Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-05-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-05-2026)

Today's Horoscope

ನಿತ್ಯ ನೀತಿ : ಹೊಟ್ಟೆಯಲ್ಲಿ ಹೋದ ವಿಷ ಒಬ್ಬರನ್ನು ಮಾತ್ರ ಸಾಯಿಸುತ್ತದೆ. ಆದರೆ ಕಿವಿಯಲ್ಲಿ ಹೋದ ವಿಷ ಬಹಳಷ್ಟು ಸಂಬಂಧಗಳನ್ನು ಹಾಳು ಮಾಡುತ್ತದೆ. ಅದಕ್ಕೆ ಯೋಚನೆ ಮಾಡಿ ಮಾತಾಡಿ.

ಪಂಚಾಂಗ : ಭಾನುವಾರ, 31-05-2026
ಪರಾಭವ ನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀಷ / ಮಾಸ: ಅಧಿಕ ಜ್ಯೇಷ್ಠ / ಪಕ್ಷ: ಶುಕ್ಲ / ತಿಥಿ: ಹುಣ್ಣಿಮೆ / ನಕ್ಷತ್ರ: ಅನುರಾಧಾ / ಯೋಗ: ಸಿದ್ಧಪೂರ್ಣ / ಕರಣ: ಬಾಲವ
ಸೂರ್ಯೋದಯ – ಬೆ.5.53
ಸೂರ್ಯಾಸ್ತ – 06.43
ರಾಹುಕಾಲ – 4.30-6.00
ಯಮಗಂಡ ಕಾಲ – 12.00- 1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ
: ಕೆಲವು ಕಾರಣಗಳಿಂದ ತೊಂದರೆಗೊಳಗಾಗಬಹುದು. ಪೋಷಕರ ಆಶೀರ್ವಾದ ಪಡೆಯಿರಿ.
ವೃಷಭ: ವೃತ್ತಿಜೀವನದಲ್ಲಿ ಅನೇಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಎಚ್ಚರಿಕೆಯಿಂದಿರಿ.
ಮಿಥುನ: ಹಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ನೆರೆಹೊರೆಯವರೊಂದಿಗೆ ಹೆಚ್ಚು ಜಾಗರೂಕರಾಗಿರಿ.

ಕಟಕ: ಧಾರ್ಮಿಕ ಕಾರ್ಯ ಗಳಲ್ಲಿ ಆಸಕ್ತಿ ಹೆಚ್ಚಲಿದೆ. ಕುಟುಂಬದಲ್ಲಿ ಪೋಷಕರ ಬೆಂಬಲ ಸಿಗಲಿದೆ.
ಸಿಂಹ: ವ್ಯವಹಾರದಲ್ಲಿ ಹೂಡಿಕೆ ಮಾಡಿದ್ದಲ್ಲಿ ಹಣ ಸಂಗ್ರಹಿಸುವಲ್ಲಿ ಯಶಸ್ವಿಯಾಗುವಿರಿ.
ಕನ್ಯಾ: ತಾಯಿ ಮತ್ತು ಹಿರಿ ಯರ ಪಾದಗಳನ್ನು ಸ್ಪರ್ಶಿಸಿ ಆಶೀರ್ವಾದ ಪಡೆಯಿರಿ.

ತುಲಾ: ಸೀಯರಿಗೆ ತವರು ಮನೆಯಿಂದ ಆಸ್ತಿ ಅಥವಾ ಹಣ ದೊರೆಯುವ ಅವಕಾಶಗಳು ಹೆಚ್ಚಾಗಿವೆ.
ವೃಶ್ಚಿಕ: ಆರೋಗ್ಯದ ಕೊರತೆಯಿಂದ ಹಣಕಾಸಿನ ಸ್ಥಿತಿಯೂ ದುರ್ಬಲಗೊಳ್ಳುವ ಸಾಧ್ಯತೆ ಇದೆ.
ಧನುಸ್ಸು: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.

ಮಕರ: ಖರ್ಚುಗಳು ಸ್ವಲ್ಪ ಹೆಚ್ಚಾಗಬಹುದು, ಆದರೆ ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ.
ಕುಂಭ: ಅನಗತ್ಯ ಅತಿಥಿಗಳ ಆಗಮನದಿಂದ ವಿದ್ಯಾರ್ಥಿಗಳು ವ್ಯರ್ಥವಾಗಿ ಕಾಲ ಕಳೆಯುವರು.
ಮೀನ: ಉದ್ಯೋಗ ಬದಲಿಸಲು ಯೋಚಿಸುತ್ತಿರು ವವರು ಬುದ್ಧಿವಂತಿಕೆಯಿಂದ ಹೆಜ್ಜೆ ಇಡಬೇಕು.

RELATED ARTICLES

Latest News