ಬೆಮೆತಾರಾ, ಅ.29- ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯಲ್ಲಿ ಸರಕು ಸಾಗಣೆ ವಾಹನವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿ 8 ಮಂದಿ ಸಾವನ್ನಪ್ಪಿದ್ದಾರೆ. ಕಥಿಯಾ ಗ್ರಾಮದ ಬಳಿ ಇಂದು ಮುಂಜಾನೆ ಈ ಅಪಘಾತ ಸಂಭವಿಸಿದೆ.ಮೃತರಲ್ಲಿ ಮೂವರು ಮಕ್ಕಳು ಸೇರಿದ್ದು ಘಟನೆಯಲ್ಲಿ 23 ಮಂದಿ ಗಾಯಗೊಂಡಿದ್ದಾರೆ.
ಕೌಟುಂಬಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಿನಿ ಟ್ರಕ್‌ಗೆ ಹಿಂತಿರುಗುತ್ತಿದ್ದಾಗ ಕಥಿಯಾ ಗ್ರಾಮದ ಬಳಿ ನಿಲ್ಲಿಸಲಾಗಿತ್ತು ಈ ವೇಲೆ ಹಿಂದಿನಿಂದ ಸರಕು ಸಾಗಣೆ ಲಾರಿ ಡಿಕ್ಕಿ ಹೊಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರನ್ನು ಪಥರಾ ಗ್ರಾಮದ ಭೂರಿ ನಿಶಾದ್ (50), ನೀರಾ ಸಾಹು (55), ಗೀತಾ ಸಾಹು (60), ಅಗ್ನಿಯಾ ಸಾಹು (60), ಖುಷ್ಬು ಸಾಹು (39), ಮಧು ಸಾಹು (5), ರಿಕೇಶ್ ನಿಶಾದ್ (6) ಮತ್ತು ಟ್ವಿಂಕಲ್ ನಿಶಾದ್ ಎಂದು ಗುರುತಿಸಲಾಗಿದೆ. 6) ಎಂದು ಗುರುತಿಸಲಾಗಿದೆ. ಇವರು ಮಿನಿ ಟ್ರಕ್‌ನಲ್ಲಿ ತಿರೈಯಾ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಗಾಯಗೊಂಡವರನ್ನು ಎರಡು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನಂತರ, ತೀವ್ರವಾಗಿ ಗಾಯಗೊಂಡ ನಾಲ್ವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ರಾಯ್‌ಪುರಕ್ಕೆ ಸ್ಥಳಾಂತರಿಸಲಾಯಿತು ಎಂದು ಅವರು ಹೇಳಿದರು.