ಬೆಂಗಳೂರು,ಜ.11- ರಾಜ್ಯದ ಎಲ್ಲಾ ಲಾರಿ ಮಾಲೀಕರ ಸಂಘದವರು ಸಭೆ ಸೇರಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಚರ್ಚಿಸಿ ಜ.17 ರಿಂದ ನಮ್ಮ ಬೇಡಿಕೆ ಈಡೇರುವ ವರೆಗೂ ವಾಹನಗಳನ್ನು ಓಡಿಸದಿರಲು ನಿರ್ಧರಿಸಿದ್ದೇವೆ ಎಂದು ದಕ್ಷಿಣ ಭಾರತ ಲಾರಿ ಮಾಲೀಕರ ಸಂಘಟನೆ ಹೇಳಿದೆ. ನಗರದಲ್ಲಿಂದು ಕರ್ನಾಟಕ , ಕೇರಳ, ಆಂಧ್ರ, ತಮಿಳುನಾಡು, ಪಾಂಡಿಚೇರಿ ರಾಜ್ಯಗಳ ಲಾರಿ ಮಾಲೀಕರ ಸಂಘಟ ನೆಗಳ ಮುಖಂಡರು ಸಭೆ ನಡೆಸಿ ಜ.17ರಿಂದ ಅರ್ನಿಷ್ಟಾವಧಿ ಲಾರಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.
ಈಗಾಗಲೆ ದೇಶದ ಉತ್ತರ ಭಾಗದಲ್ಲಿ ಯಶಸ್ವಿಯಾಗಿ ಮುಷ್ಕರ ನಡೆದಿದೆ. ಆದರೆ ನಮ್ಮ ರಾಜ್ಯದಲ್ಲಿನ ಸರ್ಕಾರದ ಕಣ್ಣು ತೆರೆಸಲು ಈ ಮುಷ್ಕರ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಇತ್ತೀಚೆಗೆ ಕೇಂದ್ರ ಸರ್ಕಾರವು ತಂದಿದ್ದ ಭಾರತೀಯ ನ್ಯಾಯ ಸಂಹಿತೆಯ ಕಲಂ 106ರ ಉಪವಿ 1 ಮತ್ತು 2ಅನ್ನು ಸದ್ಯ ನಿಲ್ಲಿಸಿದೆ. ಆದರೆ ಇದನ್ನು ತಟಸ್ಥಗೊಳಿಸಬೇಕು. ಇನ್ನು ರಾಜ್ಯಸರ್ಕಾರದ ಬೇಡಿಕೆಯಲ್ಲಿ ಸಾರಿಗೆ ಇಲಾಖೆಯು ರಾಜ್ಯದ ಗಡಿ ಭಾಗಗಳಲ್ಲಿರುವ ಎಲ್ಲಾ ಸಾರಿಗೆ ಇಲಾಖೆ ತಪಾಸಣೆ ಠಾಣೆಗಳನ್ನು ತೆಗೆದುಹಾಕಬೇಕು.
ನೈತಿಕ ಪೊಲೀಸ್‍ಗಿರಿ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಪರಮೇಶ್ವರ್ ಸೂಚನೆ
ಓವರ್ ಪ್ರೊಜೆಕ್ಷನ್‍ಗೆ ವಿಧಿಸುತ್ತಿರುವ 20,000ರೂ. ದಂಡವನ್ನು ಕಡಿಮೆ ಮಾಡಬೇಕು. ಡಿಎಸ್‍ಎ ಕೇಸುಗಳು ಎಲ್ಲೇ ಇದ್ದರೂ ಸಹ ಅದನ್ನು ವಾಹನ ಮಾಲೀಕರು ತಮ್ಮ ಮೂಲ ಕಚೇರಿಯಲ್ಲಿ ಮುಗಿಸಿಕೊಳ್ಳಲು ಅವಕಾಶ ನೀಡಬೇಕು. ಬೆಂಗಳೂರು ನಗರದಲ್ಲಿ ಸರಕು ಸಾಗಾಣಿಕೆ ವಾಹನಗಳ ನಗರ ಪ್ರವೇಶಕ್ಕೆ ದಿನದ ಕೆಲವು ಸಮಯದಲ್ಲಿ ಮಾಡಿರುವ ನಿಬರ್ಂಧವನ್ನು ಸಂಪೂರ್ಣವಾಗಿ ಕೈಬಿಡಬೇಕು. ಅಪಘಾತ ನಡೆದಾಗ ವಾಹನದ ಚಾಲಕನ ಚಾಲನಾ ಪತ್ರವನ್ನು ವಶಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು ಹಾಗೂ ಅಪಘಾತ ನಡೆದ ನಂತರ ವಶಪಡಿಸಿಕೊಂಡ ವಾಹನ ಮತ್ತು ಚಾಲಕನನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು ಮತ್ತು ಚಾಲಕನ ಚಾಲನಾ ಪರವಾನಗಿಯನ್ನು ಅಮಾನತಿನಲ್ಲಿಡುವಂತೆ ಪ್ರಾದೇಶಿಕ ಸಾರಿಗೆ ಅಕಾರಿಗಳಿಗೆ ಪತ್ರ ಬರೆಯುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಹೊರ ರಾಜ್ಯಗಳ ವಾಹನಗಳು ನಮ್ಮ ರಾಜ್ಯದಲ್ಲಿ ಅಪಘಾತಕ್ಕೆ ಈಡಾದಾಗ, ವಾಹನ ಮತ್ತು ಚಾಲಕನ ಬಿಡುಗಡೆಗೆ ಸ್ಥಳೀಯ ಭದ್ರತೆ ಮತ್ತು ಜಾಮೀನು ಕೇಳುವುದನ್ನು ನಿಲ್ಲಿಸಬೇಕು. ವಾಹನಗಳು ಬ್ರೇಕ್‍ಡೌನ್ ಆಗಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ರಸ್ತೆ ಬದಿಯಲ್ಲಿ ನಿಂತಿದ್ದರೂ ವಾಹನಗಳನ್ನು ವಶಪಡಿಸಿಕೊಂಡು ಕಲಂ 283ರಡಿಯಲ್ಲಿ ಕೇಸು ದಾಖಲಿಸುವುದನ್ನು ನಿಲ್ಲಿಸಬೇಕು.
ಹೆದ್ದಾರಿಯಲ್ಲಿ ವಾಹನಗಳ ನಿಲುಗಡೆ ಮಾಡಿದಾಗ ಸರಕುಗಳ ಕಳ್ಳತನ ಮತ್ತು ವಾಹನದ ಡೀಸೆಲ್ ಮತ್ತು ಬಿಡಿ ಭಾಗಗಳು ಕಳ್ಳತನವಾದಾಗ ಮಾಲೀಕರು ಠಾಣೆಗೆ ತೆರಳಿ ದೂರು ನೀಡಿದಾಗ ಅದಕ್ಕೆ ಎಫ್‍ಐಆರ್ ದಾಖಲಿಸಬೇಕು ಎಂಬ ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಲಾಗಿದೆ.