ಬೆಂಗಳೂರು,ಫೆ.15- ಪುರಸಭೆಗಳಿಗೆ 9400 ಮಂದಿ ಸಿಬ್ಬಂದಿಗಳ ಕೊರತೆಯಿದ್ದು, ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್ ತಿಳಿಸಿದರು.
ವಿಧಾನಪರಿಷತ್‍ನಲ್ಲಿ ಸದಸ್ಯರಾದ ಎಸ್.ವೀಣಾ ಅಚ್ಚಯ್ಯ, ಎಂ.ಎಲ್.ಅನೀಲ್‍ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೋವಿಡ್‍ನಿಂದಾಗಿ ನಗರ ಸ್ಥಳೀಯ ಸಂಸ್ಥೆಗಳ ಆದಾಯ ಶೇ.30ರಿಂದ 40ರಷ್ಟು ಕುಂಠಿತವಾಗಿದೆ.
ರಾಜ್ಯ, ಕೇಂದ್ರ ಸರ್ಕಾರಗಳ ಆರ್ಥಿಕ ಪಡೆದು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಸಿಬ್ಬಂದಿ ಕೊರತೆ ನೀಗಿಸಲು ಮೊದಲ ಹಂತದಲ್ಲಿ ಇಂಜಿನಿಯರ್‍ಗಳ ನೇಮಕಾತಿಗೆ ಆದ್ಯತೆ ನೀಡಲಾಗಿದೆ ಎಂದು ಭರವಸೆ ನೀಡಿದರು.
