ಚಿಕ್ಕಮಗಳೂರು,ಏ.12- ಏರ್ ಗನ್ ಜೊತೆ ಆಟವಾಡುವಾಗ ಮಿಸ್ ಫೈರ್ ಆಗಿ ಬಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ.ವಿಷ್ಣು (7)ಮೃತ ದುರ್ದೈವಿ.
ಕಾಫಿ ತೋಟದಲ್ಲಿ ಮಂಗಗಳನ್ನ ಓಡಿಸಲು ಬಳಸುವ ಏರ್ ಗನ್ ಜೊತೆ ವಿಷ್ಣು ಮನೆ ಮುಂದೆ ಆಟವಾಡುತ್ತಿದ್ದ. ಈ ವೇಳೆ ವಿಷ್ಣು ಅಚಾನಕ್ ಆಗಿ ಟ್ರಿಗರ್ ಒತ್ತಿದ್ದಾನೆ. ಪರಿಣಾಮ ಏರ್ ಗನ್ ನೊಳಗಿದ್ದ ಬಾಲ್ಸ್ ವಿಷ್ಣುವಿನ ಹೃದಯ ಭಾಗಕ್ಕೆ ಹೊಕ್ಕಿದೆ.
ಮನೆಯವರು ಶಬ್ಬ ಕೇಳಿ ನೋಡಿದಾಗ ವಿಷ್ಣು ಒದಾಡುತ್ತಿದ್ದ ತಕ್ಕಣ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗುವ ವೇಳೆ ಬಾಲಕ ಕೊನೆಯುಸಿರೆಳೆದಿದ್ದಾನೆ. ಪೋಷಕರು ಮನೆಯಲ್ಲಿ ಇದ್ದಾಗಲೇ ಈ ದುರ್ಘಟನೆ ಸಂಭವಿಸಿದ್ದು,ಮಗನನ್ನು ಕಳೆದು ಅವರ ಆಕ್ರಂದನ ಮುಗಿಲು ಮುಟ್ಟಿದೆ.
ಸದ್ಯ ವಿಷ್ಣವಿನ ಮೃತದೇಹವನ್ನು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದೇಹ ರವಾನೆ ಮಾಡಲಾಗಿದೆ. ಇನ್ನು ಈ ಬಗ್ಗೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕೆ ಭೇಟಿ ನೀಡಿ ಪರಿಶೀಲಿಸಿದಾರೆ.