ಬೆಂಗಳೂರು,ಜ.7- ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ತಮಗೆ ಆಹ್ವಾನ ಇಲ್ಲ. ಹೀಗಾಗಿ ಇಲ್ಲಿಂದಲೇ ಪ್ರಾರ್ಥನೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.22 ರಂದು ನಡೆಯುತ್ತಿರುವ ಕಾರ್ಯಕ್ರಮಕ್ಕೆ ನನಗಾಗಲೀ, ನಮ್ಮ ಮುಖ್ಯಮಂತ್ರಿಗಾಗಲೀ ಆಹ್ವಾನ ಇಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಆಹ್ವಾನ ಇದೆಯೇ ಎಂದು ಕೇಳಿದ್ದೇನೆ. ಕಾಂಗ್ರೆಸ್ ಪಕ್ಷ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆ, ಬೇಡವೇ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ನಾವು ಹಿಂದೂಗಳು. ನಮ್ಮ ಮನೆಯ ಗೋಡೆಯ ಮೇಲೆ ದೇವರ ಫೋಟೋಗಳು ಇದ್ದೇ ಇರುತ್ತವೆ. ರಾಮ ಮಂದಿರ ವಿಚಾರದಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದರು. ಆರ್‍ಎಸ್‍ಎಸ್‍ನವರು ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಮಂತ್ರಾಕ್ಷತೆ ನೀಡುತ್ತಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಕಾಂಗ್ರೆಸ್ ಸರ್ಕಾರ ನೀಡಿದ ಅಕ್ಕಿಗೆ ಅರಿಶಿನ ಸೇರಿಸಿದರೆ ಮಂತ್ರಾಕ್ಷತೆಯಾಗುತ್ತದೆ. ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ ಎಂದು ವಾದಿಸುವ ಬಿಜೆಪಿಯವರು ಕೇಂದ್ರದಲ್ಲಿ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ ಎಂಬುದನ್ನ ಮರೆತಿದ್ದಾರೆ.
ಬಾಂಗ್ಲಾ ಸಾರ್ವತ್ರಿಕ ಚುನಾವಣೆ, ಬಿಗಿ ಭದ್ರತೆ ನಡುವೆ ಮತದಾನ
ಕಾಯ್ದೆ ಜಾರಿಗೆ ಬರುವ ಮುನ್ನವೇ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಅನ್ನಭಾಗ್ಯವನ್ನು ಜಾರಿಗೊಳಿಸಿದರು. 10 ಕೆ.ಜಿ. ನೀಡುತ್ತಿದ್ದ ಅಕ್ಕಿಯನ್ನು ಬಿಜೆಪಿಯವರು ಕಡಿತ ಮಾಡಿದ್ದನ್ನು ಮರೆಯಬಾರದು ಎಂದು ಹೇಳಿದರು. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರಿಂದಲೇ ಕಾಂಗ್ರೆಸ್ ಪಕ್ಷದ ಅಂತ್ಯವಾಗುತ್ತದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ. ಸದ್ಯಕ್ಕೆ ಅದಕ್ಕೆ ಉತ್ತರ ನೀಡುವುದಿಲ್ಲ. ಕಾಂಗ್ರೆಸ್ ಪಕ್ಷದ 138 ವರ್ಷಗಳಾಗಿವೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ 135 ಮಂದಿ, ಕಾಂಗ್ರೆಸ್ ಬೆಂಬಲಿತ ಮೇಲ್ಕೋಟೆಯ ಶಾಸಕರು ಸೇರಿ 136 ಮಂದಿ ಗೆದ್ದಿದ್ದೇವೆ. ಹರಪ್ಪನಹಳ್ಳಿ ಮತ್ತು ಗೌರಿಬಿದನೂರಿನ ಪಕ್ಷೇತರ ಶಾಸಕರು ಕಾಂಗ್ರೆಸ್‍ಗೆ ಬೆಂಬಲ ನೀಡಿರುವುದರಿಂದ 138 ಮಂದಿ ಶಾಸಕರಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದರು.
ಬಿಜೆಪಿ, ಜೆಡಿಎಸ್‍ನವರು ಪದೇಪದೇ ನಮ್ಮನ್ನು ನೆನಪಿಸಿಕೊಳ್ಳಬೇಕು. ಅವರ ಟೀಕೆಗಳು ನಮಗೆ ಆಶೀರ್ವಾದ ಎಂದು ತಿಳಿಸಿದರು. ಡಿಜೆ ಹಳ್ಳಿ/ಕೆಜೆ ಹಳ್ಳಿ ಗುಂಪು ಗಲಭೆ ಪ್ರಕರಣದಲ್ಲಿ ಬಂತ ಅಮಾಯಕರನ್ನು ಬಿಡುಗಡೆ ಮಾಡುವಂತೆ ಕುಟುಂಬ ಸದಸ್ಯರು ನಿನ್ನೆ ಜನಸ್ಪಂದನ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಿದ್ದಾರೆ. ಕಾನೂನು ತನ್ನದೇ ಆದ ರೀತಿಯಲ್ಲಿ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ಪ್ರತಿ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಸ್ಥಾಪನೆ : ಸಿಎಂ ಸಿದ್ದರಾಮಯ್ಯ
ನೈಸ್ ವಿಚಾರದಲ್ಲಿ ಕಾಂಗ್ರೆಸ್ ಶಾಸಕ ಟಿ.ಬಿ.ಜಯಚಂದ್ರ ಅವರ ಬಾಯಿ ಕಟ್ಟಿ ಹಾಕಲಾಗಿದೆ ಎಂದು ಎಚ್.ಡಿ.ಕುಮಾರಸ್ವಾಮಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಇದರ ಬಗ್ಗೆ ಸದ್ಯಕ್ಕೆ ಮಾತನಾಡುವುದಿಲ್ಲ. ವಿಧಾನಸಭೆಯಲ್ಲಿ ಚರ್ಚೆಗೆ ಬನ್ನಿ ಎಂದರೆ ಏಕೆ ಹಿಂದೇಟು ಹಾಕಿದರು. ಬೇರೆ ದಿನ ಈ ವಿಚಾರವಾಗಿ ಚರ್ಚೆ ಮಾಡೋಣ. ಸದ್ಯಕ್ಕೆ ಕೃಷ್ಣ ಮೇಲ್ದಂಡೆ ವಿಚಾರಕ್ಕಷ್ಟೇ ತಾವು ಸೀಮಿತವಾಗುವುದಾಗಿ ತಿಳಿಸಿದರು.