ಪಾಟ್ನಾ, ಫೆ.24 – ಚಲಿಸುತ್ತಿದ್ದ ಟ್ರಕ್ ಹಾಗೂ ಟೆಂಪೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟಿರುವ ಘಟನೆ ಕಳೆದ ರಾತ್ರಿ ಮಸೌಹಿರ್ ಪ್ರದೇಶದ ನೂರಾ ಸೇತುವೆ ಬಳಿ ನಡೆದಿದೆ.
ಮಸೌರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ದುತಂತ ಸಂಭವಿಸಿದ್ದು, ಎರಡೂ ವಾಹನಗಳು ಜಖಂಗೊಂಡಿದ್ದು ಕ್ಯಾಬಿನ್‌ನಲ್ಲಿ ಕುಳಿತ್ತಿದ್ದ ಚಾಲಕ ಸಹಿತ 7ಮಂದಿಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ಸ್‌ಪೆಕ್ಟರ್ ವಿಜಯ್ ಕುಮಾರ್ ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಮೃತರ ಗುರುತು ಪತ್ತೆ ಮಾಡಲಾಗುತ್ತಿದೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.