Friday, August 15, 2025
Homeರಾಜ್ಯ79ನೇ ಸ್ವಾತಂತ್ರ್ಯೋತ್ಸವ : ಸಿಎಂ ಸಿದ್ದರಾಮಯ್ಯ ಭಾಷಣದ ಮುಖ್ಯಾಂಶಗಳು

79ನೇ ಸ್ವಾತಂತ್ರ್ಯೋತ್ಸವ : ಸಿಎಂ ಸಿದ್ದರಾಮಯ್ಯ ಭಾಷಣದ ಮುಖ್ಯಾಂಶಗಳು

79th Independence Day: Highlights of CM Siddaramaiah's speech

ಬೆಂಗಳೂರು,ಆ.15- ಅಭಿವೃದ್ದಿಯ ಉತ್ತುಂಗ ತಲುಪಿ ಸಮಾಜಕ್ಕೆ ಮರಳಿ ಕೊಡುಗೆ ನೀಡುವುದೇ ಅತ್ಯುನ್ನತ ಸ್ವಾತಂತ್ರ್ಯ. ಕರ್ನಾಟಕ ಈಗಾಗಲೇ ಭಾರತದ ಐಟಿ ರಾಜಧಾನಿಯಾಗಿದ್ದು ಈಗ ನಾವು ಜಗತ್ತಿನ ನಾವೀನ್ಯತಾ ರಾಜಧಾನಿಯಾಗುವತ್ತ ಹೆಜ್ಜೆ ಇಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿಂದು 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕರ್ನಾಟಕ ಕ್ವಾಂಟಮ್‌ ಮಿಷನ್‌ ವಿಜ್ಞಾನದ ಭವಿಷ್ಯವನ್ನು ರೂಪಿಸಲಿದೆ. ನಾವು ಕೇವಲ ಉದ್ಯೋಗಗಳನ್ನು ಸೃಷ್ಟಿಸುತ್ತಿಲ್ಲ. ಜನರ ಜೀವನ ಬದಲಾಯಿಸುವಂತಹ ಆಲೋಚನೆಗಳು, ಆವಿಷ್ಕಾರಗಳು, ಹೊಸತನಗಳನ್ನು ಸೃಷ್ಟಿಸುತ್ತಿದ್ದು, ನಮ ಆಲೋಚನೆಗಳು ಗಡೆಯಾಚೆಗೂ ತಲುಪಿವೆ ಎಂದರು.

ಒಕ್ಕೂಟ ಸರ್ಕಾರವು ತೆರಿಗೆ ಮುಂತಾದ ಸಂಪನೂಲಗಳನ್ನು ಹಂಚುವಾಗ ನಿಷ್ಪಕ್ಷಪಾತ ಧೋರಣೆ ಅನುಸರಿಸುತ್ತಿಲ್ಲ. ಐಟಿ, ಇಡಿ, ಸಿಬಿಐ ಮುಂತಾದ ಸಾಂವಿಧಾನಿಕ ಸಂಸ್ಥೆಗಳು ಪ್ರಜಾಪ್ರಭುತ್ವದ ಹಾಗೂ ಸಂವಿಧಾನದ ನೈಜ ಮೌಲ್ಯಗಳ ಉಳಿವಿಗೆ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಆಕ್ರೋಶ ವಿವಿಧ ವೇದಿಕೆಗಳಿಂದ ವ್ಯಕ್ತವಾಗುತ್ತಿದೆ. ಈ ಕುರಿತು ಜವಾಬ್ದಾರಿಯುತ ನಾಗರಿಕರೆಲ್ಲಾ ದನಿ ಎತ್ತಬೇಕಿದೆ ಎಂದು ಕರೆ ನೀಡಿದರು.

ಕರ್ನಾಟಕವನ್ನು ಡ್ರಗ್‌್ಸ ಮುಕ್ತ ರಾಜ್ಯವನ್ನಾಗಿ ಘೋಷಿಸಬೇಕಿದೆ ಎಂದ ಅವರು, ಹೊಸ ತಲೆಮಾರು ಮೊಬೈಲ್‌, ಇಂಟರ್‌ನೆಟ್‌ ಮುಂತಾದವುಗಳಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇದು ಸಾಮಾಜಿಕ ಸಮಸ್ಯೆಯಾಗುತ್ತಿದೆ. ಈ ನಿಟ್ಟಿನಲ್ಲಿ ಮೊಬೈಲ್‌ ಬಿಡಿ- ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ ಎಂಬ ಕಾರ್ಯಕ್ರಮವನ್ನು ರೂಪಿಸಿದ್ದೇವೆ ಎಂದರು.

ರಸ್ತೆ ಸೇತುವೆ ಮುಂತಾದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಕ್ರಮದಡಿ 8 ಸಾವಿರ ಕೋಟಿ ರೂ. ನೀಡಲಾಗುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ 184 ಕಾಲುಸಂಕಗಳ ನಿರ್ಮಾಣಕ್ಕೆ 31 ಕೋಟಿ ರೂ. ವೆಚ್ಚದಲ್ಲಿ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಆರು ಲಕ್ಷ ಉದ್ಯೋಗ ಸೃಜನೆ:
ಇನ್ವೆಸ್ಟ್‌ ಕರ್ನಾಟಕದಲ್ಲಿ 6,23,970 ಕೋಟಿ ರೂ. ಹೂಡಿಕೆ ಒಡಂಬಡಿಕೆಯಾಗಿದ್ದು, ಆರು ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಜನೆಯಾಗುವ ನಿರೀಕ್ಷೆಯಿದೆ. ವಿದೇಶಿ ಹೂಡಿಕೆಯಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿ ಕರ್ನಾಟಕವಿದೆ. 2024-25ನೇ ಸಾಲಿನಲ್ಲಿ 56,30,000 ಕೋಟಿ ರೂ. ವಿದೇಶಿ ಹೂಡಿಕೆ ಆಕರ್ಷಿಸಲಾಗಿತ್ತು ಎಂದು ಹೇಳಿದರು.

ಕರ್ನಾಟಕ ಬಜೆಟ್‌ನ ಶೇ.20.1ರಷ್ಟು ಅನುದಾನವನ್ನು ಮೂಲ ಸೌಕರ್ಯ ಯೋಜನೆಗಳಿಗೆ ವಿನಿಯೋಗಿಸುತ್ತಿರುವ ಪ್ರಮುಖ ರಾಜ್ಯವಾಗಿದೆ. ಗ್ಯಾರಂಟಿ ಯೋಜನೆಗಳು ಮಹಿಳೆಯರ ಸದ್ದಿಲ್ಲದ ಛಲವನ್ನು ಕಣ್ಣಿಗೆ ಕಾಣುವ ಯಶಸ್ಸನ್ನಾಗಿ ಪರಿವರ್ತನೆ ಮಾಡುತ್ತಿವೆ. ರೈತನ ಮಗ ವಿಜ್ಞಾನಿಯಾಗಬೇಕು. ನೇಕಾರನ ಮಗಳು ಉದ್ಯಮಿಯಾಗಬೇಕು, ಪ್ರತಿ ಮಗುವಿಗೂ ಭವಿಷ್ಯ ತನ್ನ ಕೈಯಲ್ಲಿದೆ ಎಂಬ ವಾತಾವರಣ ನಿರ್ಮಿಸಬೇಕಿದೆ ಎಂದರು.

ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ , ಗೃಹಜ್ಯೋತಿ, ಯುವನಿಧಿ, ಗ್ಯಾರಂಟಿ ಯೋಜನೆಗಳಿಗೆ ಈವರೆಗೆ 96 ಸಾವಿರ ಕೋಟಿಗೂ ಹೆಚ್ಚು ವಿನಿಯೋಗಿಸಲಾಗಿದೆ. ಶಕ್ತಿ ಯೋಜನೆಯಲ್ಲಿ 500 ಕೋಟಿ ಟ್ರಿಪ್‌ಗಳ ಮೂಲಕ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ ಎಂದು ಹೇಳಿದರು. ಕರ್ನಾಟಕವು ತಲಾ ಆದಾಯದಲ್ಲಿ ಮೊದಲ ಸ್ಥಾನದಲ್ಲಿದ್ದು, ಕಳೆದ 10 ವರ್ಷಗಳಲ್ಲಿ ಶೇ.101ರಷ್ಟು ಪ್ರಗತಿ ಸಾಧಿಸಿದೆ. 2024-25ರ ವೇಳೆಗೆ ತಲಾ ಆದಾಯವು 2,04,605 ರೂ.ಗಳಿಗೆ ತಲುಪಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಜೊತೆಗೆ ಸಹಾಯಧನ, ಪ್ರೋತ್ಸಾಹಧನ, ವಿದ್ಯಾರ್ಥಿ ವೇತನ, ಸಾಮಾಜಿಕ ಯೋಜನೆಗಳಿಗೆ 1.12 ಲಕ್ಷ ಕೋಟಿ ರೂ.ಗೂ ಹೆಚ್ಚಿನ ಹಣವನ್ನು ಜನ ಕಲ್ಯಾಣಕ್ಕಾಗಿ ಖರ್ಚು ಮಾಡಲಾಗುತ್ತಿದೆ ಎಂದರು.

ಮಹಾತಗಾಂಧಿ ಸೇರಿದಂತೆ ಸ್ವಾತಂತ್ರ್ಯ ಹೋರಾಟಕ್ಕೆ ಶ್ರಮಿಸಿದವರನ್ನು ಸರಿಸಿದ ಮುಖ್ಯಮಂತ್ರಿ, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಮಡಿದವರು, ಭಾರತ-ಪಾಕಿಸ್ತಾನ ಸಂಘರ್ಷದಲ್ಲಿ ಹುತಾತರಾದ ಎಲ್ಲರನ್ನು ದೇಶವು ನೆನಪಿಡುತ್ತದೆ ಎಂದರು. ಕರ್ನಾಟಕ ಅಭಿವೃದ್ಧಿ ಮಾದರಿಗೆ ಮನ್ನಣೆ ದೊರೆಯುತ್ತಿರುವುದು ಹೆಮೆಯ ಸಂಗತಿಯಾಗಿದೆ. ಅಸಮಾನತೆಯನ್ನು ತಗ್ಗಿಸಲು ನಾವು ಗ್ಯಾರಂಟಿ ಯೋಜನೆಗಳನ್ನು, ಜನ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಲು ತೀರ್ಮಾನಿಸಲಾಗಿದೆ. ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಹಾಗೂ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಳ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಎರಡು ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿ ಮಾದರಿಗೆ 250ಕ್ಕೂ ಹೆಚ್ಚಿನ ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ ಎಂದು ತಿಳಿಸಿದರು.ನಮಗೆ ಬೇಕಾಗಿರುವಷ್ಟು ಯೂರಿಯಾ ಗೊಬ್ಬರವನ್ನು ಒಕ್ಕೂಟ ಸರ್ಕಾರ ಪೂರೈಸದೆ ಸಮಸ್ಯೆಯಾಗಿದ್ದು, ಕೂಡಲೇ ಪರಿಹರಿಸಬೇಕೆಂದು ಒಕ್ಕೂಟ ಸರ್ಕಾರವನ್ನು ಒತ್ತಾಯಿಸುವುದಾಗಿ ಹೇಳಿದರು.

ಹಿಂದಿನ ಸರ್ಕಾರ ಬಾಕಿ ಉಳಿಸಿದ್ದ 609 ಕೋಟಿ ರೂ. ಸೇರಿದಂತೆ 3,280 ಕೋಟಿ ರೂ. ಪ್ರೋತ್ಸಾಹಧನವನ್ನು ಹೈನುಗಾರರಿಗೆ ಪಾವತಿಸಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಹೊಸದಾಗಿ ವಸತಿ ಶಾಲೆ ಹಾಗೂ ವಸತಿ ನಿಲಯಗಳನ್ನು ಸ್ಥಾಪಿಸಲಾಗುತ್ತಿದೆ. 500 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಸ್ಥಾಪಿಸುತ್ತಿದ್ದು, 2500 ಕೋಟಿ ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್‌ ಕಾಲೇಜುಗಳನ್ನು ಉನ್ನತೀಕರಿಸುತ್ತಿದ್ದೇವೆ. 13 ಹೊಸ ತಾಂತ್ರಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುತ್ತಿದ್ದು, ರಾಜ್ಯದ ಶಿಕ್ಷಣ ನೀತಿ ಆಯೋಗದ ವರದಿ ಸಲ್ಲಿಕೆಯಾಗಿದ್ದು, ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯಾದ್ಯಂತ ಒಂದೇ ಮಾದರಿಯಲ್ಲಿ ಸ್ವಸಹಾಯ ಗುಂಪುಗಳಿಗೆ ಅಕ್ಕ ಕೆಫೆಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಸಾಮಾಜಿಕ, ಆರ್ಥಿಕ, ರಾಜಕೀಯ ಸ್ವಾತಂತ್ರ್ಯ ಹಾಗೂ ನ್ಯಾಯಗಳನ್ನು ನಿರಂತರ ರಕ್ಷಿಸುವ ಪ್ರತಿಜ್ಞೆ ಮಾಡಿ ಈ ಸ್ವಾತಂತ್ರ್ಯೋತ್ಸವನ್ನು ಅರ್ಥಪೂರ್ಣಗೊಳಿಸೋಣ ಎಂದು ಕರೆ ನೀಡಿದರು.

ರಾಜ್ಯದ ಉಳಿದ ಪ್ರದೇಶಗಳಿಗೂ ಡಿಜಿಟೈಲೈಸ್ಡ್‌ ಆಸ್ತಿ ದಾಖಲೆ ವಿಸ್ತರಣೆ :
ಗ್ರೇಟರ್‌ ಬೆಂಗಳೂರು ವ್ಯಾಪ್ತಿಯಲ್ಲಿ ನಾಗರಿಕರಿಗೆ ಆನ್‌ಲೈನ್‌ ಮೂಲಕ ಇ-ಖಾತೆಯನ್ನು ಡಿಜಿಟೈಲೈಸ್ಡ್‌ ಆಸ್ತಿ ದಾಖಲೆಗಳನ್ನಾಗಿ ಒದಗಿಸುತ್ತಿದ್ದು, ರಾಜ್ಯದ ಉಳಿದ ಪ್ರದೇಶಗಳಿಗೂ ವಿಸ್ತರಿಸಲು ಯೋಜಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿಂದು 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಇ-ಖಾತಾ ವ್ಯವಸ್ಥೆಯೊಂದಿಗೆ 4 ಸಾವಿರ ಚ.ದ. ಅಡಿಯವರೆಗೆ ನಂಬಿಕೆ ನಕ್ಷೆ ಪರಿಕಲ್ಪನೆಯನ್ನು ಜಾರಿಗೊಳಿಸಿದ್ದೇವೆ. ಬೆಂಗಳೂರು ಮತ್ತು ರಾಜ್ಯದ ಉಳಿದ ಕಡೆಗಳಲ್ಲಿ ಜನರಿಗೆ ಸಮಸ್ಯೆಯಾಗಿದ್ದ ಬಿ-ಖಾತಾ ಗೊಂದಲ ಬಗೆಹರಿಸಿ ಇ-ಖಾತ ಕೊಡುವ ಕ್ರಾಂತಿಕಾರಿ ತೀರ್ಮಾನ ಮಾಡಿ ಅನುಷ್ಠಾನ ಮಾಡುತ್ತಿದ್ದೇವೆ ಎಂದರು.

ಬೆಂಗಳೂರು ನಗರ ಅಭಿವೃದ್ದಿಗೆ 1,35, 000 ಕೋಟಿ ರೂ.ಗೂ ಹೆಚ್ಚಿನ ವೆಚ್ಚದಲ್ಲಿ ಡಬಲ್‌ ಡಕ್ಕರ್‌ ರಸ್ತೆಗಳು, ಸುರಂಗ ರಸ್ತೆಗಳು, ಬೆಂಗಳೂರು ಬಿಸ್ನೆಸ್‌‍ ಕಾರಿಡಾರ್‌, ವೈಟಾಪಿಂಗ್‌ ಮತ್ತು ಡಾಂಬರು ರಸ್ತೆಗಳು , 6ನೇ ಹಂತದ ಕಾವೇರಿ ನೀರು ಸರಬರಾಜು, ಹೊಸ ಮೆಟ್ರೋ ರೈಲು ಮಾರ್ಗಗಳು, ಬಫರ್‌ ರಸ್ತೆ, ಮೇಲ್ಸೇತುವೆ, ಉತ್ತರ-ದಕ್ಷಿಣ ಕಾರಿಡಾರ್‌, ಉದ್ಯಾನವನಗಳ ಅಭಿವೃದ್ದಿ, ಪಾರ್ಕಿಂಗ್‌ ವ್ಯವಸ್ಥೆ , ಶಿಕ್ಷಣ, ಆರೋಗ್ಯ ವ್ಯವಸ್ಥೆ ಸುಧಾರಣೆ, ಟ್ರಾಫಿಕ್‌ ನಿರ್ವಹಣೆ, ಆಟದ ಮೈದಾನಗಳು ಮೊದಲಾದ ಅಭಿವೃದ್ದಿ ಯೋಜನೆಗಳು ಚಾಲನೆಗೊಂಡಿವೆ ಎಂದರು.

ಬೆಂಗಳೂರಿನಲ್ಲಿ ಬಳಸಿದ ನೀರನ್ನು ಎರಡು ಹಂತದಲ್ಲಿ ಶುದ್ದೀಕರಿಸಿ 926 ಕೆರೆಗಳು, 143 ಚೆಕ್‌ಡಾಮ್‌ ಸೃಜಿಸಲು ಕ್ರಮ ವಹಿಸಲಾಗಿದ್ದು, ವಿಶ್ವಸಂಸ್ಥೆಯ ಮುಖ್ಯಸ್ಥರು ಕೋಲಾರದ ಕೆ.ಸಿ.ವ್ಯಾಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು. ಬೆಂಗಳೂರು ಹೊರತುಪಡಿಸಿ ನಗರಾಭಿವೃದ್ದಿ ಇಲಾಖೆಗೆ ಈ ವರ್ಷ 16,508 ಕೋಟಿ ರೂ. ಅನುದಾನ ಒದಗಿಸಿದ್ದು, 10 ಮಹಾನಗರ ಪಾಲಿಕೆಗಳಿಗೆ 2 ಸಾವಿರ ಕೋಟಿ ರೂ. ಅನುದಾನ ಒದಗಿಸಲಾಗಿದೆ. 2ನೇ ಹಂತದ ಮಹಾತಗಾಂಧಿ ನಗರ ವಿಕಾಸ ಯೋಜನೆಯನ್ನು ಮೂರು ವರ್ಷಗಳ ಅವಧಿಯಲ್ಲಿ ಅನುಷ್ಠಾನ ಮಾಡಲು ಮಾರ್ಗಸೂಚಿ ಹೊರಡಿಸಿ ಟೆಂಡರ್‌ ಕರೆಯಲಾಗುತ್ತಿದೆ ಎಂದರು.

2027ರ ವೇಳೆಗೆ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ವಿವಿಧ ವಸತಿ ಯೋಜನೆಗಳಡಿ ಜೂನ್‌ ಅಂತ್ಯದವರೆಗೆ 3,87,756 ಮನೆಗಳನ್ನು ಪೂರ್ಣಗೊಳಿಸಲಾಗಿದ್ದು, ಕರ್ನಾಟಕ ಗೃಹ ಮಂಡಳಿಯಲ್ಲಿ ರಾಜ್ಯಾದ್ಯಂತ 26 ವಸತಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ರೂ. ನೀಡಲಾಗುತ್ತಿದೆ ಎಂದು ತಿಳಿಸಿದರು.

38 ವಿಧಾನಸಭಾ ಕ್ಷೇತ್ರಗಳ ಗ್ರಾಮೀಣ ಪ್ರದೇಶದ 1150 ಕಿ.ಮೀ ರಸ್ತೆಗಳನ್ನು ಕಲ್ಯಾಣ ಪಥ ಕಾರ್ಯಕ್ರಮದಡಿ ಅಭಿವೃದ್ಧಿಪಡಿಸಲಾಗುತ್ತಿದೆ. ಸಮುದ್ರ ಕೊರೆತವನ್ನು ತಗ್ಗಿಸಲು 200 ಕೋಟಿ ರೂ. ವೆಚ್ಚದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗಿದೆ. ಕರಾವಳಿ ಭಾಗದಲ್ಲಿ ಕೋಮು ಹಿಂಸೆ ನಿವಾರಿಸಲು ವಿಶೇಷ ಕಾರ್ಯಪಡೆ ರಚಿಸಲಾಗಿದೆ ಎಂದರು.
ಗಾಳಿ , ಬಿಸಿಲು, ನೀರು ಬಳಸಿಕೊಂಡು ಅಗಾಧ ಪ್ರಮಾಣದ ವಿದ್ಯುತ್‌ ಉತ್ಪಾದಿಸುವ ರಾಜ್ಯ ಕರ್ನಾಟಕವಾಗಿದ್ದು, ಪ್ರಸ್ತುತ ಸುಮಾರು 24 ಸಾವಿರ ಮೆಗಾವ್ಯಾಟ್‌ ವಿದ್ಯುತ್‌ನ್ನು ಉತ್ಪಾದಿಸಲಾಗುತ್ತಿದೆ ಎಂದರು.

ದುಸ್ಥಿತಿಯಲ್ಲಿದ್ದ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಹೊಸ ತಾಲ್ಲೂಕು ಪ್ರಜಾಸೌಧಗಳನ್ನು ನಿರ್ಮಿಸುತ್ತಿದ್ದೇವೆ ಎಂದು ಅವರು ಇದೇ ವೇಳೆ ತಿಳಿಸಿದರು. ಪುನೀತ್‌ ರಾಜ್‌ಕುಮಾರ್‌ ಉದಯ ಜ್ಯೋತಿಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ. ತಾಯಂದಿರ ಮರಣ ಪ್ರಮಾಣ ಶೇ.26ರಷ್ಟು ಕಡಿಮೆಯಾಗಿದೆ. ಆ್ಯಂಬುಲೆನ್‌್ಸ ಸೇವೆಗಳನ್ನು ರಾಜ್ಯಾದ್ಯಂತ ಕೇಂದ್ರೀಯ ಕಮಾಂಡ್‌ ಮತ್ತು ನಿಯಂತ್ರಣ ಕೇಂದ್ರದಲ್ಲಿ ನಿರ್ವಹಿಸುವಂತೆ ಮಾಡಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ಸಮಾಜಕ್ಕೆ ಮರಳಿ ಕೊಡುಗೆ ನೀಡುವುದೇ ಅತ್ಯುನ್ನತ ಸ್ವಾತಂತ್ರ್ಯ..
ಬೆಂಗಳೂರು,ಆ.15- ಅಭಿವೃದ್ದಿಯ ಉತ್ತುಂಗ ತಲುಪಿ ಸಮಾಜಕ್ಕೆ ಮರಳಿ ಕೊಡುಗೆ ನೀಡುವುದೇ ಅತ್ಯುನ್ನತ ಸ್ವಾತಂತ್ರ್ಯ. ಕರ್ನಾಟಕ ಈಗಾಗಲೇ ಭಾರತದ ಐಟಿ ರಾಜಧಾನಿಯಾಗಿದ್ದು ಈಗ ನಾವು ಜಗತ್ತಿನ ನಾವೀನ್ಯತಾ ರಾಜಧಾನಿಯಾಗುವತ್ತ ಹೆಜ್ಜೆ ಇಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿಂದು 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕರ್ನಾಟಕ ಕ್ವಾಂಟಮ್‌ ಮಿಷನ್‌ ವಿಜ್ಞಾನದ ಭವಿಷ್ಯವನ್ನು ರೂಪಿಸಲಿದೆ. ನಾವು ಕೇವಲ ಉದ್ಯೋಗಗಳನ್ನು ಸೃಷ್ಟಿಸುತ್ತಿಲ್ಲ. ಜನರ ಜೀವನ ಬದಲಾಯಿಸುವಂತಹ ಆಲೋಚನೆಗಳು, ಆವಿಷ್ಕಾರಗಳು, ಹೊಸತನಗಳನ್ನು ಸೃಷ್ಟಿಸುತ್ತಿದ್ದು, ನಮ ಆಲೋಚನೆಗಳು ಗಡೆಯಾಚೆಗೂ ತಲುಪಿವೆ ಎಂದರು.

ಒಕ್ಕೂಟ ಸರ್ಕಾರವು ತೆರಿಗೆ ಮುಂತಾದ ಸಂಪನೂಲಗಳನ್ನು ಹಂಚುವಾಗ ನಿಷ್ಪಕ್ಷಪಾತ ಧೋರಣೆ ಅನುಸರಿಸುತ್ತಿಲ್ಲ. ಐಟಿ, ಇಡಿ, ಸಿಬಿಐ ಮುಂತಾದ ಸಾಂವಿಧಾನಿಕ ಸಂಸ್ಥೆಗಳು ಪ್ರಜಾಪ್ರಭುತ್ವದ ಹಾಗೂ ಸಂವಿಧಾನದ ನೈಜ ಮೌಲ್ಯಗಳ ಉಳಿವಿಗೆ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಆಕ್ರೋಶ ವಿವಿಧ ವೇದಿಕೆಗಳಿಂದ ವ್ಯಕ್ತವಾಗುತ್ತಿದೆ. ಈ ಕುರಿತು ಜವಾಬ್ದಾರಿಯುತ ನಾಗರಿಕರೆಲ್ಲಾ ದನಿ ಎತ್ತಬೇಕಿದೆ ಎಂದು ಕರೆ ನೀಡಿದರು. ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಘೋಷಿಸಬೇಕಿದೆ ಎಂದ ಅವರು, ಹೊಸ ತಲೆಮಾರು ಮೊಬೈಲ್‌, ಇಂಟರ್‌ನೆಟ್‌ ಮುಂತಾದವುಗಳಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇದು ಸಾಮಾಜಿಕ ಸಮಸ್ಯೆಯಾಗುತ್ತಿದೆ. ಈ ನಿಟ್ಟಿನಲ್ಲಿ ಮೊಬೈಲ್‌ ಬಿಡಿ- ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ ಎಂಬ ಕಾರ್ಯಕ್ರಮ ವನ್ನು ರೂಪಿಸಿದ್ದೇವೆ ಎಂದರು. ರಸ್ತೆ ಸೇತುವೆ ಮುಂತಾದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಕ್ರಮದಡಿ 8 ಸಾವಿರ ಕೋಟಿ ರೂ. ನೀಡಲಾಗುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ 184 ಕಾಲುಸಂಕಗಳ ನಿರ್ಮಾಣಕ್ಕೆ 31 ಕೋಟಿ ರೂ. ವೆಚ್ಚದಲ್ಲಿ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಆರು ಲಕ್ಷ ಉದ್ಯೋಗ ಸೃಜನೆ:
ಇನ್ವೆಸ್ಟ್‌ ಕರ್ನಾಟಕದಲ್ಲಿ 6,23,970 ಕೋಟಿ ರೂ. ಹೂಡಿಕೆ ಒಡಂಬಡಿಕೆಯಾಗಿದ್ದು, ಆರು ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಜನೆಯಾಗುವ ನಿರೀಕ್ಷೆಯಿದೆ. ವಿದೇಶಿ ಹೂಡಿಕೆಯಲ್ಲಿ ದೇಶದಲ್ಲೇ ರಾಜ್ಯ 2ನೇ ಸ್ಥಾನದಲ್ಲಿ ಕರ್ನಾಟಕವಿದೆ. 2024-25ನೇ ಸಾಲಿನಲ್ಲಿ 56,30,000 ಕೋಟ ರೂ. ವಿದೇಶಿ ಹೂಡಿಕೆ ಆಕರ್ಷಿಸಲಾಗಿತ್ತು ಎಂದು ಹೇಳಿದರು. ಕರ್ನಾಟಕ ಬಜೆಟ್‌ನ ಶೇ.20.1ರಷ್ಟು ಅನುದಾನವನ್ನು ಮೂಲ ಸೌಕರ್ಯ ಯೋಜನೆಗಳಿಗೆ ವಿನಿಯೋಗಿಸುತ್ತಿರುವ ಪ್ರಮುಖ ರಾಜ್ಯವಾಗಿದೆ. ಗ್ಯಾರಂಟಿ ಯೋಜನೆಗಳು ಮಹಿಳೆಯರ ಸದ್ದಿಲ್ಲದ ಛಲವನ್ನು ಕಣ್ಣಿಗೆ ಕಾಣುವ ಯಶಸ್ಸನ್ನಾಗಿ ಪರಿವರ್ತನೆ ಮಾಡುತ್ತಿವೆ ಎಂದರು.

ರೈತನ ಮಗ ವಿಜ್ಞಾನಿಯಾಗಬೇಕು. ನೇಕಾರನ ಮಗಳು ಉದ್ಯಮಿಯಾಗಬೇಕು, ಪ್ರತಿ ಮಗುವಿಗೂ ಭವಿಷ್ಯ ತನ್ನ ಕೈಯಲ್ಲಿದೆ ಎಂಬ ವಾತಾವರಣ ನಿರ್ಮಿಸಬೇಕಿದೆ ಎಂದರು.ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ , ಗೃಹಜ್ಯೋತಿ, ಯುವನಿಧಿ, ಗ್ಯಾರಂಟಿ ಯೋಜನೆಗಳಿಗೆ ಈವರೆಗೆ 96 ಸಾವಿರ ಕೋಟಿಗೂ ಹೆಚ್ಚು ವಿನಿಯೋಗಿಸಲಾಗಿದೆ. ಶಕ್ತಿ ಯೋಜನೆಯಲ್ಲಿ 500 ಕೋಟಿ ಟ್ರಿಪ್‌ಗಳ ಮೂಲಕ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ ಎಂದು ಹೇಳಿದರು.ಕರ್ನಾಟಕವು ತಲಾ ಆದಾಯದಲ್ಲಿ ಮೊದಲ ಸ್ಥಾನದಲ್ಲಿದ್ದು, ಕಳೆದ 10 ವರ್ಷಗಳಲ್ಲಿ ಶೇ.101ರಷ್ಟು ಪ್ರಗತಿ ಸಾಧಿಸಿದೆ. 2024-25ರ ವೇಳೆಗೆ ತಲಾ ಆದಾಯವು 2,04,605 ರೂ.ಗಳಿಗೆ ತಲುಪಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಜೊತೆಗೆ ಸಹಾಯಧನ, ಪ್ರೋತ್ಸಾಹಧನ, ವಿದ್ಯಾರ್ಥಿ ವೇತನ, ಸಾಮಾಜಿಕ ಯೋಜನೆಗಳಿಗೆ 1.12 ಲಕ್ಷ ಕೋಟಿ ರೂ.ಗೂ ಹೆಚ್ಚಿನ ಹಣವನ್ನು ಜನ ಕಲ್ಯಾಣಕ್ಕಾಗಿ ಖರ್ಚು ಮಾಡಲಗುತ್ತಿದೆ ಎಂದರು. ಮಹಾತಗಾಂಧಿ ಸೇರಿದಂತೆ ಸ್ವಾತಂತ್ರ್ಯ ಹೋರಾಟಕ್ಕೆ ಶ್ರಮಿಸಿದವರನ್ನು ಸರಿಸಿದ ಮುಖ್ಯಮಂತ್ರಿ, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಮಡಿದವರು, ಭಾರತ-ಪಾಕಿಸ್ತಾನ ಸಂಘರ್ಷದಲ್ಲಿ ಹುತಾತರಾದ ಎಲ್ಲರನ್ನು ದೇಶವು ನೆನಪಿಡುತ್ತದೆ ಎಂದರು. ಕರ್ನಾಟಕ ಅಭಿವೃದ್ಧಿ ಮಾದರಿಗೆ ಮನ್ನಣೆ ದೊರೆಯುತ್ತಿರುವುದು ಹೆಮೆಯ ಸಂಗತಿಯಾಗಿದೆ. ಅಸಮಾನತೆಯನ್ನು ತಗ್ಗಿಸಲು ನಾವು ಗ್ಯಾರಂಟಿ ಯೋಜನೆಗಳನ್ನು, ಜನ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಲು ತೀರ್ಮಾನಿಸಲಾಗಿದೆ. ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಹಾಗೂ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಳ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಎರಡು ವರ್ಷದಲ್ಲಿ ರಾಜ್ಯದ ಅಭಿವೃದ್ಧಿ ಮಾದರಿಗೆ 250ಕ್ಕೂ ಹೆಚ್ಚಿನ ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ ಎಂದು ತಿಳಿಸಿದರು.

ನಮಗೆ ಬೇಕಾಗಿರುವಷ್ಟು ಯೂರಿಯಾ ಗೊಬ್ಬರವನ್ನು ಒಕ್ಕೂಟ ಸರ್ಕಾರ ಪೂರೈಸದೆ ಸಮಸ್ಯೆಯಾಗಿದ್ದು, ಕೂಡಲೇ ಪರಿಹರಿಸಬೇಕೆಂದು ಒಕ್ಕೂಟ ಸರ್ಕಾರವನ್ನು ಒತ್ತಾಯಿಸುವುದಾಗಿ ಹೇಳಿದರು. ಹಿಂದಿನ ಸರ್ಕಾರ ಬಾಕಿ ಉಳಿಸಿದ್ದ 609 ಕೋಟಿ ರೂ. ಸೇರಿದಂತೆ 3,280 ಕೋಟಿ ರೂ. ಪ್ರೋತ್ಸಾಹಧನವನ್ನು ಹೈನುಗಾರರಿಗೆ ಪಾವತಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಹೊಸದಾಗಿ ವಸತಿ ಶಾಲೆ ಹಾಗೂ ವಸತಿ ನಿಲಯಗಳನ್ನು ಸ್ಥಾಪಿಸಲಾಗುತ್ತಿದೆ. 500 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಸ್ಥಾಪಿಸುತ್ತಿದ್ದು, 2500 ಕೋಟಿ ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಕ್‌ ಕಾಲೇಜುಗಳನ್ನು ಉನ್ನತೀಕರಿಸುತ್ತಿದ್ದೇವೆ. 13 ಹೊಸ ತಾಂತ್ರಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುತ್ತಿದ್ದು, ರಾಜ್ಯದ ಶಿಕ್ಷಣ ನೀತಿ ಆಯೋಗದ ವರದಿ ಸಲ್ಲಿಕೆಯಾಗಿದ್ದು, ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು.

ರಾಜ್ಯಾದ್ಯಂತ ಒಂದೇ ಮಾದರಿಯಲ್ಲಿ ಸ್ವಸಹಾಯ ಗುಂಪುಗಳಿಗೆ ಅಕ್ಕ ಕೆಫೆಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಸಾಮಾಜಿಕ, ಆರ್ಥಿಕ, ರಾಜಕೀಯ ಸ್ವಾತಂತ್ರ್ಯ ಹಾಗೂ ನ್ಯಾಯಗಳ ನಿರಂತರ ರಕ್ಷಿಸುವ ಪ್ರತಿಜ್ಞೆ ಮಾಡಿ ಈ ಸ್ವಾತಂತ್ರ್ಯೋತ್ಸವನ್ನು ಅರ್ಥಪೂರ್ಣಗೊಳಿಸೋಣ ಎಂದು ಕರೆ ನೀಡಿದರು.

RELATED ARTICLES

Latest News