Saturday, December 6, 2025
Homeರಾಜ್ಯಸಂಕ್ರಾಂತಿ ವೇಳೆಗೆ ಶುಭ ಸುದ್ದಿ ನಿರೀಕ್ಷೆಯಲ್ಲಿ ಡಿಕೆಶಿ..

ಸಂಕ್ರಾಂತಿ ವೇಳೆಗೆ ಶುಭ ಸುದ್ದಿ ನಿರೀಕ್ಷೆಯಲ್ಲಿ ಡಿಕೆಶಿ..

ಬೆಂಗಳೂರು, ಡಿ.5- ಸಂಕ್ರಾಂತಿಯ ವೇಳೆಗೆ ಶುಭ ಸುದ್ದಿ ದೊರೆಯಲಿದೆ ಎಂಬ ವಿಶ್ವಾಸದಲ್ಲಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಬಣದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮುಂದುವರಿಸಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ನಿನ್ನೆ ಮತ್ತೊಮೆ ಭೇಟಿಯಾಗಿ ಮನವೋಲಿಸುವ ಪ್ರಯತ್ನ ನಡೆಸಿದ್ದಾರೆ. ಅಧಿಕಾರ ಹಂಚಿಕೆಯ ಗೊಂದಲದಲ್ಲಿ ಸತೀಶ್ ಜಾರಕಿಹೊಳಿ ಕೇಂದ್ರ ಬಿಂಧುವಾಗಿದ್ದು, ಸಿದ್ದರಾಮಯ್ಯ ಅವರ ಬಣದಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದಾರೆ.

ಪದೇಪದೇ ಸಚಿವರ ಶಾಸಕರ ಭೋಜನ ಕೂಟಗಳ ಮೂಲಕ ಸಿದ್ದರಾಮಯ್ಯ ಅವರ ಮುಂದಾಳಾಗಿದ್ದಾರೆ. ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ ಅವರಿಗೆ ಆನೆ ಬಲ ಎಂದೇ ಬಿಂಬಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್, ಸತೀಶ್ ಜಾರಕಿಹೊಳಿಯವರನ್ನು ಎರಡನೇ ಬಾರಿಗೆ ಭೇಟಿಯಾಗಿರುವುದು ನಾನಾ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ.

ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ತನೂಲಕ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಮರಳಿ ಅಧಿಕಾರಕ್ಕೆ ಬಂದರೆ ತಾವು ಮುಖ್ಯಮಂತ್ರಿಯಾಗುವುದಾಗಿಯೂ ಪದೇ ಪದೇ ಹೇಳುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಭೇಟಿಯ ಬಳಿಕವೂ ಸತೀಶ್ ಜಾರಕಿಹೊಳಿ ತಮ ನಾಯಕತ್ವದ ನಿಷ್ಠೆ ಬದಲಾಯಿಸಿಲ್ಲ. ಸಿದ್ದರಾಮಯ್ಯ ಅವರನ್ನು ಬಿಟ್ಟು ತಾವು ಬರುವುದಿಲ್ಲ ಎಂದು ಹೇಳಿರುವುದಾಗಿ ತಿಳಿದು ಬಂದಿದೆ.

ಡಿ.ಕೆ.ಶಿವಕುಮಾರ್ ತಮ ಪ್ರಯತ್ನವನ್ನು ನಿಲ್ಲಿಸಿಲ್ಲ. ನೆನ್ನೆ ರಾತ್ರಿ ಇಬ್ಬರು ನಾಯಕರು ಭೇಟಿಯಾಗುವ ಮೂಲಕ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಮೂಲಗಳ ಪ್ರಕಾರ ಜನವರಿಯ ವೇಳೆಗೆ ನಾಯಕತ್ವ ಬದಲಾವಣೆಯಾಗಲಿದೆ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ಮಣೆ ಹಾಕಲಿದೆ ಎಂಬ ವದ್ಧಂತಿಗಳಿವೆ. ಈ ನಿಟ್ಟಿನಲ್ಲಿ ಡಿ.ಕೆ.ಶಿವಕುಮಾರ್ ಅವರ ಸತತ ಪ್ರಯತ್ನಗಳು ಮುಂದುವರೆದಿವೆ.

RELATED ARTICLES

Latest News