ಬೆಂಗಳೂರು, ಜ.4- ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಮುಂದಿನ 3 ದಿನಗಳ ಕಾಲ ಕೆಲವೆಡೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಅರಬ್ಬಿಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಕರಾವಳಿ ಜಿಲ್ಲೆಗಳು ಮಲೆನಾಡಿನಲ್ಲಿ ಚದುರಿದಂತೆ ಮಳೆಯಾಗಲಿದೆ. ಅದೇ ರೀತಿ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಹಗುರ ಮಳೆ ನಿರೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ.
ಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಭಾರೀ ಅನ್ಯಾಯ: ಸಿದ್ದರಾಮಯ್ಯ ಕಿಡಿ
ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆ. ಆದರೆ ಭಾರಿ ಮಳೆಯಾಗುವ ಮುನ್ಸೂಚನೆ ಇಲ್ಲ. ಆದರೆ ಕೆಲವೆಡೆ ಮಾತ್ರ ಹಗುರದಿಂದ ಸಾಧಾರಣ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದ ಬಹುತೇಕ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ. ಹೀಗಾಗಿ ಚಳಿಯ ಪ್ರಮಾಣವು ಹೆಚ್ಚಾಗಿ ಕಂಡುಬರಲಿದೆ ಎಂದು ಅವರು ಮಾರ್ಗಸೂಚಿ ನೀಡಿದ್ದಾರೆ.