ಅಲೂಗಡ್ಡೆ ಕೋಲ್ಡ್ ಸ್ಟೋರೇಜ್ ಮೇಲ್ಛಾವಣಿ ಕುಸಿದು 8 ಮಂದಿ ಸಾವು

Social Share

ಲಕ್ನೋ,ಮಾ.17-ಅಲೂಗಡ್ಡೆ ಕೋಲ್ಡ್ ಸ್ಟೋರೇಜ್ ಮೇಲ್ಛಾವಣಿ ಕುಸಿದು ಬಿದ್ದು ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಸಂಬಾಲ್ ಚಂದೌಸಿ ಪ್ರದೇಶದಲ್ಲಿ ನಡೆದಿದೆ.

ಘಟನೆಯಲ್ಲಿ ಇತರ 11 ಮಂದಿಯ ಪ್ರಾಣ ರಕ್ಷಿಸಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ರಾಜ್ಯ ಪಡೆಗಳು ಯಶಸ್ವಿಯಾಗಿವೆ ಎಂದು ಮೊರಾದಾಬಾದ್ ಡಿಐಜಿ ಶಲಭ್ ಮಾಥುರ್ ತಿಳಿಸಿದ್ದಾರೆ.

ಅವಶೇಷಗಳಡಿ ಇನ್ನಿತರ ಹಲವಾರು ಮಂದಿ ಸಿಲುಕಿರುವ ಸಾಧ್ಯತೆ ಇದ್ದು ರಕ್ಷಣಾ ಕಾರ್ಯ ಮುಂದುವರೆಸಲಾಗಿದೆ ಶೋಧ ಕಾರ್ಯಕ್ಕೆ ಸ್ನಿಫರ್ ಡಾಗ್‍ಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ಅವರು ವಿವರಣೆ ನೀಡಿದ್ದಾರೆ.

ಅಲೂಗಡ್ಡೆ ಕೋಲ್ಡ್ ಸ್ಟೋರೇಜ್‍ಮಾಲೀಕನ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಸಂಭಾಲ ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ತಿಳಿಸಿದ್ದಾರೆ.

ಬಹುಮಹಡಿ ವಾಣಿಜ್ಯ ಸಂಕೀರ್ಣದಲ್ಲಿ ಭಾರಿ ಬೆಂಕಿ, 6 ಮಂದಿ ಸಾವು

ಮಾಲೀಕ ಮತ್ತು ಇತರ ಇಬ್ಬರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ನಾವು ನಾಲ್ವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದೇವೆ. ಪ್ರಮುಖ ಆರೋಪಿಗಳು ನಾಪತ್ತೆಯಾಗಿದ್ದಾರೆ ಮತ್ತು ಹುಡುಕಾಟ ನಡೆಸುತ್ತಿದ್ದಾರೆ. ಅವಶೇಷಗಳನ್ನು ತೆಗೆದ ನಂತರವೇ ಈ ಕಟ್ಟಡದ ಕುಸಿತಕ್ಕೆ ನಿಜವಾದ ಕಾರಣವನ್ನು ಹೇಳಲು ನಮಗೆ ಸಾಧ್ಯವಾಗುತ್ತದೆ. ಅವರು ಹೇಳಿದರು.

ಬರೋಬ್ಬರಿ 4 ಸಾವಿರ ಚಿತ್ರಮಂದಿರಗಳಲ್ಲಿ ತೆರೆಗಪ್ಪಳಿಸುತ್ತಿದೆ ಕಬ್ಜ ಚಿತ್ರ

ನಿಗತ ಮಾನದಂಡದ ಆಧಾರದ ಮೇಲೆ ಕೋಲ್ಡ್ ಸ್ಟೋರೇಜ್ ನಿರ್ಮಿಸದಿರುವುದೆ ಅವಘಡಕ್ಕೆ ಕಾರಣ ಎಂದು ಆರೋಪಿಸಲಾಗಿದೆ.

#8Death, #ColdStorage, #roofollapse, #UP,

Articles You Might Like

Share This Article