Homeರಾಷ್ಟ್ರೀಯದಕ್ಷಿಣ ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭೀಕರ ಅಗ್ನಿ ಅವಘಡ, 21 ಮಂದಿ ಸಾವು

ದಕ್ಷಿಣ ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭೀಕರ ಅಗ್ನಿ ಅವಘಡ, 21 ಮಂದಿ ಸಾವು

Fire breaks out in south Delhi restaurant, foreigners among 18 killed

ನವದೆಹಲಿ, ಜೂ.3- ದಕ್ಷಿಣ ದೆಹಲಿಯ ಮಾಳವೀಯ ನಗರ ಪ್ರದೇಶದಲ್ಲಿರುವ ರೆಸ್ಟೋರೆಂಟ್‌ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 21 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಲೆಮನ್‌ ಗ್ರೀನ್‌ ರೆಸ್ಟೋರೆಂಟ್‌ ಎಂಬ ರೆಸ್ಟೋರೆಂಟ್‌ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ.ಬೆಳಿಗ್ಗೆ ಸುಮಾರು 8.50 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು,ತಕ್ಷಣ ಹಲವು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಳ್ಳಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತ 18 ಮಂದಿಯಲ್ಲಿ ಕೆಲವರು ಉಸಿರುಗಟ್ಟಿ ,ಕೆಲವರು ಸುಟ್ಟ ಗಾಯದಿಂದ ಮೃತಪಟ್ಟಿದ್ದಾರೆ.ಬಹುತೇಖರು ವಿದೇಶಿ ಪ್ರಜೆಗಳು ಎಂದು ಗೊತ್ತಾಗಿದೆ.ನೆಲಮಾಳಿಗೆಯಲ್ಲಿ ಸಿಲುಕಿದ್ದ ಮೂವರನ್ನು ರಕ್ಷಿಸಲಾಗಿದೆ.ಗಾಯಾಳುಗಳನ್ನು ಸಿಎಟಿಎಸ್‌‍ ಆಂಬುಲೆನ್ಸ್ ಗಳ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ತಕ್ಷಣದ ಮಾಹಿತಿ ಲಭ್ಯವಾಗಿಲ್ಲ.

ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ಅಧಿಕಾರಿಗಳು ನಿರೀಕ್ಷಿಸುತ್ತಿದ್ದಾರೆ.
ಅಗ್ನಿ ಅವಘಡದ ನಂತರ ಸ್ಥಳದಲ್ಲಿ ರಕ್ಷಣಾ ಹಾಗೂ ಪರಿಶೀಲನಾ ಕಾರ್ಯಾಚರಣೆ ಮುಂದುವರಿದಿದೆ.

ಮೃತರಲ್ಲಿ ಮಧ್ಯ ಏಷ್ಯಾ ಮತ್ತು ಆಫ್ರಿಕಾದ ಹಲವು ದೇಶಗಳ ವಿದೇಶಿ ನಾಗರಿಕರೂ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಲವರು ಗಂಭೀರ ಸ್ಥಿತಿಯಲ್ಲಿರುವುದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಅಗ್ನಿ ಅವಘಡದ ಬಳಿಕ 40ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ 21 ಮಂದಿಯನ್ನು ವೈದ್ಯರು ಆಸ್ಪತ್ರೆಗೆ ತಲುಪುವ ಮುನ್ನವೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.

ಪ್ರತ್ಯಕ್ಷದರ್ಶಿಯೊಬ್ಬರು, ಱಱಬೆಳಿಗ್ಗೆ ಸುಮಾರು 9.30ಕ್ಕೆ ಕಟ್ಟಡದಿಂದ ಬೆಂಕಿ ಮತ್ತು ದಟ್ಟ ಹೊಗೆ ಹೊರಬರುತ್ತಿರುವುದನ್ನು ನೋಡಿದೆ. ನಾಲ್ಕರಿಂದ ಆರು ಮಂದಿ ಕಿಟಕಿಯ ಗಾಜು ಒಡೆದು ಕೆಳಗೆ ಜಿಗಿದು ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದರು.ತುರ್ತು ಸೇವೆಗಳು ಆಗಮಿಸುವ ಮುನ್ನ ಸ್ಥಳೀಯ ನಿವಾಸಿಗಳು ರಕ್ಷಣಾ ಕಾರ್ಯದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಹಾಸಿಗೆ ವ್ಯಾಪಾರಿಯೊಬ್ಬರು ಕಟ್ಟಡದಿಂದ ಜಿಗಿಯುವವರ ರಕ್ಷಣೆಗೆ ನೆಲದ ಮೇಲೆ ಹಾಸಿಗೆಗಳನ್ನು ಹಾಸಿದ್ದರೆ, ಇತರರು ಗಾಯಾಳುಗಳಿಗೆ ನೆರವಾಗಿದ್ದಾರೆ.

RELATED ARTICLES

Latest News