ಬೆಂಗಳೂರು,ಜ.6- ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನ ಸ್ಥಿತಿ ಗಂಭೀರವಾಗಿದೆ. ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿರುವ ಶ್ಯಾರೋನ್ (23) ತಲೆ ಹಾಗೂ ಕಾಲಿಗೆ ಗಂಭೀರ ಪೆಟ್ಟಾಗಿದೆ. ಕೇರಳ ಮೂಲದ ಶ್ಯಾರೋನ್ ನಿನ್ನೆ ಸಂಜೆ ಜಾಲಹಳ್ಳಿ ಮೆಟ್ರೋ ನಿಲ್ದಾಣದಿಂದ ಮೆಜೆಸ್ಟಿಕ್‍ಗೆ ಟಿಕೆಟ್ ಪಡೆದುಕೊಂಡಿದ್ದಾನೆ.
ಆದರೆ ಜಾಲಹಳ್ಳಿಯಲ್ಲಿ ಮೆಟ್ರೋ ರೈಲು ಹತ್ತದೇ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಈ ಯುವಕ ಏಕಾಏಕಿ ಹಳಿಗಳ ಮೇಲೆ ಜಿಗಿದಿದ್ದಾನೆ. ಕೂಡಲೇ ಇದನ್ನು ಗಮನಿಸಿದ ಮೆಟ್ರೋ ರೈಲಿನ ಲೋಕೋ ಪೈಲೆಟ್ ಸಮಯಪ್ರಜ್ಞೆಯಿಂದ ತುರ್ತು ಬ್ರೇಕ್ ಹಾಕಿದರಾದರೂ ರೈಲು ಡಿಕ್ಕಿಯಾಗಿದ್ದರಿಂದ ಆತನ ತಲೆಗೆ ಪೆಟ್ಟಾಗಿದೆ.
ರಾಜಕೀಯದ ಲಾಭಕ್ಕಾಗಿ ಬಿಜೆಪಿ ಹಿಂದುತ್ವದ ಚರ್ಚೆ ಮಾಡುತ್ತಿದೆ : ಸಚಿವ ಸಂತೋಷ್ ಲಾಡ್
ತಕ್ಷಣ ರೈಲು ನಿಲ್ದಾಣದ ಸಿಬ್ಬಂದಿ ಆ ಯುವಕನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶ್ಯಾರೋನ್ ತಂದೆ ಒಂದು ತಿಂಗಳ ಹಿಂದೆಯಷ್ಟೆ ಮೃತಪಟ್ಟಿದ್ದರು. ಹಾಗಾಗಿ ಈ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಯತ್ನಿಸಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಡಿಪ್ಲಮೊ ವ್ಯಾಸಂಗ ಮಾಡುತ್ತಿದ್ದ, ಈ ಯುವಕ ಪಿಣ್ಯ ಕಾರ್ಖಾನೆ ಒಂದರಲ್ಲಿ ಕೆಲಸ ಮಾಡುತ್ತಿದ್ದನು. ಈ ಯುವಕ ಚೇತರಿಸಿಕೊಂಡ ಬಳಿಕವಷ್ಟೇ ಘಟನೆಗೆ ನಿಖರ ಕಾರಣ ಗೊತ್ತಾಗಲಿದೆ.