ಅಕ್ರಮವಾಗಿ ಸಂಗ್ರಹಿಸಿದ್ದ 80 ಲಕ್ಷ ಮೌಲ್ಯದ ರಕ್ತಚಂದನ ವಶ, ಇಬ್ಬರ ಬಂಧನ

ಮೈಸೂರು,ಮೇ 20- ಜಮೀನಿನಲ್ಲಿ ಅಕ್ರಮವಾಗಿ ರಕ್ತಚಂದನ ತುಂಡುಗಳನ್ನು ಸಂಗ್ರಹಿಸಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಸಂಚಾರಿ ಪೊಲೀಸರ ದಳ ಬಂಧಿಸಿ ಸುಮಾರು 80 ಲಕ್ಷ ರೂ. ಮೌಲ್ಯದ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಕೆಂಗೇರಿಯ ಗಣೇಶ್(35), ಶ್ರೀರಂಗಪಟ್ಟಣದ ಸಂತೋಷ್(38) ಬಂಧಿತ ಆರೋಪಿಗಳು. ನಗರ ಹೊರವಲಯದ ಬಾಳಹಳ್ಳಿ ಗ್ರಾಮದ ವೆಂಕಟೇಶ್ ಅವರ ಜಮೀನಿನಲ್ಲಿ ರಕ್ತಚಂದನ ತುಂಡುಗಳನ್ನು ಸಂಗ್ರಹಿಸಿ ಇಟ್ಟಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಘಟಕದ ಪೊಲೀಸರು ದಾಳಿ ನಡೆಸಿ ರಕ್ತಚಂದನ ತುಂಡುಗಳನ್ನು ಜಪ್ತಿ ಮಾಡಿದ್ದಾರೆ. ಪ್ರಕರಣ ಸಂಬಂಧ ಜಮೀನು ಮಾಲೀಕ ವೆಂಕಟೇಶ್ ಅವರನ್ನು ವಿಚಾರಣೆ ನಡೆಸಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >