ನೈಜೀರಿಯಾ ಪ್ರಜೆ ಸೇರಿ 35 ಆರೋಪಿಗಳ ಬಂಧನ, 80 ಬೈಕ್‍ ವಶ

Social Share

ಬೆಂಗಳೂರು, ಫೆ.3- ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು 35 ಮಂದಿ ಆರೋಪಿಗಳನ್ನು ಬಂಧಿಸಿ 35 ಲಕ್ಷ ಮೌಲ್ಯದ ಮಾದಕ ವಸ್ತು, 80 ದ್ವಿಚಕ್ರ ವಾಹನಗಳು ಮತ್ತು ನಾಲ್ಕು ಚಕ್ರದ 6 ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಮಾಡುವವರ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ಕಳೆದ ಒಂದು ತಿಂಗಳಿನಿಂದ ಕಾರ್ಯಾಚರಣೆ ನಡೆಸಿ ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿದಂತೆ 35 ಆರೋಪಿಗಳನ್ನು ಬಂಧಿಸಿ 35 ಲಕ್ಷ ಮೌಲ್ಯದ ಗಾಂಜಾ, ಸಿಂಥೆಟಿಕ್ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ಒಟ್ಟು 23 ಎನ್‍ಡಿಪಿಎಸ್ ಪ್ರಕರಣಗಳಲ್ಲಿ 35 ಆರೋಪಿಗಳನ್ನು ಬಂಧಿಸಿರುವ ಪೊಲೀಸರು 82 ಕೆಜಿ 801 ಗ್ರಾಂ ಗಾಂಜಾ ಹಾಗೂ ಸಿಂಥೆಟಿಕ್ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಎಸ್‍ಪಿ ಡಾ.ಕೋನವಂಶಿಕೃಷ್ಣ ಪತ್ರಿಕಾಗೋಷ್ಠಿಯಲ್ಲಿ ವಿವರಣೆ ನೀಡಿದರು.  ಅಪರ ಪೊಲೀಸ್ ಅೀಧಿಕ್ಷಕ ಲಕ್ಷ್ಮಿ ಗಣೇಶ್ ಅವರ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಮೂವರ ಬಂಧನ- 28 ದ್ವಿಚಕ್ರ ವಾಹನ, 3 ಕಾರು ವಶ: ಹೊಟೇಲ್‍ಗಳ ಮುಂದೆ ಹಾಗೂ ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಹಾಗೂ ಕಾರುಗಳನ್ನು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಜಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೂಫಿಯಾನಾ ಶರೀಫ್ (32), ಮಹಮ್ಮದ್ ಸಾಯಿಲ್ (22), ಸಾದಿಕ್ ಪಾಷ (24) ಬಂಧಿತ ಆರೋಪಿಗಳು.
ಇವರಿಂದ ಬೆಂಗಳೂರು ನಗರದ ಬಾಗಲೂರು, ಚಿಕ್ಕಜಾಲ, ಯಲಹಂಕ, ದೊಡ್ಡಬಳ್ಳಾಪುರ ಹಾಗೂ ನಂದಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕಳ್ಳತನ ಮಾಡಿದ್ದ ಒಟ್ಟು 28 ದ್ವಿಚಕ್ರ ವಾಹನಗಳು, ಮೂರು ಕಾರುಗಳು, ಒಂದು ಲ್ಯಾಪ್‍ಟಾಪ್ ವಶಪಡಿಸಿಕೊಂಡಿದ್ದಾರೆ.
ಇದೇ ಪೊಲೀಸ್ ಠಾಣೆ ವ್ಯಾಪ್ತಿಯ ಮತ್ತೊಂದು ಪ್ರಕರಣದಲ್ಲಿ ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ತಾತಹಳ್ಳಿ ಗ್ರಾಮದ ನಿವಾಸಿ ಪೂಜಪ್ಪ (32) ಎಂಬಾತನನ್ನು ವಿಜಯಪುರ ಠಾಣೆ ಪೊಲೀಸರು ಬಂಸಿ 52 ದ್ವಿಚಕ್ರ ವಾಹನಗಳು, 3 ನಾಲ್ಕು ಚಕ್ರದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಮನೆಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿದ್ದ ಪ್ರಕರಣದಲ್ಲಿ ಪೊಲೀಸರು ತನಿಖೆ ಕೈಗೊಂಡು ಹಲವು ಮಾಹಿತಿಗಳನ್ನು ಕಲೆ ಹಾಕಿ ಆರೋಪಿಯನ್ನು ಬಂಸಿ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತಮ ಕಾರ್ಯವನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿದ್ದಾರೆ.

Articles You Might Like

Share This Article