Homeಅಂತಾರಾಷ್ಟ್ರೀಯವಿವಾಹವಾದ ಕೆಲವೇ ಗಂಟೆಗಳಲ್ಲಿ ಹೆಲಿಕಾಫ್ಟರ್‌ ಪತನದಲ್ಲಿ ಭಾರತೀಯ ಮೂಲದ ವರ ಸಾವು

ವಿವಾಹವಾದ ಕೆಲವೇ ಗಂಟೆಗಳಲ್ಲಿ ಹೆಲಿಕಾಫ್ಟರ್‌ ಪತನದಲ್ಲಿ ಭಾರತೀಯ ಮೂಲದ ವರ ಸಾವು

Indian Origin Pilot Killed in US Crash Hours After Wedding

ಅಟ್ಲಾಂಟಾ, ಜೂ.1 ವಿವಾಹದ ಕೆಲವೇ ಗಂಟೆಗಳಲ್ಲಿ ಭಾರತೀಯ ಮೂಲದ ವರ ಹೆಲಿಕಾಫ್ಟರ್‌ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಅಮೆರಿಕದ ಜಾರ್ಜಿಯಾದಲ್ಲಿ ನಡೆದಿದೆ.

ಈ ಭೀಕರ ಹೆಲಿಕಾಪ್ಟರ್‌ ಅಪಘಾತದಲ್ಲಿ ಡೆಲ್ಟಾ ಏರ್‌ಲೈನ್‌್ಸನಲ್ಲಿ ಪೈಲಟ್‌ ಆಗಿದ್ದ ಡೇವ್‌ ಫಿಜಿ ಮೃತಪಟ್ಟಿದ್ದರೆ, ನವವಧು ಜೆಸ್ನಿ ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೇರಳ ಮೂಲದ ಈ ದಂಪತಿ ವಿವಾಹವು ಡಾಸನ್‌ವಿಲ್ಲೆಯ ದಿ ರೆವೆರೆ ಕಲ್ಯಾಣ ಮಂಟಪದಲ್ಲಿ ನೂರಾರು ಅತಿಥಿಗಳ ಸಮ್ಮುಖದಲ್ಲಿ ಅತ್ಯಂತ ವೈಭವದಿಂದ ನೆರವೇರಿತ್ತು. ವಿವಾಹದ ಬಳಿಕ ದಂಪತಿ ಹೋಟೆಲ್‌ಗೆ ತೆರಳಲು ಹೆಲಿಕಾಪ್ಟರ್‌ ಏರಿದ್ದರು. ಆದರೆ, ಮಳೆ ಮತ್ತು ದಟ್ಟವಾದ ಮಂಜಿನ ಕಾರಣದಿಂದಾಗಿ ಗೋಚರತೆ ಕಡಿಮೆಯಾಗಿ, ಹೆಲಿಕಾಪ್ಟರ್‌ ಡಾಸನ್‌ವಿಲ್ಲೆಯ ದಟ್ಟ ಅರಣ್ಯ ಹಾಗೂ ಪರ್ವತ ಪ್ರದೇಶದಲ್ಲಿ ಪತನಗೊಂಡಿದೆ.

ದಟ್ಟವಾದ ಕಾಡಿನ ಕಾರಣದಿಂದಾಗಿ ರಕ್ಷಣಾ ಕಾರ್ಯಾಚರಣೆ ಅತ್ಯಂತ ಸವಾಲಾಗಿತ್ತು. ಸುಮಾರು ಐದು ಗಂಟೆಗಳ ಕಾಲ ಅವಶೇಷಗಳು ಮತ್ತು ಬಿದ್ದ ಮರಗಳ ಅಡಿಯಲ್ಲಿ ಸಿಲುಕಿಕೊಂಡಿದ್ದ ನವವಧು ಜೆಸ್ನಿಯನ್ನು ರಕ್ಷಣಾ ಸಿಬ್ಬಂದಿ ಆಫ್‌‍-ರೋಡ್‌ ವಾಹನಗಳ ಸಹಾಯದಿಂದ ಅತ್ಯಂತ ಶ್ರಮಪಟ್ಟು ಹೊರತೆಗೆದಿದ್ದಾರೆ.

ವೃತ್ತಿಯಲ್ಲಿ ನರ್ಸ್‌ ಆಗಿರುವ ಜೆಸ್ನಿಗೆ ದೇಹದಾದ್ಯಂತ ತೀವ್ರ ಗಾಯಗಳಾಗಿದ್ದರೂ, ಯಾವುದೇ ಮೂಳೆ ಮುರಿತ ಸಂಭವಿಸದೆ ಬದುಕುಳಿದಿರುವುದು ವೈದ್ಯಕೀಯ ಪವಾಡವೇ ಸರಿ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತನಿಖೆ ಆರಂಭ ನಾಲ್ಕು ದಶಕಗಳಿಂದ ಅತ್ಯುತ್ತಮ ಸುರಕ್ಷತಾ ದಾಖಲೆ ಹೊಂದಿದ್ದ ಪ್ರೆಸ್ಟೀಜ್‌ ಹೆಲಿಕಾಪ್ಟರ್ಸ್‌ ಸಂಸ್ಥೆಗೆ ಸೇರಿದ ರಾಬಿನ್ಸನ್‌ 66 ಹೆಲಿಕಾಪ್ಟರ್‌ ಇದಾಗಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿಯಲು ಅಮೆರಿಕದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿಯು ತನಿಖೆ ಆರಂಭಿಸಿದೆ. ಇನ್ನು 30 ದಿನಗಳಲ್ಲಿ ಇದರ ಪ್ರಾಥಮಿಕ ವರದಿ ಹೊರಬರಲಿದೆ.

RELATED ARTICLES

Latest News