Saturday, November 23, 2024
Homeರಾಜ್ಯ'ನನ್ನನ್ನೂ ಬಂಧಿಸಿ' ಅಭಿಯಾನ ಆರಂಭಿಸಿದ ಬಿಜೆಪಿ

‘ನನ್ನನ್ನೂ ಬಂಧಿಸಿ’ ಅಭಿಯಾನ ಆರಂಭಿಸಿದ ಬಿಜೆಪಿ

ಬೆಂಗಳೂರು, ಜ.4- ರಾಮಜನ್ಮ ಭೂಮಿಗಾಗಿ ಹೋರಾಟ ನಡೆಸಿದ ಕರಸೇವಕ ಶ್ರೀಕಾಂತ್ ಕುಲಕರ್ಣಿ ಬಂಧನದ ವಿರುದ್ದ ಬೀದಿಗಿಳಿದು ಹೋರಾಟ ನಡೆಸಿದ್ದ ಪ್ರತಿಪಕ್ಷ ಬಿಜೆಪಿ ಇದೀಗ ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ ಎಂಬ ಅಭಿಯಾನವನ್ನು ನಡೆಸುವ ಮೂಲಕ ಸರ್ಕಾರದ ವಿರುದ್ದ ಮತ್ತೊಂದು ಸುತ್ತಿನ ಸಮರಕ್ಕೆ ಸಜ್ಜಾಗಿದೆ.

ಬಿಜೆಪಿಯ ಶಾಸಕರು, ಮಾಜಿ ಶಾಸಕರು ಸೇರಿದಂತೆ ರಾಜ್ಯದ ನಾನಾ ಕಡೆ ರಾಮಜನ್ಮ ಭೂಮಿಗಾಗಿ ಅಂದು ಹೋರಾಟ ನಡೆಸಿದ ಕರಸೇವಕರು ಕೈಯಲ್ಲಿ ಬ್ಯಾನರ್ ಹಿಡಿದುಕೊಂಡು ನನ್ನನ್ನು ಬಂಸಿ ಸಿದ್ದರಾಮಯ್ಯ ಎಂಬ ಅಭಿಯಾನವನ್ನು ನಡೆಸಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಶಾಸಕ ವಿ.ಸುನಿಲ್ ಕುಮಾರ್ ಸದಾಶಿವನಗರ ಪೊಲೀಸ್ ಠಾಣೆ ಮುಂಭಾಗ ಏಕಾಂಗಿಯಾಗಿ ನನ್ನನ್ನು ಬಂಧಿಸಿ ಎಂದು ಪ್ರತಿಭಟನೆ ನಡೆಸಿದರೆ, ಅತ್ತ ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಅವರು ನಗರದ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು.

ಈ ಮೂಲಕ ರಾಜ್ಯದ್ಯಾಂತ ಬರುವ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಮುಂದಾಗಿದ್ದು, ಹಂತ ಹಂತವಾಗಿ ಒಬ್ಬೊಬ್ಬರೇ ಪೊಲೀಸ್ ಠಾಣೆಗಳ ಮುಂದೆ ನಾನು ಕರಸೇವಕ, ನನ್ನನ್ನು ಬಂಧಿಸಬೇಕು ಎಂದು ಒತ್ತಾಯ ಮಾಡಲಿದೆ.

ಜಾಕ್ವೆಲಿನ್ -ಸುಕೇಶ್ ಜತೆಗಿನ ವಾಟ್ಸಾಫ್ ಸಂಭಾಷಣೆ ಬಹಿರಂಗ

ಸಾಮಾಜಿಕ ಜಾಲತಾಣಗಳ ಮೂಲಕ ಅಭಿಯಾನಕ್ಕೆ ಚಾಲನೆ ದೊರಕಿದ್ದು, ಆಡಳಿತರೂಢ ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಗಳನ್ನು ಹಿಂದೂ ವಿರೋಧಿ ಎಂದು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ನಡೆಸಲಿದೆ. ರಾಮ ಮಂದಿರದ ಕರಸೇವಕ ನಾನು. ನನ್ನನ್ನು ಬಂಧಿಸಿ ಎಂದು ಧರಣಿ ನಡೆಸಿದರು. ಠಾಣೆಯ ಮುಂದೆ ಪ್ರತಿಭಟನೆಗೆ ಅವಕಾಶ ಇಲ್ಲದ ಕಾರಣ ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಪ್ರತಿಭಟನೆ ವೇಳೆ ಸುನೀಲ್ ಕುಮಾರ್ ಅವರು ನನ್ನನ್ನೂ ಬಂಧಿಸಿ ಎಂಬ ಬರಹವುಳ್ಳ ಕರಪತ್ರವನ್ನು ಹಿಡಿದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

31 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಎಂಬುವವರನ್ನು ಬಂಧನ ಮಾಡಲಾಗಿದೆ. ಇವರ ವಿರುದ್ಧ ಗಲಭೆ ದೊಂಬಿ, ಅಬಕಾರಿ ಕೇಸ, ಜೂಜಾಟ ಪ್ರಕರಣಗಳು ಇವೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಇವರ ಬಂಧನ ಏಕೆ ಎಂದು ಬಿಜೆಪಿ ಪ್ರಶ್ನಿಸುತ್ತಿದೆ.

ಹುಬ್ಬಳ್ಳಿಯಲ್ಲಿ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿರುವ ವಿಚಾರವಾಗಿ ಬಿಜೆಪಿ ತೀವ್ರ ಪ್ರತಿಭಟನೆ ನಡೆಸಲು ಮುಂದಾಗಿದೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು 48 ಗಂಟೆಗಳ ಗಡುವನ್ನು ಸರ್ಕಾರಕ್ಕೆ ನೀಡಿದ್ದಾರೆ.

RELATED ARTICLES

Latest News