Friday, November 22, 2024
Homeರಾಜ್ಯಶಿವಮೊಗ್ಗದಲ್ಲಿ ಪೊಲೀಸರ ಕ್ರಮದಿಂದ ದೊಡ್ಡ ಅನಾಹುತ ತಪ್ಪಿದೆ : ಗೃಹಸಚಿವ ಪರಮೇಶ್ವರ್

ಶಿವಮೊಗ್ಗದಲ್ಲಿ ಪೊಲೀಸರ ಕ್ರಮದಿಂದ ದೊಡ್ಡ ಅನಾಹುತ ತಪ್ಪಿದೆ : ಗೃಹಸಚಿವ ಪರಮೇಶ್ವರ್

ಬೆಂಗಳೂರು,ಅ.2- ಶಿವಮೊಗ್ಗ ಸೂಕ್ಷ್ಮ ಪ್ರದೇಶವಾಗಿದ್ದು ಅಲ್ಲಿ ಗಲಭೆ ನಡೆಯುವ ಮುನ್ಸೂಚನೆ ಇದ್ದ ಹಿನ್ನೆಲೆಯಲ್ಲಿ ಬಿಗಿ ಬಂದೊಬಸ್ತ್ ಮಾಡಲಾಗಿತ್ತು. ಹೀಗಾಗಿ ದೊಡ್ಡ ಪ್ರಮಾಣದ ಅನಾಹುತ ತಪ್ಪಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿರುವ ಅಹಿತಕರ ಘಟನೆಯನ್ನು ಪೊಲೀಸರು ನಿಯಂತ್ರಿಸಿದ್ದಾರೆ. ಎರಡು ಗುಂಪುಗಳಿಂದಲೂ ತಲಾ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಿದರು.

ಘಟನೆಯ ಬಗ್ಗೆ ಹೆಚ್ಚಿನ ವಿವರಗಳಿವೆ. ಬಂಧನದ ಬಗ್ಗೆಯೂ ಮಾಹಿತಿ ಇದೆ. ಆದರೆ ಅದನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳುವುದಿಲ್ಲ. ಈ ರೀತಿ ಹಂಚಿಕೊಳ್ಳಲು ಕಾನೂನಾತ್ಮಕವಾಗಿ ಅವಕಾಶವಿಲ್ಲ ಎಂದರು.

ಮಿಸ್ಟರ್ ಡಿ.ಕೆ.ಶಿವಕುಮಾರ್, ನಿಮ್ಮ ಕಸನು ಈಡೇರುವುದಿಲ್ಲ : ಎಚ್‍ಡಿಡಿ ವಾಗ್ದಾಳಿ

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸಮರ್ಥರಿದ್ದಾರೆ. ಇದು ಹೊಸದೇನಲ್ಲ. ಶಿವಮೊಗ್ಗದಲ್ಲಿ ಮೊದಲಿನಿಂದಲೂ ಈ ರೀತಿಯ ಘಟನೆಗಳು ನಡೆಯುತ್ತಲೇ ಇವೆ. ಈದ್‍ಮಿಲಾದ್ ಮೆರವಣಿಗೆ ನಡೆಯುವ ವೇಳೆ ಏನು ಬೇಕಾದರೂ ನಡೆಯಬಹುದು ಎಂಬ ಮುನ್ಸೂಚನೆ ಮೊದಲೇ ಇತ್ತು. ಹೀಗಾಗಿ ಅಗತ್ಯವಾದ ಪೊಲೀಸ್ ಬಂದೊಬಸ್ತ್ ಏರ್ಪಡಿಸಿದ್ದೆವು. ನಂತರ ಗಲಾಟೆಯನ್ನು ನಿಯಂತ್ರಿಸಲಾಗಿದೆ. ತನಿಖೆ ಮುಂದುವರೆದಿದೆ ಎಂದು ಹೇಳಿದರು.

RELATED ARTICLES

Latest News