ಬೆಂಗಳೂರು, ಜೂ. 5- ಸಚಿವ ರಾಮಲಿಂಗಾರೆಡ್ಡಿ ಅವರ ಜೊತೆ ಚರ್ಚೆ ಮಾಡಿ ಗೊಂದಲವನ್ನು ಬಗೆ ಹರಿಸುತ್ತೇನೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಲಿಂಗಾರೆಡ್ಡಿ ತಮ ಸಹೋದ್ಯೋಗಿಯಾಗಿದ್ದು, ಪಕ್ಷದ ಹಿರಿಯ ನಾಯಕರು ಹಳ್ಳಿಗೆ ಹೋಗಿ ಕೆಲಸ ಮಾಡಲಾಗುವುದಿಲ್ಲ,ಬೇರೆಯೇ ಖಾತೆ ಕೊಡ ಬೇಕು ಎಂಬುದು ಅವರ ಅಭಿಪ್ರಾಯ. ಅವರ ಜೊತೆ ಚರ್ಚೆ ಮಾಡುತ್ತೇನೆ. ಗೊಂದಲವನ್ನು ಬಗೆ ಹರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಮಲಿಂಗಾರೆಡ್ಡಿ ತಮ ಉತ್ತಮ ಸ್ನೇಹಿತರು ಹಾಗೂ ಆತೀಯರು ಎಂದು ಪುನರುಚ್ಚರಿಸಿದ್ದಾರೆ. ರಾಮಲಿಂಗಾರೆಡ್ಡಿಯವರ ರಾಜೀನಾಮೆ ಹಿನ್ನೆಲೆಯಲ್ಲಿ ಕೆಲ ಬೆಂಬಲಿಗರು ಬಹಿರಂಗ ಹೇಳಿಕೆ ನೀಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಡಿ.ಕೆ.ಶಿವಕುಮಾರ್ ಪಕ್ಷದಲ್ಲಿ ಶಿಸ್ತು ಮುಖ್ಯ ಎಂದಿದ್ದಾರೆ.ಮತ್ತೊಂದೆಡೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ರಾಮಲಿಂಗಾರೆಡ್ಡಿಯವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಅವರ ಜೊತೆ ಮಾತನಾಡಿ ಸಮಸ್ಯೆ ಬಗೆ ಹರಿಸಲಾಗುವುದು ಎಂದಿದ್ದಾರೆ.
ರಾಹುಲ್‌ಗಾಂಧಿ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಮುಜುಗರ ಆಗುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕಾರಣದಲ್ಲಿ ಈ ರೀತಿ ಎಲ್ಲಾ ನಡೆಯುತ್ತದೆ. ಇಂದು ರಾಜ್ಯಸಭೆ ಮತ್ತು ವಿಧಾನಪರಿಷತ್ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಗಳು ನಡೆಯುತ್ತಿವೆ. ನಾಳೆ ರಾಮಲಿಂಗಾರೆಡ್ಡಿ ಅವರ ಜೊತೆ ಚರ್ಚೆ ಮಾಡಿ ಸಮಸ್ಯೆ ಬಗೆ ಹರಿಸಲಾಗುವುದು ಎಂದರು.
ಇದೇ ವೇಳೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಹೈಕಮಾಂಡ್ ನಾಯಕರು, ರಾಮಲಿಂಗಾರೆಡ್ಡಿ ಅವರ ಜೊತೆ ಚರ್ಚೆ ಮಾಡಿ ಗೊಂದಲ ಬಗೆ ಹರಿಸುತ್ತಾರೆ. ಅವರು ಪಕ್ಷಕ್ಕೆ ಮತ್ತು ರಾಜ್ಯಕ್ಕೆ ಬಹುಮುಖ್ಯವಾಗಿ ಬೇಕಾಗಿದ್ದಾರೆ. ಅವರ ಅನುಭವವನ್ನು ಬಳಸಿಕೊಳ್ಳಲಾಗುತ್ತದೆ. ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.
