ಗುವಾಹಟಿ, ಏ. 26: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನ ಪರ ನಿಲುವು ತಳೆದಿದ್ದಕ್ಕಾಗಿ ಅಸ್ಸಾಂನಲ್ಲಿ ಮತ್ತೋರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ.
ಇದರೊಂದಿಗೆ ಅಸ್ಸಾಂನಲ್ಲಿ ಇಂತಹ ಬಂಧನಗಳ ಸಂಖ್ಯೆ ಒಂಬತ್ತಕ್ಕೇರಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ತಡರಾತ್ರಿ ಶ್ರೀಭೂಮಿ ಜಿಲ್ಲೆಯಲ್ಲಿ ಇತ್ತೀಚಿನ ಬಂಧನವನ್ನು ಮಾಡಲಾಗಿದೆ ಎಂದು ಅವರು ಹೇಳಿದರು.ಆರೋಪಿಗಳು ಫೇಸ್ ಬುಕ್‌ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಪೋಸ್ಟ್ ಮಾಡಿದ್ದರು ಎಂದು ಶರ್ಮಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರತಿಪಕ್ಷ ಎಐಯುಡಿಎಫ್ ಶಾಸಕ ಅಮಿನುಲ್ ಇಸ್ಲಾಂ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ನಿನ್ನೆ ರಾಜ್ಯಾದ್ಯಂತ ಇನ್ನೂ ಆರು ಜನರನ್ನು ಬಂಧಿಸಲಾಗಿದೆ ಎಂದು ಶರ್ಮಾ ಹೇಳಿದ್ದಾರೆ.
ಪಹಲ್ಲಾಮ್‌ನಲ್ಲಿ ನಡೆದ ಭೀಕರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಬೆಂಬಲಿಸುವ ಅಥವಾ ರಕ್ಷಿಸುವ ಯಾವುದೇ ವ್ಯಕ್ತಿಯನ್ನು ಅಸ್ಸಾಂ ಸಹಿಸುವುದಿಲ್ಲ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಹಿಂದೆ ಬಂಧಿಸಲ್ಪಟ್ಟವರಲ್ಲಿ ಇಬ್ಬರು ಕಚಾರ್ ಜಿಲ್ಲೆಯ ಸಿಲ್ದಾರ್ ಮತ್ತು ಹೈಲಕಂಡಿ, ಮೋರಿಗಾಂವ್, ನಾಗಾವ್, ಶಿವಸಾಗರ್, ಬಾರ್ಪೇಟಾ ಮತ್ತು ಬಿಸ್ವಾನಾಥ್‌ನಿಂದ ತಲಾ ಒಬ್ಬರು ಸೇರಿದ್ದಾರೆ ಎಂದು ಅವರು ಹೇಳಿದರು.