ಜಮ್ಮು-ಕಾಶ್ಮೀರ : ಕಂದಕಕ್ಕೆ ಕಾರು ಉರುಳಿಬಿದ್ದು 8 ಮಂದಿ ಸಾವು

Social Share

ಜಮ್ಮು, ನ.17- ಕಾರೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಸೇರಿ ಎಂಟು ಮಂದಿ ಮೃತಪಟ್ಟಿರುವ ಘಟನೆ ಜಮ್ಮು-ಕಾಶ್ಮೀರದ ಕಿಶ್ತ್ವಾ ರ್ ಪ್ರದೇಶದ ಬಳಿ ಸಂಭವಿಸಿದೆ.
ನಿನ್ನೆ ಸಂಜೆ ಇಲ್ಲಿನ ಮಾರ್ವಾ ಮೂಲಕ ತೆರಳುತ್ತಿದ್ದ ಟಾಟಾ ಸುಮೋ ಕಾರೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಚುಂಜೋರ್, ನೌಪಾಚಿ, ಕದರ್ನಾ ಮಾರ್ವಾದ ನಿವಾಸಿಗಳು ಎಂದು ಹೇಳಲಾಗಿದ್ದು ಒಬ್ಬರ ಗುರುತು ಪತ್ತೆಯಾಗಿಲ್ಲ.ಅಪಘಾತದ ಸುದ್ದಿ ತಿಳಿದು ದಿಗ್ಭ್ರಮೆ ವ್ಯಕ್ತಪಡಿಸಿರುವ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹನ ಪ್ರತಿಕ್ರಿಯಿಸಿ ಮೃತರ ಕುಟುಂಬಗಳಿಗೆ ಅಗತ್ಯ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಇರೋ ಬಸ್ಸುಗಳಿಗೆ ಚಾಲಕರಿಲ್ಲ, ಬಿಎಂಟಿಸಿಗೆ ಹೊಸ ಬಸ್ ಖರೀದಿ ಅವಶ್ಯಕತೆ ಏನಿತ್ತು.. ?

ಅಪಘಾತಕ್ಕೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿ ಮೃತರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲಾ ಸಹಾಯ ನೀಡುವುದಾಗಿ ಭರವಸೆ ನೀಡಿದ್ದಾರೆ.

Articles You Might Like

Share This Article