Homeರಾಜ್ಯಪ್ರಮಾಣವಚನಕ್ಕೂ ಮುನ್ನ ಮಾಜಿ ಪ್ರಧಾನಿ ದೇವೇಗೌಡರ ಆಶೀರ್ವಾದ ಪಡೆದ ಡಿಕೆಶಿ

ಪ್ರಮಾಣವಚನಕ್ಕೂ ಮುನ್ನ ಮಾಜಿ ಪ್ರಧಾನಿ ದೇವೇಗೌಡರ ಆಶೀರ್ವಾದ ಪಡೆದ ಡಿಕೆಶಿ

DKshi received the blessings of former Prime Minister Deve Gowda

ಬೆಂಗಳೂರು, ಜೂ.3- ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಕಾಂಗ್ರೆಸ್‌‍ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್‌ರವರು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಆಶೀರ್ವಾದ ಪಡೆದರು.

ಇಂದು ಮಧ್ಯಾಹ್ನ ಪದನಾಭನಗರದ ಗೌಡರ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ರವರು ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.ದೇವೇಗೌಡರು ಡಿ.ಕೆ.ಶಿವಕುಮಾರ್‌ರವರಿಗೆ ಶಾಲು ಹೊದಿಸಿ ಶುಭ ಹಾರೈಸಿದರು. ಇದಕ್ಕೂ ಮುನ್ನ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ, ಅವರನ್ನು ಭೇಟಿ ಮಾಡಿ ಡಿ.ಕೆ.ಶಿವಕುಮಾರ್‌ ಆಶೀರ್ವಾದ ಪಡೆದರು.

ಈ ಇಬ್ಬರೂ ನಾಯಕರನ್ನು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಡಿ.ಕೆ.ಶಿವಕುಮಾರ್‌ ಆಹ್ವಾನಿಸಿದರು.ರಾಜಕೀಯ ವೈರತ್ವವನ್ನು ಮರೆತು ದೇವೇಗೌಡರು, ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಡಿ.ಕೆ.ಶಿವಕುಮಾರ್‌ ಆಶೀರ್ವಾದ ಪಡೆದಿರುವುದು ಮೆಚ್ಚುಗೆಗೆ ಪಾತ್ರವಾಯಿತು.

RELATED ARTICLES

Latest News