Homeರಾಷ್ಟ್ರೀಯಬಿಜೆಪಿ ತೊರೆದು ಬಂದ ಅಣ್ಣಾಮಲೈಗೆ ತಮಿಳುನಾಡಿನಲ್ಲಿ ಭರ್ಜರಿ ಸ್ವಾಗತ

ಬಿಜೆಪಿ ತೊರೆದು ಬಂದ ಅಣ್ಣಾಮಲೈಗೆ ತಮಿಳುನಾಡಿನಲ್ಲಿ ಭರ್ಜರಿ ಸ್ವಾಗತ

After BJP exit, massive crowd welcomes Annamalai at Chennai airport

ಚೆನ್ನೈ, ಜೂ.6- ಬಿಜೆಪಿ ತೊರೆದು ಸ್ಥಳೀಯ ಪಕ್ಷ ರಚನೆ ಮಾಡಿರುವ ಸಿಂಗಂ ಖ್ಯಾತಿಯ ಅಣ್ಣಾಮಲೈಗೆ ತಮಿಳುನಾಡಿನಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ.ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಅಣ್ಣಾಮಲೈ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿ ಹಿಂತಿರುಗುತ್ತಿದ್ದಂತೆ ಅವರಿಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ.

ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಅಣ್ಣಾಮಲೈ ನೀಡಿರುವ ರಾಜೀನಾಮೆಯನ್ನು ಬಿಜೆಪಿ ಅಂಗೀಕರಿಸಿದೆ. ಈ ಮೂಲಕ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಹಗ್ಗ-ಜಗ್ಗಾಟ ಅಂತ್ಯಗೊಂಡಿದೆ.

ರಾಜೀನಾಮೆ ಅಂಗೀಕಾರವಾಗುತ್ತಿದ್ದಂತೆ ದೆಹಲಿಯಿಂದ ಚೆನ್ನೈಗೆ ಆಗಮಿಸಿದ ಅಣ್ಣಾಮಲೈ ಭರ್ಜರಿ ಸ್ವಾಗತ ಸಿಕ್ಕಿದೆ. ಬಿಜೆಪಿಗೆ ರಾಜೀನಾಮೆ ನೀಡಿದ್ದರಿಂದ ಸಂತಸಗೊಂಡಿರುವ ಬೆಂಬಲಿಗರು ಹಾಗೂ ಅಭಿಮಾನಿಗಳು ಅಣ್ಣಾಮಲೈ ಅವರನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಇದೇ ಹುಮಸ್ಸಿನಲ್ಲಿ ಅವರು ಹೊಸ ರಾಜಕೀಯ ಪಕ್ಷ ರಚನೆ ಮಾಡಿಕೊಂಡು ತಮ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ನಿರ್ಧರಿಸಿದ್ದಾರೆ.

RELATED ARTICLES
spot_img

Latest News