ್ತು ಛತ್ತೀಸ್‌‍ಗಢಕ್ಕೆ ಸೇರಿದ ವಲಸೆ ಕಾರ್ಮಿಕರಾಗಿದ್ದಾರೆ ಎಂದು ಬಾಚುಪಲ್ಲಿ ಪೊಲೀಸರು ತಿಳಿಸಿದ್ದಾರೆ.

ಅವಶೇಷಗಳಲ್ಲಿ ಸಿಲುಕಿದ್ದ ದೇಹಗಳನ್ನು ಜೆಸಿಬಿ ಯಂತ್ರವನ್ನು ಬಳಸಿ ಹೊರತೆಗೆಯಲಾಗಿದೆ. ತೆಲಂಗಾಣದ ರಾಜ್ಯದ ಹಲವೆಡೆ ಭಾರೀ ಮಳೆ ಸುರಿದಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ ಮತ್ತು ನಗರದ ಹಲವೆಡೆ ಜಲಾವೃತಗೊಂಡು ವಾಹನ ಸಂಚಾರಕ್ಕೂ ಅಡಚಣೆಯಾಗಿದೆ. ಮೃತರಿಗೆ ಸೂಕ್ತ ಪರಿಹಾರಕ್ಕೆ ಒತ್ತಾಯಿಸಲಾಗಿದೆ. ಅಪಾರ್ಟ್‌ಮೆಂಟ್‌ ಮಾಲೀಕರ ವಿರುದ್ದ ಪ್ರಕರಣ ದಾಖಲಾಗಿದೆ.

ಇನ್ನು ವಿಪತ್ತು ಪರಿಹಾರ ಪಡೆ ತಂಡಗಳನ್ನು ಮಳೆ ಹಾನಿ ಪ್ರದೇಶದಲ್ಲಿ ನಿಯೋಜಿಸಲಾಗಿದ್ದು, ಬಿದ್ದ ಮರಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪುರಸಭೆ ಆಡಳಿತ ಮತ್ತು ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ದಾನಕಿಶೋರ್‌ ಅವರು ಜಿಎಚ್‌ಎಂಸಿ ಆಯುಕ್ತ ರೊನಾಲ್‌್ಡ ರೋಸ್‌‍ ಅವರೊಂದಿಗೆ ವಿವಿಧ ಜಲಾವೃತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ

RELATED ARTICLES

Latest News