Sunday, October 6, 2024
Homeರಾಷ್ಟ್ರೀಯ | Nationalಟ್ರಕ್‌ಗೆ ಕಾರು ಡಿಕ್ಕಿಯಾಗಿ 7 ಮಂದಿ ಸಾವು

ಟ್ರಕ್‌ಗೆ ಕಾರು ಡಿಕ್ಕಿಯಾಗಿ 7 ಮಂದಿ ಸಾವು

7 killed as car rams into trailer truck in Gujarat's Sabarkantha

ಸಬರಕಾಂತ (ಗುಜರಾತ್‌), ಸೆ 25-ಇಂದು ಮುಂಜಾನೆ ಗುಜರಾತ್‌ನ ಸಬರಕಾಂತ ಜಿಲ್ಲೆಯ ಹಿಮತ್‌ನಗರ ಬಳಿ ಕಾರೊಂದು ಟ್ರೇಲರ್‌ ಟ್ರಕ್‌ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ.

ಶ್ಯಾಮಲಾಜಿಯಿಂದ ಅಹಮದಾಬಾದ್‌ಗೆ ಸಾಗುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದೆ ಹೋಗುತ್ತಿದ್ದಾಗ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ ಎಂದು ಹಿಮತ್‌ನಗರ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ ,ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌‍ ವರಿಷ್ಠಾಧಿಕಾರಿ ವಿಜಯ್‌ ಪಟೇಲ್‌ ತಿಳಿಸಿದ್ದಾರೆ.

ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ವರದಿ ತಿಳಿಸಿದೆ.ಕಾರು ಡಿಕ್ಕಿ ರಭಸಕ್ಕೆ ಅದರಲ್ಲಿ ಪ್ರಯಾಣಿಸುತ್ತಿದ್ದವರು ಸಿಕಿಹಾಕಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶವಗಳನ್ನು ಹೊರತೆಯಲು ಪೊಲೀಸರು ಪ್ರಯಾಸಪಟ್ಟಿದ್ದಾರೆ .ಈ ಘೋರ ದುರಂತದ ಬಗ್ಗೆ ತನಿಖೆ ನಡೆಯುತ್ತಿದೆ ಮತ್ತು ಮೃತರ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ತಿಳಿಸಿದರು.

RELATED ARTICLES

Latest News