ಬೆಂಗಳೂರು,ಮೇ24-ನೈಋತ್ಯ ಮುಂಗಾರು ಆರಂಭಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚೇತರಿಕೆ ಕಂಡಿದೆ. ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವೆಡೆ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಗಳ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಇಂದು ಮತ್ತು ನಾಳೆ ಆರೇಂಜ್ ಅಲರ್ಟ್ ಘೋಷಣೆ ಮಾಡಿದೆ. ಮೇ 26 ಮತ್ತು 27ರಂದು ಯೆಲ್ಲೋ ಅಲರ್ಟ್ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ನೀಡಲಾಗಿದ್ದು, ನಾಳೆ ಮಳೆ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ. ಮೇ 26 ಮತ್ತು 27 ರಂದು ಮತ್ತೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದ್ದರೂ ವಾಡಿಕೆ ಪ್ರಮಾಣದಲ್ಲಿ ಪೂರ್ವ ಮುಂಗಾರು ಮಳೆಯಾಗುತ್ತಿಲ್ಲ. ಈ ಭಾಗದಲ್ಲಿ ಸದ್ಯಕ್ಕೆ ಭಾರಿ ಮಳೆ ಮುನ್ನೆಚ್ಚರಿಕೆ ನೀಡಲಾಗಿಲ್ಲ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ರಾಜ್ಯಾದ್ಯಂತ ಅಲ್ಲಲ್ಲಿ ಮಳೆಯಾಗಲಿದೆ. ಕೆಲವೆಡೆ ಗುಡುಗು, ಮಿಂಚು, ಸಿಡಿಲಿನ ಆರ್ಭಟವೂ ಕಂಡುಬರಲಿದೆ. ಜೊತೆಗೆ ಗಂಟೆಗೆ 50-60 ಕಿ.ಮೀ.ವೇಗದಲ್ಲಿ ಜೋರಾದ ಗಾಳಿಯು ಕೆಲವೆಡೆ ಬೀಸಲಿದೆ. ನಾಳೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಮುನ್ಸೂಚನೆಗಳಿವೆ.
ನಿನ್ನೆ ಕಲ್ಯಾಣ ಕರ್ನಾಟಕ ಭಾಗದ ವಿಜಯಪುರ, ರಾಯಚೂರು, ಬಾಗಲಕೋಟೆ ಜಿಲ್ಲೆಗಳ ಹಲೆವೆಡೆ ಉತ್ತಮ ಮಳೆಯಾಗಿದೆ. ಬೆಳಗಾವಿ, ಉತ್ತರ ಕನ್ನಡ, ಗದಗ, ಉಡುಪಿ ಜಿಲ್ಲೆಗಳಲ್ಲೂ ಸಾಕಷ್ಟು ಮಳೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಿದೆ. ಆಲಿಕಲ್ಲು, ಜೋರಾದ ಗಾಳಿ ಸಹಿತ ಮಳೆಯಾಗಿರುವುದರಿಂದ ಹಲವೆಡೆ, ಬಾಳೆ, ಮಾವು, ಭತ್ತ ಮುಂತಾದ ಬೆಳೆಗಳಿಗೆ ಹಾನಿಯಾಗಿದೆ. ಮರಗಳು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಆದರೂ ಈ ಬಾರಿಯ ಬೇಸಿಗೆ ಮಳೆ ರಾಜ್ಯಾದ್ಯಂತ ವ್ಯಾಪಕ ಪ್ರಮಾಣದಲ್ಲಿ ಬೀಳದೆ ನಿರಾಸೆಯನ್ನುಂಟು ಮಾಡಿದೆ.
ಮೇ 26ರಂದು ನೈಋತ್ಯ ಮುಂಗಾರು ಕೇರಳ ಪ್ರವೇಶ ಮಾಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದಕ್ಕೆ ಪೂರಕವಾದ ವಾತಾವರಣ ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ಉಂಟಾಗಿದ್ದು, ಸಾದಿನಾಂಕ: 25-05-2026 ನೇ ಸೋಮವಾರ ಬೆಳಗ್ಗೆ 11:30 ಗಂಟೆಗೆ ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಮಾಜಿ ಶಾಸಕರು ಹಾಗೂ ಗ್ರೇಟರ್ ಬೆಂಗಳೂರು ಜನತಾದಳ (ಜಾತ್ಯತೀತ) ಪಕ್ಷದ ಅಧ್ಯಕ್ಷರಾದ ಶ್ರೀ ಹೆಚ್. ಎಂ. ರಮೇಶ್ ಗೌಡ ರವರ ಅಧ್ಯಕ್ಷತೆಯಲ್ಲಿ ಗ್ರೇಟರ್ ಬೆಂಗಳೂರು ಜಾತ್ಯತೀತ ಪಕ್ಷದ ವಿಧಾನಸಭಾ ಕ್ಷೇತ್ರ ಅಧ್ಯಕ್ಷರುಗಳು, ವಿವಿಧ ವಿಭಾಗಗಳ ಅಧ್ಯಕ್ಷರುಗಳು ಮತ್ತು ಬಿಎಲ್ಎ-1 ಇವರುಗಳ ಸಭೆಯನ್ನು ಕರೆಯಲಾಗಿದೆ.
