Friday, November 22, 2024
Homeರಾಜಕೀಯ | Politicsಲೋಕಸಭೆ ಚುನಾವಣೆಯಲ್ಲಿ ಎಚ್‍ಡಿಕೆ ಸ್ಪರ್ಧೆಗೆ ಹೆಚ್ಚಿದ ಒತ್ತಡ

ಲೋಕಸಭೆ ಚುನಾವಣೆಯಲ್ಲಿ ಎಚ್‍ಡಿಕೆ ಸ್ಪರ್ಧೆಗೆ ಹೆಚ್ಚಿದ ಒತ್ತಡ

ಬೆಂಗಳೂರು,ಜ.11- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ. ಹಳೇ ಮೈಸೂರು ಭಾಗದ ಪಕ್ಷದ ಮುಖಂಡರು ಲೋಕಸಭೆ ಚುನಾವಣೆಗೆ ಸ್ರ್ಪಧಿಸುವಂತೆ ಕುಮಾರಸ್ವಾಮಿ ಅವರನ್ನು ಕೋರಿದ್ದಾರೆ.

ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಸೇರಿರುವ ಜೆಡಿಎಸ್ ಈಗಾಗಲೇ ಚುನಾವಣೆ ತಯಾರಿ ಆರಂಭಿಸಿದೆ. ಚುನಾವಣೆ ಸಿದ್ಧತೆ ಕುರಿತಂತೆ ಹಲವು ಸಭೆಗಳನ್ನು ನಡೆಸಲಾಗಿದೆ. ಬಿಜೆಪಿಯೊಂದಿಗೆ ಇನ್ನೂ ಕ್ಷೇತ್ರ ಹಂಚಿಕೆ ವಿಚಾರ ಅಂತಿಮಗೊಂಡಿಲ್ಲ. ಆದರೂ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಬೇಕು ಎಂಬ ಒತ್ತಡ ಹೆಚ್ಚಾಗುತ್ತಿದೆ.

ಕೇಂದ್ರ ಸಚಿವರಾಗುವ ವದಂತಿಯನ್ನು ಅಲ್ಲಗಳೆದಿರುವ ಕುಮಾರಸ್ವಾಮಿ ಅವರು ಮಂಡ್ಯದಿಂದ ಸ್ಪರ್ಧೆ ಮಾಡಬೇಕೆಂಬ ಒತ್ತಾಯವನ್ನು ಸದ್ಯಕ್ಕೆ ತಳ್ಳಿ ಹಾಕಿದ್ದಾರೆ. ಆದರೂ ಜೆಡಿಎಸ್ ಪ್ರಬಲವಾಗಿರುವ ಮಂಡ್ಯ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಳೇ ಮೈಸೂರು ಭಾಗದ ಯಾವುದಾದರೂ ಒಂದು ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ರ್ಪಧಿಸುವಂತೆ ಕೋರಲಾಗುತ್ತಿದೆ.

ಕೋಟ್ಯಂತರ ಹಿಂದೂಗಳ ಭಾವನೆಗೆ ಕಾಂಗ್ರೆಸ್ ಧಕ್ಕೆ ತಂದಿದೆ : ಬಿಎಸ್‌ವೈ

ಜೆಡಿಎಸ್ ಕೇಂದ್ರ ಕಚೇರಿ ಮತ್ತು ಚಿಕ್ಕಮಗಳೂರಿನ ರೆಸಾರ್ಟ್‍ನಲ್ಲಿ ನಿನ್ನೆ ಚುನಾವಣೆ ಸಿದ್ಧತೆ ಸಭೆಗಳು ನಡೆದಿವೆ. ರೇಸಾರ್ಟ್‍ನಲ್ಲಿ ನಡೆದ ಸಭೆಯಲ್ಲಿ ಮಂಡ್ಯ ಮತ್ತು ಮೈಸೂರು ಭಾಗದ ಮುಂಡರು ಕುಮಾರಸ್ವಾಮಿ ಅವರನ್ನು ಲೋಕಸಭೆ ಚುನಾವಣೆಗೆ ಸ್ರ್ಪಧಿಸುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಸಂಕ್ರಾಂತಿ ಹಬ್ಬದ ನಂತರ ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ನಾಯಕರೊಂದಿಗೆ ಸಮಾಲೋಚನೆ ನಡೆಸಿ ಲೋಕಸಭಾ ಕ್ಷೇತ್ರಗಳ ಹಂಚಿಕೆಯನ್ನು ಅಂತಿಮಗೊಳಿಸಲಿದ್ದಾರೆ. ಆ ನಂತರ ಅಭ್ಯರ್ಥಿಗಳ ಆಯ್ಕೆಯೂ ಅಂತಿಮಗೊಳ್ಳಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಹಾಸನ, ಮಂಡ್ಯ, ತುಮಕೂರು, ಕೋಲಾರ ಸೇರಿದಂತೆ ನಾಲ್ಕೈದು ಕ್ಷೇತ್ರಗಳಲ್ಲಿ ಸ್ರ್ಪಧಿಸಲು ಜೆಡಿಎಸ್ ಸಿದ್ಧತೆ ನಡೆಸಿದೆ. ಉಳಿದ ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಲಿದೆ. ಜಂಟಿ ಪ್ರಚಾರ ನಡೆಸುವ ಮೂಲಕ ಎನ್‍ಡಿಎ ಮೈತ್ರಿಕೂಟವು ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಜಯಗಳಿಸಬೇಕು ಎಂಬ ಉದ್ದೇಶ ಹೊಂದಿವೆ.

ಇದಕ್ಕಾಗಿ ಕ್ಷೇತ್ರ ಹಂಚಿಕೆಯಲ್ಲಿ ವ್ಯತ್ಯಾಸವಾದರೂ ಹೊಂದಾಣಿಕೆ ಮಾಡಿಕೊಂಡು ಹೋಗಲು ಸಿದ್ಧವಿವೆ. ಹೀಗಾಗಿ ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಮಣೆ ಹಾಕಲು ವರಿಷ್ಠರು ನಿರ್ಧರಿಸಿದ್ದಾರೆ ಎಂದು ಜೆಡಿಎಸ್ ಮೂಲಗಳು ಹೇಳಿವೆ.

RELATED ARTICLES

Latest News