Homeರಾಜಕೀಯಯಾವ ಮಹಾನ್‌ ಸಾಧನೆಗಾಗಿ ಸಮಾವೇಶ..? : ಸರ್ಕಾರಕ್ಕೆ ವಿಜಯೇಂದ್ರ ತರಾಟೆ

ಯಾವ ಮಹಾನ್‌ ಸಾಧನೆಗಾಗಿ ಸಮಾವೇಶ..? : ಸರ್ಕಾರಕ್ಕೆ ವಿಜಯೇಂದ್ರ ತರಾಟೆ

Sadhana Samavesha For what great achievement..? | BY Vijayendra

ಬೆಂಗಳೂರು,ಮೇ 18- ಯಾವ ಮಹಾನ್‌ ಸಾಧನೆಗಾಗಿ ಕಾಂಗ್ರೆಸ್‌‍ ಸರ್ಕಾರ ಮೂರು ವರ್ಷದ ಸಾಧನಾ ಸಮಾವೇಶ ಸಂಘಟಿಸುತ್ತಿದೆ? ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ತಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ನಿಮ ಮೂರು ವರ್ಷದ ಆಡಳಿತ ಅವಧಿಯಲ್ಲಿ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ನಿರುದ್ಯೋಗ ಭಾಗ್ಯ ಕಲ್ಪಿಸಿದ್ದೇ ನಿಮ ಸಾಧನೆಯೇ?, ಉತ್ಪನ್ನ ಕ್ಷೇತ್ರವನ್ನು ಉತ್ತೇಜಿಸದೇ ಅಭಿವೃದ್ಧಿಯನ್ನು ಶೂನ್ಯಗೊಳಿಸಿದ್ದು ನಿಮ ಸಾಧನೆಯೇ? ಎಂದು ಪ್ರಶ್ನಿಸಿದ್ದಾರೆ.

ರೈತ ಕಲ್ಯಾಣಕ್ಕಾಗಿ ಯಾವುದೇ ಯೋಜನೆಯನ್ನು ರೂಪಿಸದೇ ನಿರಂತರವಾಗಿ ರೈತ ಹೋರಾಟಗಳನ್ನು ಹತ್ತಿಕ್ಕಿದ್ದು ನಿಮ ಸಾಧನೆಯೇ?, ಮಹಿಳಾ ಕಲ್ಯಾಣಕ್ಕಾಗಿ ಯಾವುದೇ ಕಾರ್ಯಕ್ರಮವನ್ನೂ ಕೊಡಲಿಲ್ಲ, ಗೃಹಲಕ್ಷ್ಮೀ ಯೋಜನೆಯನ್ನೂ ಸಕಾಲದಲ್ಲಿ ತಲುಪಿಸುತ್ತಿಲ್ಲ, ಮಹಿಳೆಯರ ಮೇಲಿನ ದೌರ್ಜನ್ಯ, ನಿರಂತರ ಅತ್ಯಾಚಾರಗಳು ನಿಮ ಸರ್ಕಾರದಲ್ಲಿ ಸ್ತ್ರೀ ಕುಲವನ್ನು ಕಾಡಿದ ದೌರ್ಭಾಗ್ಯ. ಇದಕ್ಕಾಗಿ ನಿಮ ಸಾಧನಾ ಸಮಾವೇಶವೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಸೂರುರಹಿತ ಜನರಿಗಾಗಿ ನಿವೇಶನ ಹಂಚಲಿಲ್ಲ, ಮನೆಗಳನ್ನು ವಿತರಿಸಲಿಲ್ಲ, ಮೈಸೂರು ಮುಡಾದಲ್ಲಿ ಸಾವಿರಾರು ನಿವೇಶನಗಳ ಲೂಟಿಕೋರತನದ ಸೂತ್ರ ವಹಿಸಿದ್ದು ನಿಮ ಸಾಧನೆಯೇ?, ಮಹರ್ಷಿ ವಾಲೀಕಿ ನಿಗಮದ ಪರಿಶಿಷ್ಟ ಪಂಗಡದ ಕಲ್ಯಾಣ ಕಾರ್ಯಕ್ಕೆ ಮೀಸಲಾಗಿದ್ದ ಹಣವನ್ನು ಬ್ಯಾಂಕ್‌ ಖಾತೆಗೆ ಕನ್ನ ಹಾಕಿ, ಲೂಟಿ ಹೊಡೆದದ್ದು, ಪರಿಶಿಷ್ಟ ಜಾತಿ ಪಂಗಡಗಳ ಕಲ್ಯಾಣ ಕಾರ್ಯದ ಹಣವನ್ನು ದುರ್ಬಳಕೆ ಮಾಡಿಕೊಂಡು, ಆ ವರ್ಗವನ್ನು ವಂಚಿಸಿದ್ದು ನಿಮ ಸರ್ಕಾರದ ಸಾಧನೆಯೇ? ಎಂದು ವಾಗ್ದಾಳಿ ನಡೆಸಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಗಳಿಗೆ ಯೋಜನೆ ರೂಪಿಸಲಿಲ್ಲ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನವನ್ನೂ ಬಿಡುಗಡೆ ಮಾಡದೇ, ಹಿಂದುಳಿದವರ ಕಲ್ಯಾಣ ಕಾರ್ಯಕ್ಕೆ ಕಲ್ಲು ಹಾಕಿದ್ದು ನಿಮ ಸಾಧನೆಯೇ?, ಮೀಸಲಾತಿ ಹೆಸರಿನ ಗೊಂದಲ, ಹಿಂದುಳಿದ ವರ್ಗದ ಆಯೋಗ ಡಾ. ಕಾಂತರಾಜು ಆಯೋಗದ ವರದಿಯನ್ನು ಕಸದ ಬುಟ್ಟಿಗೆ ಎಸೆದು, ಜನರ ತೆರಿಗೆ ಹಣ ರೂ. 165 ಕೋಟಿಗೆ ತರ್ಪಣ ಬಿಟ್ಟಿದ್ದು, ಹೊಸದಾಗಿ ಸಾಮಾಜಿಕ ಸಮೀಕ್ಷೆ ನಡೆಸುತ್ತೇವೆಂದು ರೂ. 400 ಕೋಟಿ ಮೀಸಲಿರಿಸಿಕೊಂಡು ಈ ಕ್ಷಣಕ್ಕೂ ವರದಿ ಬಿಡುಗಡೆ ಮಾಡದಿರುವುದು ನಿಮ್ಮ ಸಾಮಾಜಿಕ ನ್ಯಾಯದ ಸಾಧನೆಯೇ? ಎಂದು ಆಕ್ರೋಶ ಹೊರಹಾಕಿದ್ದಾರೆ.

ಒಳ ಮೀಸಲಾತಿ ಹೆಸರಿನಲ್ಲಿ ಪರಿಶಿಷ್ಟ ಸಮುದಾಯಗಳ ನಡುವೆ ಗೊಂದಲ ಏರ್ಪಡಿಸಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೀಡಲಾಗಿದ್ದ ಹೆಚ್ಚುವರಿ ಮೀಸಲಾತಿಯನ್ನು ಉಳಿಸಿ ರಕ್ಷಿಸಿಕೊಡದೇ, ಈ ಸಮುದಾಯಗಳ ಸಾಂವಿಧಾನಿಕ ಹಕ್ಕನ್ನು ಕಸಿದಿದ್ದು ನಿಮ ಸಾಧನೆಯೇ? , ಶಾಂತಿ-ಸುವ್ಯವಸ್ಥೆಗೆ ಹೆಸರಾದ ಕನ್ನಡ ನಾಡನ್ನು ಗಾಂಧಿ, ಬಸವಾದಿಗಳ ಚಿಂತನೆ-ಆಶಯಗಳನ್ನು ಮೂಲೆಗುಂಪು ಮಾಡಿ 500 ಮೀಟರ್‌ಗೊಂದು ಮದ್ಯದಂಗಡಿ ತೆರೆದು ಕರ್ನಾಟಕವನ್ನು ಕುಡುಕರ ರಾಜ್ಯವನ್ನಾಗಿಸಿದ್ದು ನಿಮ ಸಾಧನೆಯೇ? ಎಂದು ವ್ಯಂಗ್ಯವಾಡಿದ್ದಾರೆ.

ಉದ್ಯೋಗವಂಚಿತ ಯುವಜನರ ಬದುಕನ್ನು ಅಂಧಕಾರದಲ್ಲಿ ಮುಳುಗಿಸಿದ ನೀವು ಡ್ರಗ್‌ ವ್ಯಸನಿಗಳಾಗಿಸುವಂತೆ ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ ಡ್ರಗ್‌ ಫ್ಯಾಕ್ಟರಿಯೇ ತೆರೆದುಕೊಂಡಿದ್ದು, ರಾಜ್ಯದ ಉದ್ದಗಲಕ್ಕೂ ಡ್ರಗ್‌ ಮಾಫಿಯಾ ಅಟ್ಟಹಾಸ ಮೆರೆಯುತ್ತಿದೆ. ಕರುನಾಡು ವ್ಯಸನಿಗಳ ಬೀಡಾಗಿದೆ. ಲಕ್ಷಾಂತರ ಕುಟುಂಬಗಳು ಇದರಿಂದ ಬೀದಿಗೆ ಬೀಳುವಂತಾಗಿರುವುದು ನಿಮ ಸಾಧನೆಯೇ? ಎಂದು ಆರೋಪಿಸಿದ್ದಾರೆ.

ಸರ್ಕಾರದ ಪಾವತಿಯನ್ನು ನಂಬಿ ಗುತ್ತಿಗೆ ಪೂರೈಸಿದ ಗುತ್ತಿಗೆದಾರರ ಕತ್ತು ಹಿಸುಕಲು ಕಮೀಷನ್‌ ಮುಷ್ಠಿಯನ್ನು ಬಳಸಿ, ಗುತ್ತಿಗೆದಾರರ ಬದುಕನ್ನು ಹೀನಾಯ ಸ್ಥಿತಿಗೆ ತಳ್ಳಿ, ಪರ್ಸಂಟೇಜ್‌ ಸರ್ಕಾರ ಎಂದು ಕರೆಸಿಕೊಂಡಿದ್ದು ನಿಮ ಸರ್ಕಾರದ ಸಾಧನೆಯೇ?, ನೀವು ಘೋಷಿಸಿರುವ ಸಾಧನೆಗಳೆಲ್ಲವೂ ಕಾಗದದ ಮೇಲಷ್ಟೇ ಜಾಹಿರಾತಿನ ಫಲಕಗಳ ಮೇಲಷ್ಟೇ ಕಾಣುತ್ತಿದೆ ಎಂದು ವಿಜಯೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

RELATED ARTICLES

Latest News