Monday, April 21, 2025
Homeರಾಷ್ಟ್ರೀಯ | Nationalಜಾರ್ಖಂಡ್ : ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲರ ಹತ

ಜಾರ್ಖಂಡ್ : ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲರ ಹತ

8 Naxalites Killed In Police Encounter In Jharkhand's Bokaro, Operation Still On

ರಾಂಚಿ/ನವದೆಹಲಿ, ಏ.21-ಇಂದು ಬೆಳಿಗ್ಗೆ ಜಾರ್ಖಂಡ್ನನ ಬೊಕಾರೊ ಜಿಲ್ಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಪೊಲೀಸರೊಂದಿಗೆ ನಡೆದ ಎನ್‌ ಕೌಂಟರ್‌ನಲ್ಲಿ ಎಂಟು ನಕ್ಸಲರು ಸಾವನ್ನಪ್ಪಿದ್ದಾರೆ.

ಜಿಲ್ಲೆಯ ಲಾಲ್‌ವಾನಿಯಾ ಪ್ರದೇಶದ ಲುಗು ಬೆಟ್ಟಗಳಲ್ಲಿ ಬೆಳಿಗ್ಗೆ 5.30 ರ ಸುಮಾರಿಗೆ ಗುಂಡಿನ ಚಕಮಕಿ ಪ್ರಾರಂಭವಾಯಿತು ಎಂದು ಅವರು ಅಧಿಕಾರಿಗಳು ತಿಳಿಸಿದ್ದಾರೆ. ಕೋಬ್ರಾಪಡೆಗಳು ಕಾರ್ಯಾಚರಣೆಯನ್ನು ನಡೆಸಿದ್ದು, ಇದರಲ್ಲಿ ಎಂಟು ನಕ್ಸಲರು ಸಾವನ್ನಪ್ಪಿದ್ದಾರೆ ಮತ್ತು 5 ರೈಫಲ್, ಎಂಟು ದೇಶೀಯ ನಿರ್ಮಿತ ಬಂದೂಕುಗಳು ಮತ್ತು ಒಂದು ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಕೋಬ್ರಾ ಸಿಆರ್‌ಪಿಎಫ್‌ನ ವಿಶೇಷ ಅರಣ್ಯ ಯುದ್ಧ ಘಟಕವಾಗಿದ್ದು,ಗುಂಡಿನ ಚಕಮಕಿಯಲ್ಲಿ ಭದ್ರತಾ ಸಿಬ್ಬಂದಿಗೆ ಯಾವುದೇ ಗಾಯಗಳಾಗಿರುವ ವರದಿಯಾಗಿಲ್ಲ ಎಂದು ಅವರು ಹೇಳಿದರು. ಈ ಕಾರ್ಯಾಚರಣೆಯು ಮಾರ್ಚ್- 2026 ರೊಳಗೆ ದೇಶದಿಂದ ನಕ್ಸಲ್‌ವಾದವನ್ನು ನಿರ್ಮೂಲನೆ ಮಾಡುವ ಕೇಂದ್ರ ಸರ್ಕಾರದ ಘೋಷಣೆಯ ಭಾಗವಾಗಿದೆ.

ಇನ್ನೊಂದು ಬೆಳವಣಿಗೆಯಲ್ಲಿ, ನೆರೆಯ ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣುದಿಯೋ ಸಾಯಿ ಅವರು ಇಂದು ಸಂಜೆ ನವದೆಹಲಿಯ ನಾರ್ತ್ ಬ್ಲಾಕ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಗಳು ಮತ್ತು ಸಂಬಂಧಿತ ವಿಷಯಗಳ ಸಮಗ್ರ ಪರಿಶೀಲನೆ ನಡೆಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

Latest News