Homeರಾಜ್ಯನೇಣು ಬಿಗಿದುಕೊಂಡು ಎಸ್‌‍ಡಿಆರ್‌ಎಫ್‌ ಸಿಪಿಐ ಆತ್ಮಹತ್ಯೆ

ನೇಣು ಬಿಗಿದುಕೊಂಡು ಎಸ್‌‍ಡಿಆರ್‌ಎಫ್‌ ಸಿಪಿಐ ಆತ್ಮಹತ್ಯೆ

SDRF CPI commits suicide by hanging

ಬೆಳಗಾವಿ,ಮೇ 28- ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌‍ಡಿಆರ್‌ಎ್‌‍)ಯ ಸಿಪಿಐ ಶ್ರೀಶೈಲ ಚೌಗಲೆ (37) ಅವರು ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಮ ನಗರದಲ್ಲಿ ಇಂದು ನಡೆದಿದೆ.

ಚೌಗಲೆ ಅವರು ಇಂದು ಬೆಳಗ್ಗೆ ಮನೆಯ ಕೊಠಡಿಯ ಬಾಗಿಲು ಹಾಕಿಕೊಂಡಿದ್ದ ವೇಳೆ ಅನುಮಾನಗೊಂಡ ಪತ್ನಿ ತಕ್ಷಣವೇ ಎಸ್‌‍ಡಿಆರ್‌ಎ್‌‍ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಕೊಠಡಿಯ ಬಾಗಿಲು ಮುರಿದು ನೋಡಿದಾಗ ನೇಣು ಹಾಕಿಕೊಂಡಿರುವುದು ಕಂಡು ಬಂದಿದೆ. ತಕ್ಷಣ ಅವರನ್ನು ನೇಣಿನಿಂದ ಕೆಳಗಿಳಿಸಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದರಾದರೂ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಆತಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್‌‍ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.ಘಟನೆ ಕುರಿತು ಉದ್ಯಮಬಾಗ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತರ ಆತಹತ್ಯೆಗೆ ಕಾರಣವೇನು ಎಂಬುದು ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಿದೆ.

RELATED ARTICLES

Latest News