Sunday, June 30, 2024
Homeಬೆಂಗಳೂರುಸಂಚಾರ ನಿಯಮ ಉಲ್ಲಂಘಿಸುವವರಿಗೆ ಬಿಸಿ ಮುಟ್ಟಿಸಿದ ಪೊಲೀಸರು, 801 ಪ್ರಕರಣ ದಾಖಲು

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಬಿಸಿ ಮುಟ್ಟಿಸಿದ ಪೊಲೀಸರು, 801 ಪ್ರಕರಣ ದಾಖಲು

ಬೆಂಗಳೂರು,ಜೂ.27-ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಪಶ್ಚಿಮ ವಿಭಾಗದ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 801 ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಯಿಂದಾಗಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿರುವ ಹಿನ್ನಲೆಯಲ್ಲಿ ಈ ಕಾರ್ಯಚರಣೆ ನಡೆಸಲಾಗಿದೆ.ಏಕಮುಖ ಸಂಚಾರಕ್ಕೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವವರ ವಿರುದ್ದ 332 ಪ್ರಕರಣ , ತಪ್ಪು ನಿಲುಗಡೆ 128, ಫುಟ್ಪಾತ್‌ನಲ್ಲಿ ಪಾರ್ಕಿಂಗ್‌ 16, ಅಜಾಗರೂಕತೆ ಚಾಲನೆ 7, ವೀಲ್‌ ಕ್ಲಾಂಪ್‌ 21 ಹಾಗೂ ಇತರೆ ಸಂಚಾರಿ ನಿಯಮ ಉಲ್ಲಂಘಿಸಿದ 269 ಪ್ರಕರಣಗಳು ದಾಖಲಾಗಿವೆ.

ಇದೇ ವೇಳೆ ವಾಹನ ಚಾಲಕರು ಹಾಗೂ ಸವಾರರಿಗೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಹಾಗೂ ಸಂಚಾರ ನಿಯಮಗಳ ಮಹತ್ವದ ಬಗ್ಗೆ ಸಂಚಾರಿ ಪೊಲೀಸರು ಅರಿವು ಮೂಡಿಸಿದರು.

ಇದೇ ರೀತಿ ಸಂಚಾರ ಪೂರ್ವ ವಿಭಾಗದ ಪೊಲೀಸರು ಸಹ ವಿಶೇಷ ಕಾರ್ಯಾಚರಣೆ ನಡೆಸಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರು ಹಾಗೂ ಚಾಲಕರ ವಿರುದ್ಧ 482 ಪ್ರಕರಣಗಳನ್ನು ದಾಖಲಿಸಿಕೊಂಡ 2.41 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಸಹ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

RELATED ARTICLES

Latest News