ಮಂಡ್ಯ,ಡಿ.19-ಮೂರನೇ ಬಾರಿಗೆ ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮೇಳನ ಇತಿಹಾಸ ಸೃಷ್ಟಿಸಲಿದೆ. ಹಲವು ಹೊಸತನಗಳಿಗೆ ಸಾಕ್ಷಿಯಾಗುತ್ತಿರುವ ಸಾಹಿತ್ಯ ಸಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿ ಸಜ್ಜಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಎನ್.ಚಲುವರಾಯಸ್ವಾಮಿ ಅವರು ಹೇಳಿದರು.
ನಗರದ ಸ್ಯಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಹಿಂಭಾಗದಲ್ಲಿ ನಿರ್ಮಿಸುತ್ತಿರುವ ವೇದಿಕೆಗಳ ಸಿದ್ಧತೆ ಕಾರ್ಯಗಳ ಪರಿಶೀಲನೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
70-80 ಎಕರೆ ಪ್ರದೇಶದಲ್ಲಿ ಪ್ರಧಾನ ವೇದಿಕೆ, ಎರಡು ಸಮಾನಾಂತರ ವೇದಿಕೆ, 60 ಎಕರೆ ಪ್ರದೇಶದಲ್ಲಿ ಪಾರ್ಕಿಂಗ್ಗೆ ವ್ಯವಸ್ಥೆ ಮಾಡಲಾಗಿದೆ. 55 ವಸ್ತುಪ್ರದರ್ಶನ ಮಳಿಗೆಗಳು, 350 ವಾಣಿಜ್ಯ ಮಳಿಗೆ , 450 ಪುಸ್ತಕ ಮಳಿಗೆಗಳು ಕೂಡ ತಲೆಎತ್ತಿವೆ. ಊಟಕ್ಕೆ 100 ಕೌಂಟರ್, ನೋಂದಾಯಿತ ಪ್ರತಿನಿಧಿಗಳಿಗೆ 40 ಕೌಂಟರ್ಗಳನ್ನು ತೆರೆಯಲಾಗಿದ್ದು ಎಲ್ಲರಿಗೂ ಒಂದೇ ಊಟದ ಮೆನು ಇರಲಿದೆ ಎಂದರು.
ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಆಹಾರದ ಗುಣಮಟ್ಟ ಪರೀಕ್ಷೆ ಮಾಡಿ ವರದಿ ಪಡೆಯಲಾಗುತ್ತದೆ. ನೀರನ್ನು ಸಹ ಪರೀಕ್ಷಿಸಲಾಗುತ್ತದೆ. ಸ್ವಚ್ಛತೆಗೆ 250 ಸಿಬ್ಬಂದಿಯನ್ನು ನೇಮಿಸಲಾಗಿದೆ. 150ಕ್ಕೂ ಹೆಚ್ಚು ವಿವಿಧ ಸ್ಥಳಗಳಲ್ಲಿ ಶೌಚಾಲಯ ನಿರ್ಮಿಸಲಾಗಿದೆ. 6 ಸಾವಿರ ನೋಂದಾಯಿತ ಪ್ರತಿನಿಧಿಗಳಿಗೆ ಅರ್ಧ ಕೆಜಿ ಬೆಲ್ಲ, ಅರ್ಧ ಕೆಜಿ ಸಕ್ಕರೆ, ಬ್ರಶ್, ಪೇಸ್ಟ್, ಸೋಪು, ಬೆಡ್ ಶೀಟ್ ಒಳಗೊಂಡ ಲೆದರ್ ಬ್ಯಾಗ್ನಲ್ಲಿ ವಸತಿ ಮತ್ತು ಸಮೇಳನದ ಕಿಟ್ ನೀಡಲಾಗುವುದು ಎಂದರು.
ಸಮೇಳನಕ್ಕೆ ಆಗಮಿಸುವ ಪ್ರತಿನಿಧಿಗಳಿಗೆ 7 ತಾಲ್ಲೂಕು ಕೇಂದ್ರಗಳಿಂದ 15 ಉಚಿತ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಮಂಡ್ಯ ನಗರದಿಂದ ಕೂಡ ಬಸ್ಗಳು ಸಮೇಳನದ ಸ್ಥಳಕ್ಕೆ ಉಚಿತವಾಗಿ ಕರೆತರಲಿವೆ. ಮೂರು ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್ ಸ್ಥಳದಿಂದ ಕೂಡ ಉಚಿತ ಸಾರಿಗೆ ವಾಹನದ ವ್ಯವಸ್ಥೆ ಮಾಡಲಾಗಿದೆ. ಮೈಸೂರು ಬೆಂಗಳೂರಿನಿಂದ 30 ನಿಮಿಷಕ್ಕೆ ಒಂದು ವಿಶೇಷ ಬಸ್ ಸಂಚರಿಸಲಿದೆ ಎಂದರು.
ಸಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರು ಇಂದು ಸಂಜೆ ಮಂಡ್ಯಕ್ಕೆ ಆಗಮಿಸಲಿದ್ದು ಅವರನ್ನು ಬರಮಾಡಿಕೊಳ್ಳಲಾಗುವುದು. ಡಿ.20ರ ಶುಕ್ರವಾರ ಬೆಳಗ್ಗೆ 6ಕ್ಕೆ ಧ್ವಜಾರೋಹಣ ನೆರವೇರಲಿದೆ. 7 ಗಂಟೆಗೆ ಸಮೇಳನಾಧ್ಯಕ್ಷರ ಮೆರವಣಿಗೆ ಆರಂಭವಾಗಲಿದೆ.
ಮೆರವಣಿಗೆಯಲ್ಲಿ ಹಗಲುವೇಷ, ಮಹಿಳಾ ವೀರಗಾಸೆ, ಗೊರವರ ಕುಣಿತ, ಕಂಸಾಳೆ, ಕರಗ, ಸುಗ್ಗಿಕುಣಿತ, ಕೋಲಾಟ ಒಳಗೊಂಡಂತೆ ಪೂರ್ಣಕುಂಭ ಹೊತ್ತ 300 ಮಹಿಳೆಯರು ಹಾಗೂ 50ಕ್ಕೂ ಹೆಚ್ಚು ಕಲಾತಂಡಗಳು ಪಾಲ್ಗೊಳ್ಳಲಿವೆ. ಮೆರವಣಿಗೆಗೆ ಮೈಸೂರು ಅರಮನೆ ರಾಜವಂಶಸ್ಥರಾದ ಪ್ರಮೋದಾದೇವಿ ಅವರು ಚಾಲನೆ ನೀಡಲಿದ್ದಾರೆ ಎಂದರು.
ಮೂರು ವೇದಿಕೆಗಳನ್ನು ನಿರ್ಮಿಸಲಾಗುತ್ತಿದೆ. ಪ್ರಧಾನ ವೇದಿಕೆಯಲ್ಲಿ ಸಮೇಳನಾಧ್ಯಕ್ಷರ ಜೊತೆಗಿನ ಸಂವಾದವೂ ಸೇರಿದಂತೆ 11 ಗೋಷ್ಠಿಗಳು, 2 ಸಮಾನಾಂತರ ವೇದಿಕೆಗಳಲ್ಲಿ 20 ಗೋಷ್ಠಿಗಳು ಆಯೋಜನೆಗೊಂಡಿವೆ. ಸಮೇಳನದ ಅಂಗವಾಗಿ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರ, ಅಂಬೇಡ್ಕರ್ ಭವನ, ಸಮಾನಾಂತರ ವೇದಿಕೆ ಮತ್ತು ಪ್ರಧಾನ ವೇದಿಕೆಗಳಲ್ಲಿ ಸ್ಥಳೀಯ ಕಲಾವಿದರ ಕಾರ್ಯಕ್ರಮಗಳು ನಡೆಯಲಿದೆ. ಪ್ರಧಾನ ವೇದಿಕೆಯ ಯಾತ್ರೆ ನುಡಿ ಜಾತ್ರೆಯ ಸ್ವರ ಯಾತ್ರೆ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಡಿ.20ರ ಮೊದಲ ದಿನ ಸಾಧುಕೋಕಿಲ ಮತ್ತು ರಾಜೇಶ್ ಕೃಷ್ಣನ್ ತಂಡದವರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಡಿ.21ರಂದು ಅರ್ಜುನ್ ಜನ್ಯ ಮತ್ತು ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಡಿ.22ರಂದು ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಪೊಲೀಸ್ ಬ್ಯಾಂಡ್ ಇರಲಿದೆ ಎಂದು ವಿವರಿಸಿದರು.
ಚೆಸ್ಕಾಂ ವತಿಯಿಂದ ನಗರದಲ್ಲಿ ವಿದ್ಯುತ್ ಅಲಂಕಾರ ಮಾಡಲಾಗುತ್ತಿದೆ. ನಾಡುನುಡಿಗೆ ಸೇವೆ ಸಲ್ಲಿಸಿದ 170 ಮಂದಿ ಸಾಧಕರನ್ನು ಸನಾನಿಸಲಾಗುತ್ತಿದೆ. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮೇಳನದ ಸರಣಾರ್ಥ 87 ಪುಸ್ತಕಗಳನ್ನು ಬಿಡುಗಡೆ ಮಾಡಲಾಗುತ್ತದೆ. ಜೊತೆಗೆ ಬೆಲ್ಲದಾರತಿ ಹೆಸರಿನ ಸರಣ ಸಂಚಿಕೆ ಕೂಡ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಮಾತನಾಡಿ, ಈ ಸಮೇಳನದಲ್ಲಿ ಸಂಪೂರ್ಣ ತಂತ್ರಜ್ಞಾನ ಉಪಯೋಗಿಸಿ ಸಿದ್ಧತೆ ನಡೆಸಿದ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಲಾಗುವುದು ಎಂದರು.
ಮೂರೂ ವೇದಿಕೆಗಳಿಗೆ ಸಮಾನ ಗೌರವ, ಘನತೆ ನೀಡಲಾಗಿದೆ. ಮೂರು ವೇದಿಕೆಗೆ ಅಷ್ಟೇ ಮಹತ್ವವಿದೆ. ಸಮೇಳನದಲ್ಲಿ ಸಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರೇ ಇಂಗ್ಲಿಷ್ ನಿಂದ ಕನ್ನಡಕ್ಕೆ ಅನುವಾದ ಮಾಡಿರುವ ಪ್ರಾಚೀನ ಭಾರತದಲ್ಲಿ ರಾಜಕೀಯ ಹಿಂಸಾಚಾರ, ಕನ್ನಡದಿಂದ ಇಟಾಲಿಯನ್ಗೆ ಅನುವಾದಗೊಂಡಿರುವ ಖ್ಯಾತ ಕಾದಂಬರಿಕಾರ್ತಿ ತ್ರಿವೇಣಿ ಅವರ ಶರಪಂಜರ ಕಾದಂಬರಿ ಸಮೇಳನದಲ್ಲಿ ಬಿಡುಗಡೆ ಆಗಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕರುಗಳಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ರವಿಕುಮಾರ್ ಗಣಿಗ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಅಕ್ಕ ಸಂಸ್ಥಾಪಕರಾದ ಅಮರನಾಥ್ಗೌಡ ಸೇರಿದಂತೆ ಹಲವರು ಇದ್ದರು.
ಜಿಲ್ಲೆಯ ನಾನಾ ಭಾಗಗಳಿಂದ ಸಾಹಿತ್ಯ ಸಮೇಳನಕ್ಕೆ ಆಗಮಿಸುವವರಿಗೆ ಉಚಿತ ಸಾರಿಗೆ ವ್ಯವಸ್ಥೆ
ಜಿಲ್ಲೆಯ ನಾನಾ ಭಾಗಗಳಿಂದ ಸಾಹಿತ್ಯ ಸಮೇಳನಕ್ಕೆ ಆಗಮಿಸುವವರಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಹೇಳಿದರು. ಸ್ಯಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಹಿಂಭಾಗದಲ್ಲಿ ನಿರ್ಮಿಸಿರುವ ವೇದಿಕೆಗಳ ನಿರ್ಮಾಣ ಕಾರ್ಯದ ಸಿದ್ಧತೆ ಪರಿಶೀಲನೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರಿಗೆ ಸಾಕಷ್ಟು ಸಂಖ್ಯೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಸಮೇಳನದ ಮೂರು ದಿನ 7 ತಾಲೂಕು ಕೇಂದ್ರಗಳಿಂದ ಸಮೇಳನ ನಡೆಯುವ ಸ್ಥಳಕ್ಕೆ 15 ವಿಶೇಷ ವಾಹನಗಳನ್ನು ಒಳಗೊಂಡಂತೆ 105 ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಮೈಸೂರು ಮತ್ತು ಬೆಂಗಳೂರಿನಿಂದ ಪ್ರತಿ 30 ನಿಮಿಷಕ್ಕೆ ಒಂದರಂತೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ಮಂಡ್ಯ ನಗರದ ವಿವಿಧ ಸ್ಥಳಗಳಿಂದ ಸಮೇಳನದ ಸ್ಥಳಕ್ಕೆ ಜನರನ್ನು ಕರೆತರಲು 15 ವಾಹನಗಳ ಸಾರಿಗೆ ಸೌಲಭ್ಯವನ್ನು ಉಚಿತವಾಗಿ ಕಲ್ಪಿಸಲಾಗಿದೆ. ಮೊದಲನೆಯದಾಗಿ ಮಂಡ್ಯ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣ, ನಂದಾ ಸರ್ಕಲ್, ಫ್ಯಾಕ್ಟರಿ ಸರ್ಕಲ್, ಸ್ವರ್ಣಸಂದ್ರ, ಮಾಂಡವ್ಯ ಕಾಲೇಜ್, ಉಮಡಹಳ್ಳಿ ಗೇಟ್, ಹೊಸಬೂದನೂರು ಮಾರ್ಗವಾಗಿ ಸಮೇಳನದ ಸ್ಥಳ ತಲುಪಲಿದೆ.
ಎರಡನೆಯದಾಗಿ ಮಂಡ್ಯ ಬಸ್ ನಿಲ್ದಾಣದಿಂದ ಕೋರ್ಟ್ ನಿಲ್ದಾಣ- ವಿಶ್ವವಿದ್ಯಾಲಯ- ಕಲ್ಲಹಳ್ಳಿ- ವಿ.ವಿ.ನಗರ-ಶನೇಶ್ವರ ದೇವಸ್ಥಾನ-ಚಾಮುಂಡೇಶ್ವರಿ ದೇವಸ್ಥಾನ-ಕನ್ನಿಕಾ ಪರಮೇಶ್ವರಿ ದೇವಸ್ಥಾನ-ಕರ್ನಾಟಕ ಬಾರ್ ಸರ್ಕಲ್-ಹೊಸಹಳ್ಳಿ ಸರ್ಕಲ್-ಬೆ.ರಾಮಣ್ಣ ಸರ್ಕಲ್-ಎಂವಿಜಿ ಬೇಕರಿ-ನಂದಾ ಸರ್ಕಲ್-ಫ್ಯಾಕ್ಟರಿ ಸರ್ಕಲ್-ಸ್ವರ್ಣಸಂದ್ರ-ಮಾಂಡವ್ಯ ಕಾಲೇಜ್-ಉಮಡಹಳ್ಳಿ ಗೇಟ್-ಹೊಸಬೂದನೂರು ಮಾರ್ಗವಾಗಿ ಸಮೇಳನದ ಸ್ಥಳ ತಲುಪಲಿದೆ.
ಮೂರನೇಯದಾಗಿ ಹುಣಸೇಮರ-ಕಾಳಿಕಾಂಬ ದೇವಸ್ಥಾನ-ನಂದಾ ಸರ್ಕಲ್-ಫ್ಯಾಕ್ಟರಿ ಸರ್ಕಲ್-ಗುತ್ತಲು ಕಾಲೋನಿ-ಜಯಲಕ್ಷಿ ಟಾಕೀಸ್-ಅರಕೇಶ್ವರ ದೇವಸ್ಥಾನ-ಉಮಡಹಳ್ಳಿ ಗೇಟ್-ಹೊಸಬೂದನೂರು ಮಾರ್ಗವಾಗಿ ಸಮೇಳನದ ಸ್ಥಳ ತಲುಪಲಿದೆ. ನಾಲ್ಕನೇಯದಾಗಿ ಸತ್ವ ಪಾರ್ಕಿಂಗ್ ಸ್ಥಳದಿಂದ ಉಮಡಹಳ್ಳಿ ಗೇಟ್-ಹೊಸಬೂದನೂರು ಮಾರ್ಗವಾಗಿ ಸಮೇಳನದ ಸ್ಥಳ ತಲುಪಲಿದೆ. ಮತ್ತು ಅದೇ ಮಾರ್ಗದಲ್ಲಿ ವಾಪಸ್ ಆಗಲಿದೆ ಎಂದು ಸಚಿವರು ವಿವರಿಸಿದರು.