Homeಬೆಂಗಳೂರುಬೆಂಗಳೂರಿನ ಸಂಚಾರಿ ಪೊಲೀಸರಿಗೆ ಎಸಿ ಹೆಲ್ಮೆಟ್‌

ಬೆಂಗಳೂರಿನ ಸಂಚಾರಿ ಪೊಲೀಸರಿಗೆ ಎಸಿ ಹೆಲ್ಮೆಟ್‌

AC helmets for Bengaluru traffic police

ಬೆಂಗಳೂರು, ಜೂ.4- ನಗರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಉಷ್ಣಾಂಶದಲ್ಲಿ ಕರ್ತವ್ಯ ನಿರ್ವಹಿಸುವ ಸಂಚಾರಿ ಪೊಲೀಸ್‌‍ ಸಿಬ್ಬಂದಿಗಳಿಗೆ ಬೆಂಗಳೂರು ಉತ್ತರ ನಗರ ಪಾಲಿಕೆ ಎಸಿ ಹೆಲೆಟ್‌ ಸೇರಿದಂತೆ ಕೂಲಿಂಗ್‌ ಕಿಟ್‌ಗಳನ್ನು ವಿತರಿಸಿದೆ.

ನಗರ ಪಾಲಿಕೆ ಆಯುಕ್ತ ಪೊಮಲ ಸುನಿಲ್‌ ಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಸಿಲ ಪರಿಣಾಮದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು, ಹೀಟ್‌ ಸ್ಟ್ರೆಸ್‌‍ ಲಕ್ಷಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪೊಲೀಸ್‌‍ ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಯಿತು.

ಹವಾಮಾನ ಬದಲಾವಣೆ ಮತ್ತು ಏರುತ್ತಿರುವ ತಾಪಮಾನದ ಪರಿಣಾಮವಾಗಿ ಹೊರಾಂಗಣದಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಆರೋಗ್ಯ ರಕ್ಷಣೆ ಅತ್ಯಗತ್ಯವಾಗಿದೆ ಎಂದು ಸುನಿಲ್‌ಕುಮಾರ್‌ ಹೇಳಿದರು.

ಈ ಹಿಂದೆ ಪೌರಕಾರ್ಮಿಕರಿಗೆ ಆರೋಗ್ಯ ರಕ್ಷಣಾ ಕಿಟ್‌ಗಳನ್ನು ವಿತರಿಸಲಾಗಿದ್ದು, ಇದೀಗ ಸಂಚಾರಿ ಪೊಲೀಸ್‌‍ ಸಿಬ್ಬಂದಿಗಳಿಗೂ ಈ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ವಿತರಿಸಲಾಗಿರುವ ಕಿಟ್‌ಗಳ ಬಳಕೆ ಮತ್ತು ಪರಿಣಾಮಕಾರಿತ್ವದ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಿಬ್ಬಂದಿಗೆ ವಿಸ್ತರಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ಸಿಬ್ಬಂದಿ ಈ ಕಿಟ್‌ಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ನಗರದಲ್ಲಿ ಶಾಖದ ಪರಿಣಾಮ ಕಡಿಮೆ ಮಾಡಲು ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳು ಹಾಗೂ ಕೆಲವು ಸರ್ಕಾರಿ ಕಚೇರಿಗಳಲ್ಲಿ ತಂಪು ವಾತಾವರಣ ಕಲ್ಪಿಸುವ ವ್ಯವಸ್ಥೆಗಳ ಜಾರಿಗೆ ಸಂಬಂಧಿಸಿದ ಯೋಜನೆಗಳನ್ನೂ ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು.

RELATED ARTICLES

Latest News