ಬೆಂಗಳೂರು, ಜೂ.2- ಕಾವೇರಿ ನದಿ ನೀರು ಹಂಚಿಕೆ ತೀರ್ಪಿಗೆ ಸಂಬಂಧಿಸಿದಂತೆ ಕಾವೇರಿ ನದಿ ರಕ್ಷಣಾ ಸಮಿತಿಯಿಂದ ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ಮರುಪರಿಶೀಲನಾ ರಿಟ್ ಅರ್ಜಿಯನ್ನು ಸಲ್ಲಿಕೆ ಮಾಡಲಾಗಿದೆ.
ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಎನ್. ಗೋಪಾಲಗೌಡರ ಬೆಂಗಳೂರಿನ ಕಚೇರಿಯಲ್ಲಿ ನಡೆದಿದ್ದ ಪೂರ್ವಭಾವಿ ಸಭೆಯ ನಿರ್ಣಯದಂತೆ ಈ ಕಾನೂನು ಹೋರಾಟವನ್ನು ಮುಂದುವರಿಸಲಾಗಿದೆ.
ಆದಿಚುಂಚನಗಿರಿ ಮಠದ ಡಾ. ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಎನ್. ಗೋಪಾಲಗೌಡರು ಹಾಗೂ ಡಾ. ನಿಶ್ಚಲಾನಂದನಾಥ ಮಹಾ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಈ ಮಹತ್ವದ ಹೆಜ್ಜೆ ಇಡಲಾಗಿದೆ.
ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯವಾದಿಗಳಾದ ಬ್ರಿಜೇಶ್ ಕಾಳಪ್ಪ, ನೀರಾವರಿ ತಜ್ಞರು ಹಾಗೂ ಮಾಜಿ ಮುಖ್ಯಮಂತ್ರಿಗಳ ಸಲಹೆಗಾರ ವೆಂಕಟರಾಮು, ಸಮಿತಿಯ ಹಿರಿಯ ಉಪಾಧ್ಯಕ್ಷ ಅಂದಾನಪ್ಪ ಲಗ್ಗೆರೆ ಹಾಗೂ ಕಾವೇರಿ ನದಿ ರಕ್ಷಣಾ ಸಮಿತಿಯ ಅಧ್ಯಕ್ಷ ಹೆಚ್.ಕೆ.ರಾಮು ರವರುಗಳ ನೇತೃತ್ವದಲ್ಲಿ, ನವದೆಹಲಿಯ ಸುಪ್ರೀಂಕೋರ್ಟಿನ ಹಿರಿಯ ನ್ಯಾಯವಾದಿಗಳಾದ ಗುರುದತ್ತ ಅಂಕೋಲ್ಕರ್ ಅವರ ಮೂಲಕ ಈ ರಿಟ್ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಸಮಿತಿ ತಿಳಿಸಿದೆ.
