ಬೆಂಗಳೂರು,ಜ.5- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಳ್ಳಸಾಗಾಣಿಕೆ ಮೂಲಕ ಸಾಗಿಸುತ್ತಿದ್ದ ಸುಮಾರು 1.29 ಕೋಟಿ ರೂ. ಮೌಲ್ಯದ 2.08 ಕೆಜಿ ಚಿನ್ನವನ್ನು ವಶಪಡಿಸಿಕೊಂಡು ಒಬ್ಬ ಪುರುಷ ಹಾಗೂ 11 ಮಂದಿ ಮಹಿಳೆಯರನ್ನು ಬಂಧಿಸಿದ್ದಾರೆ.
ಉತ್ತರ ಪ್ರದೇಶ : ವಾಂಟೆಡ್ ಕ್ರಿಮಿನಲ್ ವಿನೋದ್ ಕುಮಾರ್ ಉಪಾಧ್ಯಾಯ ಎನ್ಕೌಂಟರ್
ಮದೀನಾದಿಂದ ಮಸ್ಕಟ್ ಮೂಲಕ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಮಹಿಳೆಯರು, ಬಳೆ ಹಾಗೂ ಸರದ ರೂಪದಲ್ಲಿ ಕಳ್ಳ ಸಾಗಾಣೆ ಮಾಡುತ್ತಿದ್ದ ಭಾರೀ ಪ್ರಮಾಣದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ 12 ಆರೋಪಿಗಳನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.