Saturday, December 6, 2025
Homeರಾಜ್ಯSSLC ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ

SSLC ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ

ಬೆಂಗಳೂರು, ಡಿ.5- ಪ್ರಸಕ್ತ ವರ್ಷವೂ SSLC ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಗಳಿರುತ್ತವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ. ಇತ್ತೀಚಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಒಂದು ಮತ್ತು ಎರಡನೇ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿತ್ತು.

ಇದರಿಂದಾಗಿ ಮೂರನೇ ಪರೀಕ್ಷೆ ಬಗ್ಗೆ ಗೊಂದಲಗಳಿದ್ದವು. ಸ್ಪಷ್ಟನೆ ನೀಡಿರುವ ಪರೀಕ್ಷಾ ಮಂಡಳಿ 2025-26ನೇ ಸಾಲಿಗೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯ ಒಂದು ಮತ್ತು ಎರಡನೇ ತಾತ್ಕಾಲಿಕ ಕಾರ್ಯ ಸೂಚಿಯನ್ನು ತಯಾರಿಸಿ, ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಸದರಿ ಪರೀಕ್ಷೆಗಳ ಫಲಿತಾಂಶ ಪ್ರಕಟಣೆಯ ಅವಧಿ ಆಧಾರದ ಮೇಲೆ ಪರೀಕ್ಷೆ ಮೂರರ ವೇಳಾಪಟ್ಟಿಯನ್ನು ಪ್ರಕಟಿಸುವುದಾಗಿ ತಿಳಿಸಿದೆ.
ಕಳೆದ ಎರಡು ವರ್ಷಗಳಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಗೆ ಮೂರು ಹಂತದ ಪರೀಕ್ಷೆಗಳನ್ನು ನಡೆಸುವ ಮೂಲಕ ಕರ್ನಾಟಕ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದೆ. ವಿದ್ಯಾರ್ಥಿಗಳು ಫಲಿತಾಂಶದ ಆತಂಕವಿಲ್ಲದೆ ನಿರ್ಭಯವಾಗಿ ಪರೀಕ್ಷೆ ಬರೆಯುವಂತಹ ವಾತಾವರಣ ನಿರ್ಮಾಣವಾಗಿದೆ.

ಈ ಬಾರಿ ಎರಡು ಪರೀಕ್ಷೆಗಳ ವೇಳಾಪಟ್ಟಿ ಮಾತ್ರ ಪ್ರಕಟಿಸಿ ಮೂರನೇ ಪರೀಕ್ಷೆಯ ಬಗ್ಗೆ ಯಾವುದೇ ಸುಳಿವು ನೀಡದೇ ಇದ್ದದ್ದು ಗೊಂದಲಕ್ಕೆ ಕಾರಣವಾಗಿತ್ತು. ಕೊನೆಗೆ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದೆ.

RELATED ARTICLES

Latest News