ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ, 9 ಮಂದಿ ಸಾವು

Social Share

ಕೋಲ್ಕತ್ತಾ,ಆ.10- ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ 8 ಮಂದಿ ಮಹಿಳಾ ಕೃಷಿ ಕಾರ್ಮಿಕರು ಸೇರಿದಂತೆ 9 ಮಂದಿ ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಬೀರ್‍ಭೂಮ್‍ನಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಆಟೋ ರಿಕ್ಷಾದಲ್ಲಿ ಮಿತಿಗಿಂತ ಹೆಚ್ಚು ಜನರನ್ನು ತುಂಬಿಕೊಂಡು ಹೋಗುತ್ತಿದ್ದಾಗ ದಕ್ಷಿಣ ಬಂಗಾಳ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬೀರ್‍ಭೂಮ್ ಜಿಲ್ಲೆಯಲ್ಲಿರುವ ಮಲ್ಲಾರಪುರ ಸಮೀಪದ ರಾಮ್‍ಪುರ್ ಹಟ್‍ನ ರಾಷ್ಟ್ರೀಯ ಹೆದ್ದಾರಿ 60ರಲ್ಲಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಚಾಲಕ ಸೇರಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಬೀರ್‍ಭೂಮ್ ಜಿಲ್ಲಾ ಎಸ್ಪಿ ನಾಗೇಂದ್ರನಾಥ್ ತ್ರಿಪಾಟಿ ತಿಳಿಸಿದ್ದಾರೆ.

ಪ್ರಧಾನಿ ಪರಿಹಾರ: ಅಪಘಾತದಲ್ಲಿ 9 ಮಂದಿ ಮೃತಪಟ್ಟಿರುವುದಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ದುರಂತದಲ್ಲಿ ಜೀವ ಹಾನಿಯಾಗಿರುವುದು ಅತೀವ ವೇದನೆ ಉಂಟು ಮಾಡಿದೆ.

ಮೃತಪಟ್ಟವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿರುವ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಯಿಂದ ಮೃತ ಕುಟುಂಬದವರಿಗೆ ತಲಾ ಎರಡು ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ 50 ಸಾವಿರ ನೀಡುವುದಾಗಿ ಪ್ರಧಾನಿ ಕಾರ್ಯಾಲಯದಿಂದ ಟ್ವೀಟ್ ಮಾಡಲಾಗಿದೆ.

Articles You Might Like

Share This Article