ಉತ್ತರಪ್ರದೇಶ : ಬಸ್ ಹಾಗೂ ಡಬಲ್ ಡೆಕ್ಕರ್ ನಡುವೆ ಡಿಕ್ಕಿ, 8 ಮಂದಿ ಸಾವು..!

Social Share

ಲಖ್ನೋ,ಜು.25- ಡಬಲರ್ ಡಕ್ಕರ್ ಖಾಸಗಿ ಬಸ್ ಮತ್ತೊಂದು ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ನಾರಾಯಣಪುರ ಗ್ರಾಮದ ಲೋನಿ ಕಾಟ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
50 ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಡಬಲಡಕ್ಕರ್ ಬಸ್ನಾರಾಯಣಪುರ ಗ್ರಾಮದ ಪೂರ್ವಾಂಚಲ ಎಕ್ಸ್ಪ್ರೆಸ್ ವೇ ಬಳಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. 18 ಮಂದಿ ಗಾಯಗೊಂಡಿದ್ದಾರೆ. ಇವರೆಲ್ಲರನ್ನೂ ಹೈದರ್ಘರ್ ಸಮುದಾಯ ಆರೊಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿರುವ ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋ ಟ್ರಾಮಾ ಸೆಂಟರ್ಗೆ ಕಳುಹಿಸಿಕೊಡಲಾಗಿದೆ.

ಈ ಎರಡು ಬಸ್ಗಳಿಗೆ ದೆಹಲಿಗೆ ತೆರಳಿದ್ದವು ಎಂದು ಹೇಳಲಾಗಿದೆ. ಬಸ್ ಅತಿ ವೇಗವಾಗಿ ಚಾಲನೆ ಮಾಡುತ್ತಿದುದ್ದೇ ಈ ದುರಂತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದುರಂತದಲ್ಲಿ ಸಾವನ್ನಪ್ಪಿದ ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಗಾಯಾಳುಗಳಿಗೆ ತಕ್ಷಣದ ಪರಿಹಾರ ನೀಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ಥಳೀಯ ಆಡಳಿತ ಸೂಚನೆ ನೀಡಿದೆ.

Articles You Might Like

Share This Article