ಹೈದರಾಬಾದ್‌ನಲ್ಲಿ ಭಾರೀ ಮಳೆಯಿಂದ ಗೋಡೆ ಕುಸಿದು 7 ಮಂದಿ ಸಾವು

ಹೈದರಾಬಾದ್‌, ಮೇ.8 : ಇಲ್ಲಿನ ಬಾಚುಪಲ್ಲಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್‌ಮೆಂಟ್‌ನ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತರು ಒಡಿಶಾ ಮತ್ತು ಛತ್ತೀಸ್‌‍ಗಢಕ್ಕೆ ಸೇರಿದ ವಲಸೆ ಕಾರ್ಮಿಕರಾಗಿದ್ದಾರೆ ಎಂದು ಬಾಚುಪಲ್ಲಿ ಪೊಲೀಸರು ತಿಳಿಸಿದ್ದಾರೆ. ಅವಶೇಷಗಳಲ್ಲಿ ಸಿಲುಕಿದ್ದ ದೇಹಗಳನ್ನು ಜೆಸಿಬಿ ಯಂತ್ರವನ್ನು ಬಳಸಿ ಹೊರತೆಗೆಯಲಾಗಿದೆ. ತೆಲಂಗಾಣದ ರಾಜ್ಯದ ಹಲವೆಡೆ ಭಾರೀ ಮಳೆ ಸುರಿದಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ ಮತ್ತು ನಗರದ ಹಲವೆಡೆ ಜಲಾವೃತಗೊಂಡು ವಾಹನ ಸಂಚಾರಕ್ಕೂ ಅಡಚಣೆಯಾಗಿದೆ. ಮೃತರಿಗೆ … Continue reading ಹೈದರಾಬಾದ್‌ನಲ್ಲಿ ಭಾರೀ ಮಳೆಯಿಂದ ಗೋಡೆ ಕುಸಿದು 7 ಮಂದಿ ಸಾವು