ಬೆಂಗಳೂರು, ನ.30- ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿ ಯಾವುದೇ ದಾಖಲೆ ಇಲ್ಲದ 90 ಲಕ್ಷ ಮೌಲ್ಯದ 1 ಕೆಜಿ 800 ಗ್ರಾಂ ಚಿನ್ನಾಭರಣ ಹಾಗೂ 22 ಲಕ್ಷ ಹಣ ಪತ್ತೆಯಾಗಿದ್ದು, ಎಸ್‍ಜೆ ಪಾರ್ಕ್ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಗಣೇಶ್ ಎಂಬಾತ ನ.27ರಂದು ಮಧ್ಯ ರಾತ್ರಿ ಎಸ್‍ಪಿ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಬ್ಯಾಗ್ ಹಿಡಿದುಕೊಂಡು ತಿರುಗಾಡುತ್ತಿದ್ದನು. ಇದನ್ನು ಗಮನಿಸಿದ ಗಸ್ತಿನಲ್ಲಿದ್ದ ಪೊಲೀಸರು ಆತನ ಬಳಿ ಹೋಗುತ್ತಿದ್ದಂತೆ ಪರಾರಿಯಾಗಲು ಯತ್ನಿಸಿದ್ದಾನೆ.
40 ಲಕ್ಷ ಮೌಲ್ಯದ ನಿಷೇಧಿತ ಇ-ಸಿಗರೇಟ್ ಜಪ್ತಿ
ತಕ್ಷಣ ಪೊಲೀಸರು ಆತನನ್ನು ಬೆನ್ನಟ್ಟಿ ಹಿಡಿದು ಠಾಣೆಗೆ ಕರೆದೊಯ್ದು ಆತನ ಬಳಿ ಇದ್ದ ಬ್ಯಾಗ್‍ನ್ನು ಪರಿಶೀಲಿಸಿದಾಗ ಯಾವುದೇ ದಾಖಲೆಗಳಿಲ್ಲದ ಹಣ, ಚಿನ್ನಾಭರಣ ಇರುವುದು ಕಂಡು ಬಂದಿದೆ.
ಹಿಂದೂ ಧರ್ಮ ನಾಶಕ್ಕೆ ಲವ್‍ಜಿಹಾದ್ ನಡೆಯುತ್ತಿದೆ : ಕೇಂದ್ರ ಸಚಿವ ಗಿರಿರಾಜ್ ಸಿಂಗ್
ಈ ಹಣ, ಆಭರಣವನ್ನು ಎಲ್ಲಿಂದ ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು. ಇದಕ್ಕೆ ಮೂಲ ವಾರಸುದಾರರು ಯಾರು? ಅಷ್ಟೊಂದು ಚಿನ್ನಾಭರಣ ಹಾಗೂ ಹಣಕ್ಕೆ ಯಾವುದೇ ದಾಖಲೆ ಇಲ್ಲದಿರುವ ಬಗ್ಗೆಯೂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
90 lakhs, Jewelery, seized, Bengaluru, police,