Sunday, January 5, 2025
Homeರಾಜ್ಯಉಡುಪಿ ಶ್ರೀಕೃಷ್ಣ ಮಠದಲ್ಲಿ ಪೊಲೀಸರ ಮೇಲೆ ಹಲ್ಲೆಗೆತ್ನಿಸಿದ 8 ಅಯ್ಯಪ್ಪ ಮಾಲಾಧಾರಿಗಳ ಸೆರೆ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಪೊಲೀಸರ ಮೇಲೆ ಹಲ್ಲೆಗೆತ್ನಿಸಿದ 8 ಅಯ್ಯಪ್ಪ ಮಾಲಾಧಾರಿಗಳ ಸೆರೆ

8 Ayyappa devotees arrested for attacking police at Udupi Sri Krishna Math

ಉಡುಪಿ,ಜ.2- ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕೆ ಬಂದು ದಾಂಧಲೆ ನಡೆಸಿ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ 8 ಮಂದಿ ಅಯ್ಯಪ್ಪ ಮಾಲಾಧಾರಿಗಳನ್ನು ಬಂಧಿಸಲಾಗಿದೆ.

ಇತ್ತೀಚೆಗೆ ಈ ಘಟನೆ ನಡೆದಿದ್ದು, ಹೈದರಬಾದಿನ ಶಿವಕುಮಾರ, ವಿಶಾಲ್, ರಾಜು, ನವೀನ್ ರಾಜ್, ರವಿಕಿರಣ್, ಭಾನು, ಉಮೆಂರ್,ರವಿಕಾಂತ್ ಬಂಧಿತರು.ಶ್ರೀಕೃಷ್ಣಮಠದ ಒಳಗೆ ಹಾಗೂ ಹೊರಗೆ ತೀವ್ರ ಜನಸಂದಣಿಯಿಂದ ನೂಕು ನುಗ್ಗಲು ಉಂಟಾಗಿತ್ತು. ಈ ವೇಳೆ ದೇವರ ದರ್ಶನಕ್ಕೆಂದು ಬಂದಿದ್ದ ಹಿನ್ನಲೆಯಲ್ಲಿ ಭದ್ರತಾ ಸಿಬ್ಬಂಧಿ ನಿಯಂತ್ರಣಕ್ಕೆ ಮುಂದಾಗಿದ್ದರು .

ಈ ವೇಳೆ ರಥ ಬೀದಿಯಲ್ಲಿ ನಡೆಯುವ ರಥೋತ್ಸವದ ದೇವರ ಉತ್ಸವ ಮೂರ್ತಿ ಪಲ್ಲಕ್ಕಿಯೊಂದಿಗೆ ಕೃಷ್ಣಮಠದ ಒಳಭಾಗಕ್ಕೆ ಬರುವ ವೇಳೆ ಸುಮಾರು 7-8 ಜನ ಅಯ್ಯಪ್ಪ ಮಾಲಾಧಾರಿಗಳು ದಾಂಧಲೆ ನಡೆಸಿಹಲವರ ಮೇಲೆ ಹಲ್ಲೆ ಮಾಡಿದ್ದಾರೆ.

ಈ ವೇಳೆ ಮಠದ ದಿವಾನ ನಾಗರಾಜ ಆಚಾರ್ಯ ಅವರು ಅಯ್ಯಪ್ಪ ಮಾಲಾಧಾರಿಗಳನ್ನು ತಡೆಯಲು ಪ್ರಯತ್ನಿಸಿದ್ದಾರೆ. ಈ ವೇಲೆ ಅವರ ಮೇಲೂ ಹಲ್ಲೆಗೆ ಯತ್ನಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ.

ಉಡುಪಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿ, ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

RELATED ARTICLES

Latest News