Sunday, May 5, 2024
Homeಜಿಲ್ಲಾ ಸುದ್ದಿಗಳುಮಂಡ್ಯ : ದಾಖಲೆಯಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 99 ಲಕ್ಷ ರೂ. ಹಣ ವಶಕ್ಕೆ

ಮಂಡ್ಯ : ದಾಖಲೆಯಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 99 ಲಕ್ಷ ರೂ. ಹಣ ವಶಕ್ಕೆ

ಮಂಡ್ಯ, ಮಾ.18- ಕಾರಿನಲ್ಲಿ ದಾಖಲೆಯಿಲ್ಲದೆ ಪ್ಲಾಸ್ಟಿಕ್ ಚೀಲದಲ್ಲಿ ಸಾಗಿಸುತ್ತಿದ್ದ 99 ಲಕ್ಷ ರೂ. ಹಣವನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟ ಚೆಕ್‍ ಪೋಸ್ಟ್ ಬಳಿ ಪೊಲೀಸರು ಪತ್ತೆ ಮಾಡಿದ್ದಾರೆ. ಲೋಕಸಭೆ ಚುನಾವಣೆ ಘೋಷನೆಯಾಗುತ್ತಿದ್ದಂತೆ ಅಕ್ರಮಕ್ಕೆ ಕಡಿವಾಣ ಹಾಕಲು ಜಿಲ್ಲಾ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು ಕಳೆದ ರಾತ್ರಿ ಸುಮಾರು 9 ಗಂಟೆ ಸಂದರ್ಭದಲ್ಲಿ ವಾಹನಗಳ ತಪಾಸಣೆ ವೇಳೆ ಇಬ್ಬರು ಈ ಭಾರಿ ಪ್ರಮಾಣದ ಹಣ ಸಾಗಿಸುತ್ತಿದ್ದದ್ದು ಬೆಳಕಿಗೆ ಬಂದಿದೆ.

ಕೆ.ಆರ್.ಪೇಟೆ ಮೂಲದ ಅಡಕೆ ವ್ಯಾಪಾರಿಯೊಬ್ಬರಿಗೆ ಈ ಹಣ ಸೇರಿದೆ ಎಂದು ಕಾರಿನ್ನಿಲಿದ್ದವರು ಹೇಳಿದ್ದಾರೆ. ಆದರೆ ಬೆಂಗಳೂರಿನಿಂದ ಈ ಹಣ ತಾಲಾಗುತ್ತಿತ್ತು ಎಂದು ಹೇಳಿದ್ದಾರೆ. ಹಣವನ್ನು ಜಪ್ತಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದು ಠಾಣೆಯಲ್ಲಿ ವಿಚಾರಣೆ ಮಾಡಲಾಗಿದೆ, ಬಳಿಕ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ ಮದ್ದೂರು ಪೊಲೀಸರು ನಂತರ ಪ್ರಕರಣವನ್ನು ವರ್ಗಾಯಿಸಲಿದ್ದಾರೆ.ಜಿಲ್ಲೆಯಾದ್ಯಂತ ಚೆಕ್‍ ಪೋಸ್ಟ್ ಗಳು ತಲೆ ಎತ್ತಿವೆ. ಬಸ್, ಕಾರು, ಬೈಕ್ ಹೀಗೆ ಎಲ್ಲಾ ವಾಹನಗಳಲ್ಲೂ ಇಂಚಿಂಚು ಜಾಲಾಡಲಾಗುತ್ತಿದೆ.

ಹುಬ್ಬಳ್ಳಿ ವರದಿ:
ತಾಲೂಕಿನ ಸುಳ್ಳದ ರಸ್ತೆಯ ಚೆಕ್ ಪೋಸ್ಟ್ ನಲ್ಲಿ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ 3 ಲಕ್ಷ 82 ಸಾವಿರ ರೂ. ಹಣ ವಶಕ್ಕೆ ಪಡೆಯಲಾಗಿದೆ. ಓಂಪ್ರಕಾಶ್ ಎಂಬವರ ಕಾರಿನಲ್ಲಿ ಹಣ ಸಾಗಾಟ ಮಾಡಲಾಗುತಿತ್ತು. ಹಣ ವಶಕ್ಕೆ ಪಡೆದು ಚುನಾವಣಾ ಸಿಬ್ಭಂದಿ ಹಾಗು ಅಕಾರಿಗಳು ವಿಚಾರಣೆ ಮಾಡಿದ್ದಾರೆ.

ಇನ್ನು ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರದ ಲೋಕಿಕೆರೆ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3.89 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಸದ್ಯ ವಶಕ್ಕೆ ಪಡೆದ ಹಣದ ಬಗ್ಗೆ ತನಿಖೆ ನಡೆಯುತ್ತಿದೆ. ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಕಾರಿ ಹಾಗೂ ಜಿಲ್ಲಾ ಚುನಾವಣಾಕಾರಿ ಡಾ.ವೆಂಕಟೇಶ್ ತಿಳಿಸಿದ್ದಾರೆ.

RELATED ARTICLES

Latest News