ಬೆಂಗಳೂರು,ಏ.22- ವಿವಿಧ ಕಡೆಗಳಲ್ಲಿ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿ 17.90 ಲಕ್ಷ ರೂ. ಮೌಲ್ಯದ ಮೂರು ಕಾರು, 9 ದ್ವಿಚಕ್ರ ವಾಹನ,ಆಟೋರಿಕ್ಷಾ ಹಾಗೂ ಐೇನ್ ವಶಪಡಿಸಿಕೊಂಡಿದ್ದಾರೆ.
ಕಾಡುಗೋಡಿ:ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ದ್ವಿಚಕ್ರ ವಾಹನಗಳ ಜೊತೆಗೆ ಮೂರು ಕಾರುಗಳನ್ನು ಕಳವು ಮಾಡಿರುವುದಾಗಿ ತಿಳಿಸಿದ್ದಾರೆ.
ಪೊಲೀಸರು ಇವರಿಬ್ಬರನ್ನೂ ಸುದೀರ್ಘವಾಗಿ ವಿಚಾರಣೆ ನಡೆಸಿ ಮೂರು ಕಾರುಗಳ ಪೈಕಿ ಎರಡು ಕಾರುಗಳನ್ನು ದಿಣ್ಣೂರಿನ ಟೆಂಪೊ ನಿಲ್ದಾಣದ ಬಳಿ ಹಾಗೂ ಮತ್ತೊಂದು ಕಾರನ್ನು ವೈಟ್‌ಫೀಲ್‌್ಡ-ಹೊಸಕೋಟೆ ಮುಖ್ಯರಸ್ತೆಯ ಖಾಲಿ ಜಾಗದಿಂದ ವಶಪಡಿಸಿಕೊಂಡಿದ್ದು, ಸೊಣ್ಣೇನಹಳ್ಳಿ ನೀಲಗಿರಿ ತೋಪಿನಲ್ಲಿ ನಿಲ್ಲಿಸಿದ್ದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 10.40ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ. ಆರೋಪಿಗಳ ಬಂಧನದಿಂದ ಐದು ವಾಹನ ಕಳವು ಪತ್ತೆಹಚ್ಚುವಲ್ಲಿ ಇನ್‌್ಸಪೆಕ್ಟರ್ ರಂಗಸ್ವಾಮಿ ಹಾಗೂ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಬಸವನಗುಡಿ:
ಕಾನೂನು ಸಂಘರ್ಷಕ್ಕೊಳಗಾದ ಬಾಲಕನಿಂದ 1.60 ಲಕ್ಷ ರೂ. ಮೌಲ್ಯದ 6 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ಸುರಕ್ಷಿತವಾಗಿ ಆತನನ್ನು ಪೋಷಕರ ಸುಪರ್ದಿಗೆ ನೀಡಿ ಕಳುಹಿಸಲಾಗಿದೆ.
ಈತ ನಗರದ ವಿವಿಧ ಕಡೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುವ ಮೇರೆಗೆ ಆತನನ್ನು ತನಿಖೆ ವೇಳೆ ವಿಚಾರಣೆ ನಡೆಸಿ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಇನ್‌್ಸಪೆಕ್ಟರ್ ಸವೀತಾ ಹಾಗೂ ಸಿಬ್ಬಂಧಿ ಯಶಸ್ವಿಯಾಗಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಬಸವನಗುಡಿ ಠಾಣೆ ಪೊಲೀಸರು ಲಾಲ್ ಬಾಗ್ ಮೆಟ್ರೋ ನಿಲ್ದಾಣದ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಿದ್ದ ಆರೋಪಿಯೊಬ್ಬನನ್ನು ಬಂಧಿಸಿ 54 ಸಾವಿರ ಬೆಲೆಯ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಈತ ಬಸವನಗುಡಿ ಹಾಗೂ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದು,ಅದರಂತೆ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಎರಡು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬಸವನಗುಡಿ ಠಾಣೆ ಪೊಲೀಸರು ಇನ್ನೊಂದು ಪ್ರಕರಣದಲ್ಲಿ ದ್ವಿಚಕ್ರ ವಾಹನ ಕಳ್ಳತನ ಹಾಗೂ ಮೊಬೈಲ್ ದರೋಡೆ ಮಾಡಿದ್ದ ರಾಜಸ್ಥಾನ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿ 3.90 ಲಕ್ಷ ರೂ. ಮೌಲ್ಯದ ಎರಡು ದ್ವಿಚಕ್ರ ವಾಹನಗಳು ಮತ್ತು ಒಂದು ಐಫೋನ್ ವಶಪಡಿಸಿಕೊಂಡಿದ್ದಾರೆ.
ಪುಟ್‌ಪಾತ್‌ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಿದ ಪ್ರಕರಣದಲ್ಲಿ ನಾಲ್ವರನ್ನು ವಿಚಾರಣೆಗೆ ಒಳಪಡಿಸಿದಾಗ ಈ ವಾಹನ ಸೇರಿದಂತೆ ಮತ್ತೊಂದು ದ್ವಿಚಕ್ರ ವಾಹನ ಹಾಗೂ ಮೊಬೈಲ್ ದರೋಡೆ ಮಾಡಿರುವುದಾಗಿ ತಿಳಿಸಿದ ಮೇರೆಗೆ ಪೊಲೀಸರು ಅವುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಾಣಸವಾಡಿ:
ಮನೆ ಮುಂಭಾಗ ನಿಲ್ಲಿಸಿದ್ದ ಆಟೋರಿಕ್ಷಾ ಕಳ್ಳತನ ಮಾಡಿದ್ದ ಇಬ್ಬರನ್ನು ಬಂಧಿಸಿ 3.7 ಲಕ್ಷ ರೂ. ಮೌಲ್ಯದ ಒಂದು ಆಟೋರಿಕ್ಷಾ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಕಳ್ಳತನ ಮಾಡಿದ್ದ ವಾಹನಗಳನ್ನು ತನ್ನ ಮನೆಯ ಪಕ್ಕದ ಖಾಲಿ ಜಾಗದಲ್ಲಿ ನಿಲ್ಲಿಸಿರುವುದಾಗಿ ತಿಳಿಸಿದ್ದು, ಈ ಮಾಹಿತಿ ಮೇರೆಗೆ ಇನ್ಸ್ ಪೆಕ್ಟರ್ ಅರುಣ್ ಸಾಳುಂಕೆ ಹಾಗೂ ಇತರೆ ಸಿಬ್ಬಂಧಿ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ಸಿಸಿಬಿ ಕಾರ್ಯಾಚರಣೆ :12 ಮಂದಿ ಬಂಧನ: 2 ಕೋಟಿ ಮೌಲ್ಯದ ಚಿಪ್ ವಶ
ಟಾಟಾ ಐಪಿಎಲ್ ಟಿ 20 ಕ್ರಿಕೆಟ್ ಪಂದ್ಯಕ್ಕೆ ಸಂಬಂ ಸಿದಂತೆ ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ 12 ಮಂದಿ ಜೂಜುಕೋರರನ್ನು ಸಿಸಿಬಿ ಪೊಲೀಸರು ಬಂ ಸಿ 54,700 ರೂ. ನಗದು, 22 ಮೊಬೈಲ್‌ಗಳು, 2 ಲ್ಯಾಪ್‌ಟಾಪ್ ಹಾಗೂ ಆರೋಪಿಗಳ ಬ್ಯಾಂಕ್ ಖಾತೆಗಳಿಂದ 36.66 ಲಕ್ಷ ರೂ. ಹಣವನ್ನು ಲೀನ್ ಮಾಡಿದ್ದಾರೆ. ಹಾಗೂ ಬೆಟ್ಟಿಂಗ್‌ಗೆ ವೆಬ್ ಲಿಂಕ್‌ನಲ್ಲಿ ಉಪಯೋಗಿಸುತ್ತಿದ್ದ ಸುಮಾರು 2ಕೋಟಿ ರೂ. ವೌಲ್ಯದ ಚಿಪ್ಸ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 11 ಪ್ರರಣಗಳು ದಾಖಲಾಗಿವೆ.ಸಿಟಿ ಮಾರ್ಕೆಟ್: ಟಿ 20 ಪಂದ್ಯದ ವೇಳೆ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಬಂ ಸಿ 3,150 ರೂ.,ಮೂರು ಮೊಬೈಲ್‌ಗಳು ಹಾಗೂ ಬೆಟ್ಟಿಂಗ್‌ನಿಂದ ಸಂಗ್ರಹಿಸಿದ್ದ 9,115 ರೂ. ಹಣ,ಬೆಟ್ಟಿಂಗ್‌ಗೆ ಬಳಸಿದ್ದ 1.6 ಲಕ್ಷರೂ. ವೌಲ್ಯದ ಚಿಚಿಪ್ಸ್ ವಶಕ್ಕೆ ಪಡೆಯಲಾಗಿದೆ.
ಸುಬ್ರಮಣ್ಯಪುರ: ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಒಬ್ಬನನ್ನು ಸಿಸಿಬಿ ಪೊಲೀಸರು ಬಂ ಸಿ ಮೊಬೈಲ್, ಫೋನ್, ಕ್ರಿಕೆಟ್ ಬೆಟ್ಟಿಂಗ್ ಸಂಬಂ ಸಿದಂತೆ ಸಂಗ್ರಹಿಸಿದ್ದ ಬ್ಯಾಂಕ್ ಅಕೌಂಟ್ ಹಣ 40,177 ರೂ., ಬೆಟ್ಟಿಂಗ್‌ಗೆ ಉಪಯೋಗಿಸಿದ್ದ 10,27,053 ರೂ. ಬೆಲೆಯ ಚಿಪ್‌್ಸ ವಶಪಡಿಸಿಕೊಂಡಿದ್ದಾರೆ. ಸಿ.ಕೆ ಅಚ್ಚು ಕಟ್ಟು ಈ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಒಬ್ಬನನ್ನು ವಶಕ್ಕೆ ಪಡೆದು, ಕ್ರಿಕೆಟ್ ಬೆಟ್ಟಿಂಗ್ ಜೂಜಾಟಕ್ಕೆ ಸಂಬಂ ಸಿದಂತೆ, ಬ್ಯಾಂಕ್ ಅಕೌಂಟ್ ಹಣ 13,85,373 ರೂ., 01 ಮೊಬೈಲ್ ಫೋನ್ ವಶಪಡಿಸಿಕೊಂಡು ಆರೋಪಿತನ ವಿರುದ್ದ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಂಡಿರುತ್ತದೆ.
ಸರಗಳ್ಳತನ:ಸಹೋದರರು ಸೇರಿ ಮೂವರ ಸೆರೆ, 25 ಗ್ರಾಂ ಚಿನ್ನದ ಸರಗಳು, 9 ದ್ವಿಚಕ್ರ ವಾಹನಗಳ ಜಪ್ತಿ
ಕೋಣನಕುಂಟೆ ಮತ್ತು ಬಾಣಸವಾಡಿ ಠಾಣೆ ಪೊಲೀಸರು ಇಬ್ಬರು ಸಹೋದರರು ಸೇರಿದಂತೆ ಮೂವರು ಸರಗಳ್ಳರನ್ನು ಬಂಧಿಸಿ 9 ಲಕ್ಷ ಮೌಲ್ಯದ 25 ಗ್ರಾಂ ಚಿನ್ನದ ಸರಗಳು ಹಾಗೂ 9ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಕೋಣನಕುಂಟೆ:
ಕೆಲಸದ ನಿಮಿತ್ತ ಮಹಿಳೆಯೊಬ್ಬರು ಬಸ್ಸಿನಲ್ಲಿ ಹೋಗಿ ವಾಪಸ್ ಬರುವಷ್ಟರಲ್ಲಿ ಮಾಂಗಲ್ಯಸರ ಕಳುವಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆಹಾಕಿ ವಿವರ್‌ರಸ ಕಾಲೋನಿಯ ಚೌಡೇಶ್ವರಿ ದೇವಸ್ಥಾನದ ಬಳಿ ಆರೋಪಿಯನ್ನು ದ್ವಿಚಕ್ರ ವಾಹನದ ಸಮೇತ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಾಂಗಲ್ಯಸರ ಕಳವುಮಾಡಿರುವುದಾಗಿ ತಿಳಿಸಿದ್ದಾನೆ.ಅಲ್ಲದೆ ಕೋಣನಕುಂಟೆ, ಜಯನಗರ, ಜ್ಞಾನಭಾರತಿ, ತಾವರೆಕೆರೆ, ಕುಂಬಳಗೂಡು,ಆನೇಕಲ್,ರಾಮನಗರ, ಬನ್ನೇರುಘಟ್ಟ ಠಾಣಾ ವ್ಯಾಪ್ತಿಗಳಲ್ಲಿ ದ್ವಿಚಕ್ರವಾಹನಗಳನ್ನು ಕಳವು ಮಾಡಿರುವುದಾಗಿ ಹೇಳಿದ್ದಾನೆ.
ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆ ನಡೆಸಿದಾಗ, ಕಳವು ಮಾಡಿದ ಚಿನ್ನದ ಸರವನ್ನು ಶಿವಮೊಗ್ಗದ ಮುತ್ತೂಟ್ ೈನಾನ್‌್ಸನಲ್ಲಿ ಅಡಮಾನ ವಿಟ್ಟಿರುವುದಾಗಿ ಹಾಗೂ ಕಳವು ಮಾಡಿದ ದ್ವಿಚಕ್ರ ವಾಹನಗಳನ್ನು ಪಿಳ್ಳಗಾನ ಹಳ್ಳಿಯ ಬಿಎಂಟಿಸಿ ಬಸ್ ಡಿಪೋ ಹಿಂಭಾಗದ ಖಾಲಿ ಜಾಗದಲ್ಲಿ ನಿಲ್ಲಿಸಿರುವುದಾಗಿ ತಿಳಿಸಿದ್ದಾನೆ.
ಅದರಂತೆ ಪೊಲೀಸರು ಮುತ್ತೂಟ್ ಫೈನಾನ್ಸ್ ನಿಂದ 15 ಗ್ರಾಂ ಚಿನ್ನದ ಮಾಂಗಲ್ಯಸರ ಹಾಗೂ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಇನ್‌್ಸಪೆಕ್ಟರ್ ಪಾಪಣ್ಣ ಮತ್ತು ಸಿಬ್ಬಂಧಿಯಶಸ್ವಿಯಾಗಿದ್ದಾರೆ.
ಸಹೋದರರ ಬಂಧನ:
ವಾಯುವಿಹಾರ ಮಾಡುತ್ತಿದ್ದ ವೃದ್ಧೆಯ ಸರ ಎಗರಿಸಿ ಪರಾರಿಯಾಗಿದ್ದ ಬಸವೇಶ್ವರ ನಗರದ ಇಬ್ಬರು ಸಹೋದರರನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿ 1.15 ಲಕ್ಷರೂ. ಮೌಲ್ಯದ 10 ಗ್ರಾಂ ಚಿನ್ನದ ಸರ ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.
ಈ ಇಬ್ಬರು ಆರೋಪಿಗಳು ಹೊರಮಾವುವಿನಲ್ಲಿ ವಾಸವಿರುವುದಾಗಿ ತಿಳಿಸಿದ್ದು, ಕಳ್ಳತನ ಮಾಡಿದ ಚಿನ್ನದ ಸರವನ್ನು ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನದ ಡಿಕ್ಕಿಯಲ್ಲಿ ಇಟ್ಟಿರುವುದಾಗಿ ತಿಳಿಸಿದ್ದು, ಆ ದ್ವಿಚಕ್ರ ವಾಹನವನ್ನು ಹೊರಮಾವುವಿನ ಬಳಿ ವಶಕ್ಕೆ ಪಡೆದಿದ್ದಾರೆ.ಈ ಕಾರ್ಯಾಚರಣೆಯನ್ನು ಇನ್‌್ಸಪೆಕ್ಟರ್ ಅರಣ್ ಸಾಳುಂಕೆ ಮತ್ತು ಸಿಬ್ಬಂದಿ ತಂಡ ಕೈಗೊಂಡಿತ್ತು.