ಶ್ರೀನಗರ, ನ. 15- ಪೊಲೀಸ್ ಠಾಣೆಯಲ್ಲಿ ಸಂಗ್ರಹಿಸಿಡಲಾಗಿದ್ದ ಸ್ಫೋಟಕಗಳು ಸ್ಫೋಟಿಸಿ ಒಂಬತ್ತು ಮಂದಿ ಪ್ರಾಣ ಕಳೆದುಕೊಂಡು 29 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.
ಕಾಶ್ಮೀರದ ಶ್ರೀನಗರ ಬಳಿಯ ನೌಗಮ್‌ನಲ್ಲಿರುವ ಪೊಲೀಸ್ ಠಾಣೆಯಲ್ಲಿ ಸಂಗ್ರಹಿಸಲಾಗಿದ್ದ ಸ್ಫೋಟಕಗಳು ಸ್ಫೋಟಗೊಂಡ ನಂತರ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದರು ಮತ್ತು 29 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಹರಿಯಾಣದ ಫರಿದಾಬಾದ್‌ನಲ್ಲಿ ಪತ್ತೆಯಾಗಿದ್ದ ಅಮೋನಿಯಂ ನೈಟ್ರೇಟ್ ಮತ್ತಿತರ ಸ್ಫೋಟಕಗಳನ್ನು ಪೊಲೀಸರು ಮತ್ತು ವಿಧಿವಿಜ್ಞಾನ ತಂಡದ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಏಕಾಏಕಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ.
ಕೆಂಪು ಕೋಟೆಯ ಬಳಿಯ ಜನದಟ್ಟಣೆಯಿಂದ ತುಂಬಿದ ರಸ್ತೆಯಲ್ಲಿ ಕೆಂಪು ದೀಪದ ಬಳಿ ನಿಂತಿದ್ದ ಕಾರು ಸ್ಫೋಟ ಸಂಭವಿಸಿ 13 ಜನರು ಸಾವನ್ನಪ್ಪಿದರು ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡ ಕೆಲವು ದಿನಗಳ ನಂತರ ಈ ಸ್ಫೋಟ ಸಂಭವಿಸಿದೆ.ನೌಗಾಮ್ ಪೊಲೀಸ್ ಠಾಣೆಯಲ್ಲಿ ನಡೆದ ಈ ಸ್ಫೋಟವು ಆಕಸ್ಮಿಕ ಎಂದು ಉನ್ನತ ಪೊಲೀಸ್ ಅಧಿಕಾರಿ ನಳಿನ್ ಪ್ರಭಾತ್ ತಿಳಿಸಿದ್ದಾರೆ.
ಈ ಘಟನೆಯ ಕಾರಣದ ಬಗ್ಗೆ ಬೇರೆ ಯಾವುದೇ ಊಹಾಪೋಹ ಅನಗತ್ಯ ಎಂದು ಹೇಳುತ್ತಾರೆ.ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕರು ನೌಗಾಮ್ ಪೊಲೀಸ್ ಠಾಣೆಯಲ್ಲಿ ನಡೆದ ಸ್ಫೋಟದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ.
ಇಂದು ಬೆಳಿಗ್ಗೆ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಸ್ಫೋಟದಲ್ಲಿ ಗಾಯಗೊಂಡವರಲ್ಲಿ ಮೂವರು ನಾಗರಿಕರು ಸೇರಿದ್ದಾರೆ ಎಂದು ಹೇಳಿದರು. ನಾವು ಅಂತರ್‌ರಾಜ್ಯ ಹಾಗೂ ಅಂತರಾಷ್ಟ್ರೀಯ ವೈಟ್ ಕಾಲರ್ ಭಯೋತ್ಪಾದನಾ ಮಾಡ್ಯೂಲ್ ಅನ್ನು ಭೇದಿಸಿರುವುದಾಗಿ ಹೇಳಿದ್ದಾರೆ.
ಫರಿದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಮೂವರು ವೈದ್ಯರು – ಅದೀಲ್ ಅಹ್ಮದ್ ರಾಥರ್, ಮುಜಮ್ಮಿಲ್ ಶಕೀಲ್ ಮತ್ತು ಶಾಹೀನ್ ಸಯೀದ್ ಸೇರಿದಂತೆ 2,900 ಕಿಲೋಗ್ರಾಂಗಳಷ್ಟು ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಎಂಟು ಜನರನ್ನು ಬಂಧಿಸಲಾಗಿದೆ.
