ಬೆಂಗಳೂರು, ಜೂ.7- ಅಡುಗೆ ಅನಿಲ ಏರಿಕೆಗಿಂತಲೂ ಕೈಗಾರಿಕೆಗಳಲ್ಲಿ ಬಳಸುವ ಅನಿಲ ಹಾಗೂ ಡೀಸೆಲ್ ದರ ಗಾಬರಿ ಉಂಟುಮಾಡುತ್ತಿದ್ದು, ವರದಿ ಪಡೆದು ಈ ಬಗ್ಗೆ ಪ್ರತಿಕ್ರಿಯಿಸುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡುಗೆ ಅನಿಲ ದರ ಏರಿಕೆ ಬಗ್ಗೆ ಪ್ರತಿಕ್ರಿಯಿಸಿದರು. ಕೇಂದ್ರ ಸರ್ಕಾರ ಕೈಗಾರಿಕೆಗಳಲ್ಲಿ ಬಳಸಲಾಗುವ ಡೀಸೆಲ್ ಮತ್ತು ಅಡುಗೆ ಅನಿಲದ ದರವನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಳ ಮಾಡಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಮ ಸಾಮಾಜಿಕ ಜಾಲತಾಣದಲ್ಲಿ, ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆಯಾದ ಬೆನ್ನಲ್ಲೇ ಗೃಹಬಳಕೆಯ ಸಿಲಿಂಡರ್ ಬೆಲೆ 3 ತಿಂಗಳ ಅವಧಿಯಲ್ಲಿ ಎರಡನೇ ಬಾರಿ 29 ರೂ.ನಷ್ಟು ಏರಿಕೆಯಾಗಿದೆ.
ಬಹುಶಃ 8 ಗಂಟೆಯ (8ಪಿಎಂ) ಪ್ರಧಾನಿಯವರು ಮತ್ತೊಮೆ ಟಿವಿಯಲ್ಲಿ ಕುಳಿತು ದೇಶದ ಜನತೆಗೆ ಕಡಿಮೆ ಊಟ ಮಾಡಿ ಎಂಬ ಆತನಿರ್ಭರತೆಯ ಉಚಿತ ಸಲಹೆ ನೀಡಬಹುದೇನೋ ಎಂದು ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ ಮಾಂಗಲ್ಯ ಕಸಿಯುತ್ತದೆ ಎಂಬ ಅತ್ಯಂತ ಕನಿಷ್ಠ ಮಟ್ಟದ ಹೇಳಿಕೆ ನೀಡಿದ್ದ ಪ್ರಧಾನಿಗಳು ಈಗ ಜನರ ಅನ್ನದ ತಟ್ಟೆಯನ್ನು ಕಸಿಯುತ್ತಿದ್ದಾರೆ. ಈ ಬೆಲೆ ಏರಿಕೆಯ ಅಚ್ಛೇ ದಿನಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರ ಗಾಢ ಮೌನವು ಜನ ಸಾಮಾನ್ಯರೆಡೆಗೆ ಅವರಿಗಿರುವ ಮಾನಸಿಕ ಕ್ರೌರ್ಯವನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
