Sunday, May 19, 2024
Homeರಾಜ್ಯಇನ್ನೂ 3 ದಿನ ರಾಜ್ಯದಲ್ಲಿ ಮೋಡ ಕವಿದ ವಾತಾವರಣ

ಇನ್ನೂ 3 ದಿನ ರಾಜ್ಯದಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು, ಜ.9-ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ. ಕರಾವಾಳಿ ಹಾಗೂ ಮಲೆನಾಡು ಭಾಗದಲ್ಲಿ ಅರೆ ವ್ಯಾಪಕ ಪ್ರಮಾಣದ ಸಾಧಾರಣ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಚದುರಿದಂತೆ ತುಂತುರು ಮಳೆಯಾಗುವ ನಿರೀಕ್ಷೆ ಇದೆ. ಆದರೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಆಗಾಗ್ಗೆ ತಂಪಾದ ಮೇಲ್ಮೈ ಗಾಳಿ ಬೀಸುವುದರಿಂದ ಹಗಲು ವೇಳೆಯೂ ಚಳಿಯ ಪ್ರಮಾಣ ಹೆಚ್ಚಾಗಿದೆ. ನಿನ್ನೆಯಿಂದ ರಾಜ್ಯದ ಒಳನಾಡಿನಲ್ಲಿ ಮೋಡ ಕವಿದ ವಾತಾವಾರಣವಿದ್ದು, ಆಗಾಗ್ಗೆ ಹಲವು ಕಡೆ ತುಂತುರು ಮಳೆಯಾಗಿದೆ.

ವಾಯುಭಾರ ಕುಸಿತ ಉಂಟಾಗಿರುವುದರಿಂದ ತಮಿಳುನಾಡು ಹಾಗೂ ಕೇರಳದಲ್ಲಿ ಹೆಚ್ಚು ಮಳೆಯಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇಲ್ಲ. ಕೆಲವೆಡೆ ಚದುರಿದಂತೆ ಹಗುರ ಇಲ್ಲವೆ ಸಾಧಾರಣ ಮಳೆ ನಿರೀಕ್ಷಿಸಬಹುದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.

ಗಾಢ ಮಂಜಿನಿಂದಾಗಿ ಕಾರು ಟ್ರಕ್‍ಗೆ ಡಿಕ್ಕಿ, ಇಬ್ಬರು ಪೊಲೀಸರು ಬಲಿ

ತಮಿಳುನಾಡು ಕರಾವಳಿ ಸಮೀಪ ಉಂಟಾಗಿದ್ದ ವಾಯುಭಾರ ಕುಸಿತ ಕೇರಳದ ಕರಾವಳಿ ಕಡೆಗೆ ಚಲಿಸುತ್ತಿದೆ. ಇದರಿಂದ ಆ ಎರಡು ರಾಜ್ಯಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ. ಕರ್ನಾಟಕದ ಮೇಲೆ ವಾಯುಭಾರ ಕುಸಿತದ ನೇರ ಪರಿಣಾಮವಿಲ್ಲ. ರಾಜ್ಯದ ಕರಾವಳಿಯಲ್ಲೂ ಸ್ವಲ್ಪ ಹೆಚ್ಚು ಮಳೆಯಾಗಲಿದೆ. ಹಾಗೆಯೇ ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವವಿದೆ. ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಆದರೆ, ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದ್ದೂ, ಚಳಿಯ ಪ್ರಮಾಣವೂ ಹೆಚ್ಚಾಗಿರಲಿದೆ ಎಂದು ಹೇಳಿದರು.

ಶೇ.24ರಷ್ಟು ಮಳೆ ಕೊರತೆ: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ 2023ನೇ ವರ್ಷದಲ್ಲಿ ವಾಡಿಕೆಗಿಂತ ಶೇ.24ರಷ್ಟು ಕಡಿಮೆ ಮಳೆ ರಾಜ್ಯದಲ್ಲಾಗಿದೆ. 2023ರ ಏಪ್ರಿಲ್‍ನಿಂದ ಡಿಸೆಂಬರ್ ನಡುವಿನ ಅವಯಲ್ಲಿ 1140 ಮಿ.ಮೀ.ನಷ್ಟು ವಾಡಿಕೆ ಮಳೆ ಪ್ರಮಾಣವಿದ್ದರೆ, 862 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದ್ದು, ಶೇ.24ರಷ್ಟು ಕೊರತೆ ಉಂಟಾಗಿತ್ತು.

ಅದೇ ರೀತಿ ಜನವರಿ ಒಂದರಿಂದ ಡಿಸೆಂಬರ್ ಅಂತ್ಯದವರೆಗೆ ವಾಡಿಕೆ ಮಳೆ ಪ್ರಮಾಣ 1153 ಮಿ.ಮೀ. ಆಗಿದ್ದು, ಕೇವಲ 872 ಮಿ.ಮೀ.ನಷ್ಟು ಮಳೆಯಾಗಿದೆ. ಈ ಅವಯಲ್ಲೂ ವಾಡಿಕೆಗಿಂತ ಶೇ.24ರಷ್ಟು ಮಳೆ ಕಡಿಮೆಯಾಗಿದೆ. ಅಲ್ಲದೆ, ಹಿಂಗಾರು ಹಂಗಾಮಿನ ಅಕ್ಟೋಬರ್ ಮತ್ತು ಡಿಸೆಂಬರ್ ನಡುವಿನ ಅವಧಿಯಲ್ಲಿ ವಾಡಿಕೆ ಮಳೆ ಪ್ರಮಾಣ 182 ಮಿ.ಮೀ. ಆಗಿದ್ದು, 114 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದೆ. ವಾಡಿಕೆಗಿಂತ ಶೇ.38ರಷ್ಟು ಕೊರತೆ ಉಂಟಾಗಿದೆ. ಡಿಸೆಂಬರ್‍ನಲ್ಲೀ ಶೇ.30 ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. 2024ರ ಮೊದಲ ಮಳೆ ನಿನ್ನೆ ಆರಂಭಗೊಂಡಿದೆ.

RELATED ARTICLES

Latest News